ಜಂತಕಲ್ ಮೈನಿಂಗ್ ಪ್ರಕರಣ – ಜೂನ್ 20ರವರೆಗೆ ಹೆಚ್‌ಡಿಕೆ ನಿರಾಳ
Team Udayavani, Jun 15, 2017, 11:37 PM IST
ಬೆಂಗಳೂರು: ಜಂತಕಲ್ ಎಂಟರ್‌ಪ್ರೈಸಸ್ ಕಂಪೆನಿಗೆ ಪರವಾನಿಗೆ ನೀಡಲು ಸಹಕರಿಸಿದ ಆರೋಪ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯನ್ನು ಜೂನ್ 20ರವರೆಗೆ ಬಂಧಿಸದಂತೆ ಎಸ್‌ಐಟಿ ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶಿಸಿದೆ.
ಕುಮಾರಸ್ವಾಮಿ ಸಲ್ಲಿಸಿದ್ದ ನಿರಿಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರತ್ನಕಲಾ ಅವರಿದ್ದ ಏಕಸದಸ್ಯ ಪೀಠ ಶುಕ್ರವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಹಾಜರಿದ್ದ ಅರ್ಜಿದಾರರ ಪರ ವಕೀಲ ಹಸ್ಮತ್ ಪಾಷಾ ವಾದಿಸಿ, ಈ ಪ್ರಕರಣದಲ್ಲಿ ತಮ್ಮ ಅರ್ಜಿದಾರರ ವಿರುದ್ಧ ಎಸ್‌ಐಟಿ ಅಧಿಕಾರಿಗಳು ಮಾಡಿರುವ ಆರೋಪಗಳಲ್ಲಿ ಹುರುಳಿಲ್ಲ. ಅವರನ್ನು ಈ ಪ್ರಕರಣದಲ್ಲಿ ವಿನಾಕಾರಣ ಸಿಲುಕಿಸಲಾಗಿದೆ. ಜೊತೆಗೆ ತಮ್ಮ ಅರ್ಜಿದಾರರು ಪ್ರಕರಣದ ತನಿಖೆಗೆ ಸಹಕರಿಸಿದ್ದಾರೆ. ಈ ನಿಟ್ಟಿನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಕೋರಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಎಸ್‌ಐಟಿ ಪರ ವಕೀಲರು, ಇದೊಂದು ಗಂಭೀರ ಪ್ರಕರಣವಾಗಿದ್ದು ಆರೋಪಿಯ ವಿಚಾರಣೆಯ ಅಗತ್ಯವಿದೆ. ಅರ್ಜಿದಾರರ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಕೋರಿದರು.ವಾದ -ಪ್ರತಿವಾದ ಆಲಿಸಿದ ನ್ಯಾಯಪೀಠ, ಜೂನ್ 20ರವರೆಗೆ ಬಂಧಿಸದಂತೆ ಎಸ್‌ಐಟಿ ಅಧಿಕಾರಿಗಳಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.