Jai Sri Ram; ಹಿಂದೂ ಬಗ್ಗೆ ಎಚ್ಚರಿಕೆಯಿಂದ ಮಾತನಾಡಿ: ಪ್ರಿಯಾಂಕ್‌ಗೆ ಅಶೋಕ್ ತಿರುಗೇಟು
Team Udayavani, Dec 1, 2024, 6:30 AM IST
ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆಯವರೇ ಹಿಂದೂಗಳು, ಹಿಂದೂ ಧಾರ್ಮಿಕ ಗುರುಗಳ ಬಗ್ಗೆ ಸ್ವಲ್ಪ ಎಚ್ಚರಿಕೆಯಿಂದ ಮಾತನಾಡಿ. ಇತ್ತೀಚೆಗೆ ತಾವು ಎಲ್ಲದಕ್ಕೂ ಮೂಗು ತೂರಿಸಿಕೊಂಡು ಬರುವುದನ್ನು ನೋಡಿದರೆ ಬಹುಶಃ ತಾವೇ ಎಐಸಿಸಿ ಅಧ್ಯಕ್ಷರು ಎನ್ನುವ ಭ್ರಮೆಯಲ್ಲಿ ಇರುವಂತಿದೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವ್ಯಂಗ್ಯವಾಡಿದ್ದಾರೆ.
ಅಪರಾಧ ಮಾಡಿ ಜೈ ಶ್ರೀರಾಮ ಅಂದರೆ ಎಲ್ಲವೂ ಮುಚ್ಚಿ ಹೋಗುತ್ತದೆಯೇ? ಎಂದು ಪ್ರಿಯಾಂಕ್ ನೀಡಿರುವ ಹೇಳಿಕೆಗೆ ತಿರುಗೇಟು ನೀಡಿರುವ ಅಶೋಕ್, ಅಪರಾಧ ಮಾಡಿರುವುದು ಸ್ವಾಮೀಜಿ ಅಲ್ಲ. ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧದಲ್ಲಿ ಪಾಕಿಸ್ಥಾನ ಜಿಂದಾಬಾದ್ ಘೋಷಣೆ ಕೂಗಿದ್ದು ಕ್ರಿಮಿನಲ್ ಕೆಲಸ. ಸಂವಿಧಾನವನ್ನು ರಕ್ಷಿಸಬೇಕಾದ ಜಾಗದಲ್ಲಿ ಪಾಕಿಸ್ಥಾನ ಜಿಂದಾಬಾದ್ ಘೋಷಣೆ ಕೂಗಿದ ದೇಶದ್ರೋಹಿಗಳನ್ನು ಸಮರ್ಥನೆ ಮಾಡಿಕೊಂಡು ಆ ಸುದ್ದಿ ಬಿತ್ತರ ಮಾಡಿದ ಮಾಧ್ಯಮಗಳ ಮೇಲೆ ಗೂಬೆ ಕೂರಿಸಿದ್ದು ಕ್ರಿಮಿನಲ್ ಕೆಲಸವಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ನಿಮ್ಮಿಂದ ಪಾಠ ಕಲಿಯಬೇಕಾ?
ಚಂದ್ರಶೇಖರನಾಥ ಸ್ವಾಮೀಜಿಗಳು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿ ಕ್ಷಮೆ ಕೇಳಿದ ಮೇಲೂ ಎಫ್ಐಆರ್ ಹಾಕಿದ್ದೀರಿ. ಇದು ದ್ವೇಷದ ರಾಜಕಾರಣ ಅಲ್ಲದೆ ಮತ್ತೇನು? ನಿಮ್ಮಿಂದ ನಾವು ಸಂವಿಧಾನ ರಕ್ಷಣೆಯ ಪಾಠ ಕಲಿಯಬೇಕಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.