ಅರ್ಜಿ ವಾಪಸ್ ಪಡೆದ ಜನಾರ್ದನ ರೆಡ್ಡಿ
Team Udayavani, Feb 27, 2019, 12:35 AM IST
ಬೆಂಗಳೂರು: ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿರುವ ಚಾರ್ಜ್‌ಶೀಟ್ ರದ್ದು ಗೊಳಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ನಾಲ್ಕು ಅರ್ಜಿಗಳನ್ನು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮಂಗಳವಾರ ವಾಪಸ್ ಪಡೆದಿದ್ದಾರೆ. ಈ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ನ್ಯಾ. ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಮಂಗಳವಾರ ಹಾಜರಾದ ಜನಾರ್ದನರೆಡ್ಡಿ ಪರ ವಕೀಲರು, ಪ್ರಕರಣಕ್ಕೆ ಸಂಬಂಧಿಸಿದ 4 ಅರ್ಜಿಗಳನ್ನು ಹಿಂಪಡೆಯುತ್ತಿರುವುದಾಗಿ ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ನ್ಯಾಯಪೀಠ ಒಪ್ಪಿಗೆ ನೀಡಿತು. ಸಿಬಿಐ ಪರ ಪಿ.ಪ್ರಸನ್ನಕುಮಾರ್ ಹಾಜರಿದ್ದರು.
ಪ್ರಕರಣವೇನು? : ಬಳ್ಳಾರಿ ಜಿಲ್ಲೆಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಿ ಅದಿರು ಸಾಗಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ ಹೆಗ್ಡೆ ಮತ್ತು ಸಿಇಸಿ ವರದಿ ಆಧರಿಸಿ ಈ ಪ್ರಕರಣ ಗಳನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಅದರಂತೆ ಸಿಬಿಐ ತನಿಖೆ ನಡೆಸಿ ವಿಚಾರಣಾ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿತ್ತು. ಅದನ್ನು ರದ್ದು ಗೊಳಿಸುವಂತೆ ಕೋರಿ ರೆಡ್ಡಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Bengaluru: ಟ್ಯೂಷನ್‌ಗೆ ಬರುತ್ತಿದ್ದ ಅಪ್ರಾಪ್ತ ಬಾಲಕಿ ಜೊತೆ ಶಿಕ್ಷಕ ಪರಾರಿ
Delhi Polls: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಕೇಜ್ರಿವಾಲ್ ವಿರುದ್ಧ ವರ್ಮಾ
Divorce Rumours: ಚಹಾಲ್ – ಧನಶ್ರೀ ದಾಂಪತ್ಯದಲ್ಲಿ ಬಿರುಕು? ಶೀಘ್ರದಲ್ಲಿ ವಿಚ್ಛೇದನ?
Aranthodu: ವ್ಯಕ್ತಿಯ ಮೇಲೆ ಕಾಡಾನೆ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.