ಜನತಾ ದರ್ಶನ ಇನ್ನು ಪ್ರತಿ ಜಿಲ್ಲೆಗೂ ವಿಸ್ತರಣೆ
Team Udayavani, Jun 6, 2018, 6:00 AM IST
ಬೆಂಗಳೂರು: ತಮ್ಮ ಹಿಂದಿನ ಅವಧಿಯಲ್ಲಿ ಜನತಾ ದರ್ಶನ ಮೂಲಕ ಜನರನ್ನು ಸೆಳೆದಿದ್ದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಈ ಬಾರಿ ಜಿಲ್ಲಾಮಟ್ಟದಲ್ಲಿ ಈ ಕಾರ್ಯ ಕ್ರಮ ಹಮ್ಮಿಕೊಳ್ಳುವುದಾಗಿ ಪ್ರಕಟಿಸಿದ್ದಾರೆ. “”ಸ್ಥಳೀಯ ಮಟ್ಟದಲ್ಲಿ ತಮ್ಮ ಸಮಸ್ಯೆಗಳು ಪರಿಹಾರವಾಗುವುದಿಲ್ಲ ಎಂಬ ಕಾರಣಕ್ಕೆ ನನ್ನಿಂದ ಅದಕ್ಕೆ ಪರಿಹಾರ ಸಿಗುತ್ತದೆ ಎಂಬ ನಿರೀಕ್ಷೆಯಿಂದ ಜನ ನಾನಿದ್ದಲ್ಲಿಗೆ ಬರುತ್ತಿದ್ದಾರೆ. ಅದರ ಬದಲು ನಾನೇ ಸಮಸ್ಯೆ ಎದುರಿಸು
ತ್ತಿ ರುವ ಜನರ ಬಳಿ ಹೋಗಿ ಅವುಗಳನ್ನು ಆಲಿಸಿ ಪರಿಹಾರ ಒದಗಿಸಲು ನಿರ್ಧರಿಸಿದ್ದೇನೆ” ಎಂದು ಮುಖ್ಯಮಂತ್ರಿ ಮಂಗಳವಾರ ಹೇಳಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಜನತಾ ದರ್ಶನ ನಡೆಸಿದ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ಜನರು ತಮ್ಮ ಕಷ್ಟ ಕಾರ್ಪಣ್ಯಗಳನ್ನು ಹೇಳಿಕೊಳ್ಳಲು ದೂರದ ಊರುಗಳಿಂದ ಬರುತ್ತಾರೆ. ಮೊದಲೇ ಸಮಸ್ಯೆಯಲ್ಲಿರುವ ಅವರು ತಮ್ಮನ್ನು ಕಾಣಲು ಅಷ್ಟು ದೂರದಿಂದ ಬರಲು ಸಾಕಷ್ಟು ಪಡಿಪಾಟಲು ಅನುಭವಿಸುತ್ತಿದ್ದಾರೆ. ತಂದೆ, ತಾಯಿ ಅಥವಾ ಗಂಡ ಇಲ್ಲದ ಹೆಣ್ಣು ಮಕ್ಕಳು ಕಷ್ಟ ಪರಿಹರಿಸುವಂತೆ ಕೇಳಲೋ ಆಥವಾ
ಶಾಲಾ-ಕಾಲೇಜು ಶುಲ್ಕ ಸಂಬಂಧ, ಉದ್ಯೋಗ, ವೈದ್ಯಕೀಯ ಸೌಲಭ್ಯ ಇನ್ನಿತರೆ ಸಹಾಯಕ್ಕಾಗಿ ದೂರದ ಊರುಗಳಿಂದ ಜನ ಬರಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲೆಗಳಿಗೂ ಪ್ರವಾಸ ತೆರಳಿ ಜಿಲ್ಲೆಗಳಲ್ಲೇ ಜನತಾ ದರ್ಶನ ನಡೆಸಲಾ ಗುವುದು. ಅಹವಾಲು ಸ್ವೀಕರಿಸಿ ಅಲ್ಲೇ ಅದನ್ನು ಅಧಿಕಾರಿಗಳಿಗೆ ನೀಡಿ ಕಾಲಮಿತಿಯೊಳಗೆ ಸಮಸ್ಯೆ ಬಗೆಹರಿಸುವಂತೆ ಸೂಚಿಸುತ್ತೇನೆ. ಈ ದೂರುಗಳ ವಿಲೇವಾರಿಗಾಗಿಯೇ ಪ್ರತ್ಯೇಕ ವ್ಯವಸ್ಥೆ ಜಾರಿಗೆ ತರುತ್ತೇನೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ
Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ
JDS protest: ಎಚ್‌ಡಿಕೆ ಕರಿಯ: ಜಮೀರ್ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ
Congress: “40 ಪರ್ಸೆಂಟ್ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.