ಕಂಬಳಕ್ಕಾಗಿ ಹೋರಾಟ ತೀವ್ರ; ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ
Team Udayavani, Jan 23, 2017, 2:31 PM IST
ಬೆಂಗಳೂರು/ಮಂಗಳೂರು:ಕೃಷಿಯೊಂದಿಗೆ ನಂಟು ಹೊಂದಿರುವ ಕರಾವಳಿಯ ಸಾಂಪ್ರದಾಯಿಕ ಕ್ರೀಡೆ ಕಂಬಳದ ಉಳಿವಿಗಾಗಿ ರಾಜ್ಯಾದ್ಯಂತ ಹೋರಾಟ ತೀವ್ರಗೊಳ್ಳತೊಡಗಿದೆ. ತಮಿಳುನಾಡಿನ ಜನತೆ ಜಲ್ಲಿಕಟ್ಟು ನಿಷೇಧದ ವಿರುದ್ಧ ಹೋರಾಡಿ ಜಯ ಸಾಧಿಸಿರುವ ಹಿನ್ನೆಲೆಯಲ್ಲಿ ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಹೋರಾಟದ ಕಿಚ್ಚು ಹೆಚ್ಚತೊಡಗಿದೆ.
ಕರಾವಳಿ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ಅವಕಾಶ ಕೊಡಬೇಕು, ನಿಷೇಧವನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ವಾಟಾಳ್ ನಾಗರಾಜ್, ಸಾರಾ ಗೋವಿಂದು ನೇತೃತ್ವದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದವು.
29ಕ್ಕೆ ಕಾದು ನೋಡುವ:
ಮಂಗಳೂರು ಜಿಲ್ಲಾ ಕಂಬಳ ಸಮಿತಿ ಸೋಮವಾರ ಸುದ್ದಿಗೋಷ್ಠಿ ನಡೆಸಿದ್ದು, ಕಂಬಳದ ಮೇಲಿನ ನಿಷೇಧ ತೆರವುಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕಿದೆ. ಕಂಬಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಜ.29ರಂದು ತೀರ್ಪು ಪ್ರಕಟಿಸಲಿದೆ. ಒಂದು ವೇಳೆ ತೀರ್ಪು ಕಂಬಳದ ಪರವಾಗಿ ಬಂದರೆ ವಿಜಯೋತ್ಸವ, ಇಲ್ಲದಿದ್ದರೆ ಕಂಬಳದ ಗದ್ದೆಯಲ್ಲೇ ಹಕ್ಕೊತ್ತಾಯ ಎಂದು ತಿಳಿಸಿದೆ.
ಕಂಬಳದ ಮೇಲೆ ಹೇರಿರುವ ನಿಷೇಧದ ತೆರವಿಗೆ ಒತ್ತಾಯಿಸಿ ಇಂದೇ ಪ್ರತಿಭಟನೆ ನಡೆಸಲು ಆಗ್ರಹಿಸಿದ್ದರು. ಆದರೆ ಗಣರಾಜ್ಯೋತ್ಸವದವರೆಗೆ ಪ್ರತಿಭಟನೆ, ಧರಣಿ ನಡೆಸದಿರಲು ತೀರ್ಮಾನಿಸಲಾಗಿದೆ ಎಂದು ಶಾಸಕ, ಮೂಡಬಿದಿರೆ ಕಂಬಳ ಸಮಿತಿ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಕಂಬಳದ ಪರ:ಸಿಎಂ
ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳದ ಪರ ರಾಜ್ಯ ಸರ್ಕಾರವಿದೆ. ಸರ್ಕಾರ ಎಲ್ಲಾ ರೀತಿಯ ಕಾನೂನು ನೆರವು ನೀಡಲು ಸಿದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ಜಲ್ಲಿಕಟ್ಟು ರೀತಿ ಕಂಬಳಕ್ಕೂ ಅವಕಾಶ ಕೊಡಿ: ಶಿವರಾಜ್ ಕುಮಾರ್
ತಮಿಳುನಾಡಿನಲ್ಲಿ ಜಲ್ಲಿಕಟ್ಟು ನಡೆಸಲು ಅವಕಾಶ ನೀಡಲಾಗಿದೆ. ಹಾಗಾಗಿ ಕರಾವಳಿಯಲ್ಲಿಯೂ ಕಂಬಳ ನಡೆಸಲು ಅವಕಾಶ ನೀಡಬೇಕೆಂದು ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.