ಜಲವಳ್ಳಿ ವೆಂಕಟೇಶರಾವ್ ಇನ್ನಿಲ್ಲ
Team Udayavani, Mar 6, 2019, 12:30 AM IST
ಶಿರಸಿ/ಹೊನ್ನಾವರ: ಯಕ್ಷರಂಗದ ರಾಜ, ಬಡಗುತಿಟ್ಟಿನ ಮೇರು ಕಲಾವಿದ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ
ಜಲವಳ್ಳಿ ವೆಂಕಟೇಶರಾವ್ (86) ಶಿರಸಿ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಸಂಜೆ ನಿಧನರಾದರು.
ಯಕ್ಷಗಾನದಲ್ಲಿ ವಿಶಿಷ್ಟ ಛಾಪು ಮೂಡಿಸಿದ, ಮಾತುಗಾರಿಕೆ, ಹಾವ ಭಾವದಿಂದಲೇ ಪ್ರೇಕ್ಷಕರ ಮನ ಗೆದ್ದು ಹೊಸ ಪರಂಪರೆಗೆ ಕಾರಣರಾಗಿದ್ದ ವೆಂಕಟೇಶರಾವ್ 6 ದಶಕಗಳ ಕಾಲ ಸಕ್ರಿಯವಾಗಿ ರಂಗದಲ್ಲಿ ಮಿಂಚಿದವರು. ಸ್ತ್ರೀ,
ಪುರುಷ ವೇಷ, ಪುಂಡು ವೇಷ, ನಾಯಕ, ಪ್ರತಿ ನಾಯಕ ಪಾತ್ರಗಳನ್ನು ಕಟ್ಟಿಕೊಟ್ಟ ಅಪರೂಪದ ಕಲಾವಿದರಾಗಿದ್ದರು.
ಹೊನ್ನಾವರ ತಾಲೂಕಿನ ಜಲವಳ್ಳಿಯಲ್ಲಿ ಬೊಮ್ಮು ಮಡಿವಾಳ ಹಾಗೂ ಶ್ರೀದೇವಿ ಮಡಿವಾಳರ ಮಗನಾಗಿ 1933,
ನ.1ರಂದು ಜನಿಸಿದ್ದ ವೆಂಕಟೇಶರಾವ್ ಅಪ್ಪಟ ಕನ್ನಡದ ಕಲೆಗಾಗಿ ಬದುಕು ಸವೆಸಿದ್ದರು.
ಯಕ್ಷಗಾನ ಕಲಾವಿದರೂ ಆಗಿದ್ದ ಹೈಗುಂದ ಡಾಕ್ಟರ್ ಮಾರ್ಗ ದರ್ಶನದಲ್ಲಿ ಬೆಳೆದು ತಿಮ್ಮಪ್ಪ ನಾಯ್ಕರ ಬಳಿಯೂ ಅಭ್ಯಾಸ ಮಾಡಿದವರು. ಚಿಟ್ಟಾಣಿ ರಾಮಚಂದ್ರ ಹೆಗಡೆ, ಶಂಭು ಹೆಗಡೆ, ದೇವರ ಹೆಗಡೆ, ಮಹಾಬಲ ಹೆಗಡೆ, ಗೋವಿಂದ ನಾಯ್ಕ, ಕೊಂಡದಕುಳಿ ರಾಮ ಹೆಗಡೆ ಸೇರಿ ಹಿರಿಯ ಕಲಾವಿದರ ಒಡನಾಟದಲ್ಲಿ ದ್ದವರು. ಮೃತರು ಮೂವರು ಪುತ್ರರು, ಪುತ್ರಿ, ಪತ್ನಿ ಸೇರಿ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಜಲವಳ್ಳಿಯಲ್ಲಿ ಬುಧವಾರ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ ಎಂದು ಪುತ್ರ ವಿದ್ಯಾಧರ ಜಲವಳ್ಳಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.