Actor Darshan: ದರ್ಶನ್‌ಗೆ ಜೈಲು ಆತಿಥ್ಯ: ಪ್ರಾಸಿಕ್ಯೂಷನ್‌ಗೆ ಸಿಕ್ಕಿಲ್ಲ ಅನುಮತಿ
Team Udayavani, Dec 8, 2024, 11:22 AM IST
ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಸೇರಿ 3 ಪ್ರತ್ಯೇಕ ಪ್ರಕರಣಗಳ ಸಂಬಂಧ ಜೈಲಿನ ಅಧಿಕಾರಿಗಳ ವಿರುದ್ಧ ತನಿಖೆ ಹಾಗೂ ವಿಚಾರಣೆ ನಡೆಸಲು ಆಗ್ನೇಯ ವಿಭಾಗದ ಡಿಸಿಪಿ ಸಕ್ಷಮ ಪ್ರಾಧಿಕಾರದ (ಪ್ರಾಸಿಕ್ಯೂಷನ್) ಅನುಮತಿ ಕೋರಿ ಪತ್ರ ಬರೆದಿದ್ದು, ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.
ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನ 9ಕ್ಕೂ ಹೆಚ್ಚು ಮಂದಿ ಅಧಿಕಾರಿಗಳು ಶಾಮೀಲಾಗಿರುವುದು ಸಾಬೀತಾದ ಬೆನ್ನಲ್ಲೇ ಆ ಅಧಿಕಾರಿಗಳ ವಿರುದ್ಧ ತನಿಖೆ ಹಾಗೂ ವಿಚಾರಣೆ ನಡೆಸಬೇಕಿದ್ದು, ಅನುಮತಿ ನೀಡುವಂತೆ ಒಂದೂವರೆ ತಿಂಗಳ ಹಿಂದೆಯೇ ಕಾರಾಗೃಹ ಇಲಾಖೆ ಮಹಾನಿರ್ದೇಶಕರು ಮತ್ತು ಗೃಹ ಇಲಾಖೆಗೆ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತೀಮಾ ಪತ್ರದ ಮೂಲಕ ಮನವಿ ಮಾಡಿದ್ದಾರೆ. ಆದರೆ, ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಸಕ್ಷಮ ಪ್ರಾಧಿಕಾರದ ಅನುಮತಿ ಬಂದ ಬಳಿಕ ಅಧಿಕಾರಿಗಳ ವಿಚಾರಣೆ ನಡೆಸಿ, ಆರೋಪಪಟ್ಟಿ ಸಲ್ಲಿಸಲಾಗುತ್ತದೆ. ಈ ವಿಚಾರವನ್ನು ಕೋರ್ಟ್ ಗಮನಕ್ಕೂ ತರಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸಾಮಾನ್ಯವಾಗಿ ಯಾವುದೇ ಪ್ರಕರಣ ದಾಖಲಾದ 90 ದಿನಗಳ ಒಳಗೆ ಆರೋಪಪಟ್ಟಿ ಸಲ್ಲಿಸಬೇಕು. ಆದರೆ, ನಟ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ, ಜೈಲಿನಲ್ಲಿ ಮೊಬೈಲ್ ಬಳಕೆ ಹಾಗೂ ಕಾರ್ಯಾಚರಣೆಗೆ ಬಂದ ಸಿಸಿಬಿ ಅಧಿಕಾರಿಗಳನ್ನು ತಡೆದು, ರಾತ್ರೋರಾತ್ರಿ ದರ್ಶನ್ ಹಾಗೂ ವಾಂಟೆಡ್ ಆರೋಪಿಗಳಿದ್ದ ಬ್ಯಾರಕ್‌ನಿಂದ ಬಾಕ್ಸ್‌ಗಳನ್ನು ಕೊಂಡೊಯ್ದ ಸಂಬಂಧ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಆ.26ರಂದು ಮೂರು ಪ್ರತ್ಯೇಕ ಎಫ್ಐಆರ್ ದಾಖಲಾಗಿದ್ದು, ಎರಡು ಪ್ರಕರಣದಲ್ಲಿ ನಟ ದರ್ಶನ್ ಪ್ರಮುಖ ಆರೋಪಿಯಾಗಿದ್ದಾರೆ. ಮತ್ತೂಂದು ಪ್ರಕರಣದಲ್ಲಿ ಜೈಲಿನ 7 ಅಧಿಕಾರಿಗಳು ಆರೋಪಿಗಳಾಗಿದ್ದಾರೆ.
ಈ 3 ಪ್ರಕರಣಗಳ ವಿಚಾರಣೆಗಾಗಿ ಎಸಿಪಿ ಮಟ್ಟದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆಗೆ ಸೂಚಿಸಲಾಗಿತ್ತು. ಅಧಿಕಾರಿಗಳು ದರ್ಶನ್, ವಿಲ್ಸನ್‌ಗಾರ್ಡನ್ ನಾಗ, ಕುಳ್ಳ ಸೀನಾ, ದರ್ಶನ್ ಮ್ಯಾನೇ ಜ ರ್ ನಾಗರಾಜ್, ಮತ್ತೂಬ್ಬ ರೌಡಿಶೀಟರ್ ಜಾನಿ ಅಲಿಯಾಸ್ ಜನಾರ್ಧನ್ ಹಾಗೂ ಜೈಲಿನ ಅಧಿಕಾರಿಗಳ ಹೇಳಿಕೆ ಪಡೆಯಲಾಗಿದೆ. ಆದರೆ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ, ಕಾರಾಗೃಹ ಇಲಾಖೆಗೆ ವ್ಯಾಪ್ತಿಗೆ ಬರುವುದರಿಂದ ಈ ಪ್ರಕರಣದಲ್ಲಿ ಕೇಳಿ ಬಂದಿರುವ ಸಿ ಮತ್ತು ಡಿ ದರ್ಜೆಯ ಅಧಿಕಾರಿಗಳ ವಿಚಾರಣೆಗೆ ಅನುಮತಿ ಕೋರಿ ಕಾರಾಗೃಹ ಇಲಾಖೆಯ ಮುಖ್ಯಸ್ಥರಿಗೆ ಪತ್ರ ಬರೆಯಲಾಗಿದೆ. ಹಾಗೆಯೆ ಜೈಲಿನ ಮುಖ್ಯ ಅಧೀಕ್ಷಕರು, ಅಧೀಕ್ಷಕರು, ಡಿವೈಎಸ್ಪಿ ಹಂತದ ಅಧಿಕಾರಿಗಳ ವಿಚಾರಣೆಗೆ ಗೃಹ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಕಾರಾಗೃಹದಲ್ಲಿ ಭ್ರಷ್ಟಾಚಾರ ಸಾಬೀತು?
ಪ್ರಕರಣದ ತನಿಖೆಯಲ್ಲಿ ವಿಲ್ಸನ್‌ಗಾರ್ಡನ್ ನಾಗ ಮತ್ತು ತಂಡದಿಂದ ಜೈಲಿನ ಮುಖ್ಯಸ್ಥರು ಸೇರಿ ಕೆಲ ಅಧಿಕಾರಿಗಳ ಲಕ್ಷಾಂತರ ರೂ. ಪಡೆದು ದರ್ಶನ್ ಮತ್ತು ನಾಗನಿಗೆ ವಿಶೇಷ ಆತಿಥ್ಯ ನೀಡಿದ್ದರು. ಅಲ್ಲದೆ, ಜೈಲಿನಲ್ಲಿ ಕೈದಿಗಳು ಮೊಬೈಲ್ ಬಳಕೆಗೂ ಹಣ ಪಡೆದುಕೊಂಡಿದ್ದರು. ಪ್ರಮುಖವಾಗಿ ಸಿಸಿಬಿ ಅಧಿಕಾರಿಗಳ ದಾಳಿಗೆ ಹೋದಾಗ, ಸುಮಾರು ಒಂದು ಗಂಟೆಗಳ ಕಾಲ ಗೇಟ್ ಬಳಿಯೆ ನಿಲ್ಲಿಸಿ, ಕೆಲ ಬ್ಯಾರಕ್‌ನಲ್ಲಿದ್ದ ಬಾಕ್ಸ್‌ಗಳನ್ನು ವಿಲೇವಾರಿ ಮಾಡಿರುವುದು ಉದ್ದೇಶಪೂರ್ವಕವಾಗಿಯೇ ಮಾಡಿದ್ದಾರೆ. ಹೀಗಾಗಿ ಈ ಪ್ರಕರಣಗಳಲ್ಲಿ ಜೈಲಿನ ಅಧಿಕಾರಿಗಳು ಕರ್ತವ್ಯಲೋಪ ಎಸಗಿದ್ದು, ಭಾರೀ ಭ್ರಷ್ಟಾಚಾರ ಎಸಗಿದ್ದಾರೆ ಎಂಬುದು ತನಿಖೆಯಲ್ಲಿ ಸಾಬೀತಾಗಿದೆ ಎಂದು ಹೇಳಲಾಗಿದೆ. ಮತ್ತೂಂದೆಡೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಗೃಹ ಸಚಿವ ಪರಮೇಶ್ವರ, ಕಾರಾಗೃಹ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಜೈಲಿಗೆ ಭೇಟಿ ನೀಡಿ ಪರಿಶೀಲಿಸಿದ್ದರು. ಅಲ್ಲದೆ, ಮುಖ್ಯ ಅಧೀಕ್ಷಕನಾಗಿದ್ದ ಶೇಷಮೂರ್ತಿ, ಅಧೀಕ್ಷಕ ಮಲ್ಲಿಕಾರ್ಜುನ ಸ್ವಾಮಿ ಸೇರಿ 9 ಮಂದಿ ಅಮಾನತುಗೊಳಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’
BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್.ಟಿ. ಸೋಮಶೇಖರ್
Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್. ಸಂತೋಷ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.