ಅಪ್ರಾಪ್ತ ದಂಪತಿ ಹೆತ್ತವರಿಗೆ ಜೈಲು
Team Udayavani, Aug 8, 2019, 3:00 AM IST
ಕೊಪ್ಪಳ: ಅಪ್ರಾಪ್ತ ದಂಪತಿಯ ತಂದೆ-ತಾಯಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರಡಿ ಯಲಬುರ್ಗಾ ತಾಲೂಕು ಹಿರಿಯ ಸಿವಿಲ್ ನ್ಯಾಯಾಲಯ ರಾಜ್ಯದಲ್ಲೇ ಪ್ರಥಮ ಬಾರಿಗೆ ಗರಿಷ್ಠ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಯಲಬುರ್ಗಾ ತಾಲೂಕಿನ ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2013, ಜ.4ರಂದು ಸಂಬಂಧಪಟ್ಟ ಅಧಿಕಾರಿಗಳ ತಿಳಿವಳಿಕೆಯ ಹೊರತಾಗಿಯೂ ಅಪ್ರಾಪ್ತ ಬಾಲಕ ಮತ್ತು ಬಾಲಕಿಯ ಮದುವೆ ನಡೆದಿತ್ತು.
ಈ ಹಿನ್ನೆಲೆಯಲ್ಲಿ ಇಬ್ಬರ ತಂದೆ-ತಾಯಿ ವಿರುದ್ಧವೂ ಕುಕನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆ ನಡೆಸಿದ ಗುರುಬಸವರಾಜ ಮತ್ತು ವಿಶ್ವನಾಥ ಹಿರೇಗೌಡರ ಅವರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. 2019ರ ಜು. 29ರಂದು ಹಿರಿಯ ಸಿವಿಲ್ ನ್ಯಾಯಾಧಿಧೀಶ ಶುಭಾ ಅವರು ವಿಚಾ ರಣೆ ನಡೆಸಿ, ಇಬ್ಬರ ಪಾಲಕರಿಗೂ ತಲಾ ಎರಡು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 10 ಸಾವಿರ ರೂ.ದಂಡ ವಿಧಿಸಿದ್ದಾರೆ.
ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕ ಅಬೀದುಲ್ಲಾ ಇಮಾಮಸಾಬ್ ಹಾದಿಮನಿ ವಾದಿಸಿದ್ದರು. ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರಡಿ ಆರೋಪಿತರಿಗೆ ಜೈಲುಶಿಕ್ಷೆ ಮತ್ತು ದಂಡ ವಿಧಿ ಸಿದ ದ್ವಿತೀಯ ಪ್ರಕರಣ ಇದಾಗಿದೆ. ಹಾಗೆಯೇ, ಗರಿಷ್ಠ ಎರಡು ವರ್ಷ ಕಠಿಣ ಜೈಲುವಾಸ ಮತ್ತು 10 ಸಾವಿರ ದಂಡ ವಿಧಿ ಸಿದ ರಾಜ್ಯದಲ್ಲೇ ಪ್ರಥಮ ಪ್ರಕರಣ ಇದಾಗಿದೆ ಎಂದು ಜಿಲ್ಲಾ ಧಿಕಾರಿ ಪಿ.ಸುನೀಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.