ನ.19 ರಿಂದ 21 ರವರೆಗೆ ಬಿಜೆಪಿಯಿಂದ ಜನಸ್ವರಾಜ್ ಯಾತ್ರೆ
ಬಿಎಸ್‌ವೈ ಸೇರಿ ನಾಲ್ಕು ನಾಯಕರ ತಂಡದಿಂದ ರಾಜ್ಯ ಪ್ರವಾಸ
Team Udayavani, Nov 6, 2021, 10:30 PM IST
ಬೆಂಗಳೂರು: ಉಪ ಚುನಾವಣೆ ಬೆನ್ನಲ್ಲೇ ಬಿಜೆಪಿ ನ.19 ರಿಂದ 21 ರವರೆಗೆ “ಜನಸ್ವರಾಜ್ ಯಾತ್ರೆ’ ರಾಜ್ಯ ಪ್ರವಾಸ ಹಮ್ಮಿಕೊಂಡಿದೆ.
ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ , ಜಗದೀಶ್ ಶೆಟ್ಟರ್ ಹಾಗೂ ಹಿರಿಯ ಸಚಿವ ಕೆ.ಎಸ್. ಈಶ್ವರಪ್ಪ ನೇತೃತ್ವದ ನಾಲ್ಕು ತಂಡಗಳು ಜನಸ್ವರಾಜ್ ಯಾತ್ರೆ ನಡೆಸಲಿವೆ.
ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಈಶ್ವರಪ್ಪ ಅವರ ತಂಡದಲ್ಲಿ ಇರಲಿದ್ದಾರೆ. ಮೂರು ದಿನ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಯಾತ್ರೆ ನಡೆಯಲಿದೆ.
ಬಿ.ಎಸ್.ಯಡಿಯೂರಪ್ಪ ನೇತೃತ್ವದ ತಂಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಚಿವರಾದ ಗೋವಿಂದ ಕಾರಜೋಳ, ಬಿ.ಶ್ರೀರಾಮುಲು, ರಾಜ್ಯ ಉಪಾಧ್ಯಕ್ಷರಾದ ತೇಜಸ್ವಿನಿ ಅನಂತಕುಮಾರ್, ಎಂ.ಬಿ.ನಂದೀಶ್ ಇರಲಿದ್ದು, ಉತ್ತರ ಕನ್ನಡ, ಹಾವೇರಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ, ಬೆಳಗಾವಿ ಪ್ರವಾಸ ಮಾಡಲಿದ್ದಾರೆ. ಎನ್.ರವಿಕುಮಾರ್ ಸಂಚಾಲಕರು, ಕೆ.ಎಸ್.ನವೀನ್ ಸಹ ಸಂಚಾಲಕರಾಗಿದ್ದಾರೆ.
ನಳಿನ್ ಕುಮಾರ್ ಕಟೀಲ್ ನೇತೃತ್ವದ ತಂಡದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ಸಚಿವರಾದ ವಿ.ಸೋಮಣ್ಣ, ಆರಗ ಜ್ಞಾನೇಂದ್ರ, ಮುರುಗೇಶ್ ನಿರಾಣಿ, ಶಾಸಕ ರಾಜೂಗೌಡ, ಎನ್.ಮಹೇಶ್, ರಾಜ್ಯ ಉಪಾಧ್ಯಕ್ಷರಾದ ಸಂಸದ ಪ್ರತಾಪ ಸಿಂಹ ಹಾಗೂ ಮಾಲೀಕಯ್ಯ ಗುತ್ತೇದಾರ್ ಇರಲಿದ್ದು, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ಪ್ರವಾಸ ಮಾಡಲಿದೆ. ಸಿದ್ದರಾಜು ಸಂಚಾಲಕರಾಗಿದ್ದು, ಎಸ್.ಕೇಶವಪ್ರಸಾದ್ ಸಹ ಸಂಚಾಲಕರಾಗಿದ್ದಾರೆ.
ಇದನ್ನೂ ಓದಿ:ಕಾಂಗ್ರೆಸ್ ಇರುವ ರಾಜ್ಯಗಳಲ್ಲಿ ಇಂಧನ ಬೆಲೆ ಇಳಿಕೆ ಆಗಿದೆಯಾ: ಪ್ರಹ್ಲಾದ ಜೋಶಿ
ಕೆ.ಎಸ್. ಈಶ್ವರಪ್ಪ ನೇತೃತ್ವದ ತಂಡದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವರಾದ ಆರ್.ಅಶೋಕ್, ಎಸ್.ಟಿ.ಸೋಮಶೇಖರ್, ಹಾಲಪ್ಪ ಆಚಾರ್, ಎಸ್.ಅಂಗಾರ, ಶಾಸಕ ಅರವಿಂದ ಲಿಂಬಾವಳಿ, ರಾಜ್ಯ ಉಪಾಧ್ಯಕ್ಷ ಎಂ.ಶಂಕರಪ್ಪ ಇರಲಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಮಂಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ ಮತ್ತು ಹಾಸನ ಪ್ರವಾಸ ಮಾಡಲಿದ್ದಾರೆ. ಅಶ್ವತ್ಥನಾರಾಯಣ ಸಂಚಾಲಕರಾಗಿದ್ದು, ವಿನಯ್ ಬಿದರೆ ಸಹ ಸಂಚಾಲಕರಾಗಿದ್ದಾರೆ.
ಜಗದೀಶ್ ಶೆಟ್ಟರ್ ನೇತೃತ್ವದ ತಂಡದಲ್ಲಿ ಕೇಂದ್ರ ಸಚಿವ ನಾರಾಯಣಸ್ವಾಮಿ, ಸಚಿವರಾದ ಡಾ.ಅಶ್ವತ್ಥನಾರಾಯಣ, ಬೈರತಿ ಬಸವರಾಜ್, ಗೋಪಾಲಯ್ಯ, ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಎಂ.ರಾಜೇಂದ್ರ ಇರಲಿದ್ದು, ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದಾರೆ. ಸಂಚಾಲಕರಾಗಿ ಮಹೇಶ್ ಟೆಂಗಿನಕಾಯಿ, ಮುನಿರಾಜು ಗೌಡ ಸಹ ಸಂಚಾಲಕರಾಗಿದ್ದಾರೆ.
ಮಂಗಳವಾರ ರಾಜ್ಯ ಪದಾಧಿಕಾರಿಗಳ ಸಭೆ
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ಸಿಂಗ್ ಅವರು ಸೋಮವಾರ ರಾಜ್ಯಕ್ಕೆ ಆಗಮಿಸಲಿದ್ದು ಮಂಗಳವಾರ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಪದಾಧಿಕಾರಿಗಳ ಸಭೆಯಲ್ಲಿ ಉಪ ಚುನಾವಣೆ ಫಲಿತಾಂಶ ಆತ್ಮಾವಲೋಕನ, “ಜನಸ್ವರಾಜ್’ ಯಾತ್ರೆಯ ರೂಪು-ರೇಷೆ, ಪ್ರವಾಸ ಸಂದರ್ಭದಲ್ಲಿ ಪ್ರಸ್ತಾಪಿಸಬೇಕಾದ ವಿಷಯಗಳು ಚರ್ಚೆಯಾಗಲಿವೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
BBK11: ನನ್ನನ್ನು ಸಾಬೀತು ಮಾಡಿಕೊಳ್ಳಲು ಅವಕಾಶ ಸಿಗಲಿಲ್ಲ: ದೊಡ್ಮನೆಯಲ್ಲಿ ಚೈತ್ರಾ ಅಳಲು..
Mangaluru: MCC ಬ್ಯಾಂಕ್ ಅಧ್ಯಕ್ಷರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ತಡೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು
Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.