150 ವರ್ಷದ ಬಳಿಕದ ಕೌತುಕ; ದೇವರಿಗೂ ತಟ್ಟಲಿದೆ ಖಗ್ರಾಸ ಚಂದ್ರಗ್ರಹಣ!
Team Udayavani, Jan 30, 2018, 3:31 PM IST
ಬೆಂಗಳೂರು/ಉಡುಪಿ/ಮಂಗಳೂರು: ಖಗ್ರಾಸ ರಕ್ತ ಚಂದ್ರ ಗ್ರಹಣ ಹಿನ್ನೆಲೆಯಲ್ಲಿ ಜ.31ರಂದು ಶ್ರೀಕ್ಷೇತ್ರ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕಟೀಲು ದುರ್ಗಾಪರಮೇಶ್ವರ, ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಮಧ್ಯಾಹ್ನದಿಂದ ರಾತ್ರಿ 9ರವರೆಗೆ ದೇವರ ದರ್ಶನ ಹಾಗೂ ಪೂಜಾ ಸೇವೆ ಇರುವುದಿಲ್ಲ(ಚಂದ್ರಗ್ರಹಣ: ಧರ್ಮಸ್ಥಳ, ಸುಬ್ರಹ್ಮಣ್ಯದಲ್ಲಿ ದೇವರ ದರ್ಶನ ಇಲ್ಲ) ಎಂದು ವರದಿ ತಿಳಿಸಿದೆ.
ಬೆಂಗಳೂರಿನಲ್ಲಿ ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ಗರಿಕೆ ಹುಲ್ಲಿನಿಂದ ಶಿವಲಿಂಗವನ್ನು ಮುಚ್ಚಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಪ್ರಧಾನ ಅರ್ಚಕರು ತಿಳಿಸಿದ್ದಾರೆ.
ಅದೇ ರೀತಿ ಉಡುಪಿ ಕೃಷ್ಣಮಠದಲ್ಲಿಯೂ ಕೂಡಾ ಬೆಳಗ್ಗೆ 8ಗಂಟೆಯೊಳಗೆ ಮಹಾಪೂಜೆ,ಸಂಜೆ ಚಂದ್ರೋದಯದೊಳಗೆ ಮಹಾಪೂಜೆ ನೆರವೇರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಅನ್ನಸಂತರ್ಪಣೆ ಸೇವೆಯೂ ಇರುವುದಿಲ್ಲ ಎಂದು ದೇವಾಲಯದ ಪ್ರಕಟಣೆಯಲ್ಲಿ ಹೇಳಿದೆ.
150 ವರ್ಷಕ್ಕೊಮ್ಮೆ ನಡೆಯೋ ಗ್ರಹಣ ಇದು!
ಬುಧವಾರ (ಜ. 31) ನಡೆಯುವ ಚಂದ್ರಗ್ರಹಣ ವಿಶೇಷವಾದುದು. ಅದು ಕೇವಲ ಹುಣ್ಣಿಮೆಯಲ್ಲ, ಸೂಪರ್‌ಮೂನ್ ಹುಣ್ಣಿಮೆ. ಜತೆಗೆ ಖಗ್ರಾಸ ಗ್ರಹಣದೊಂದಿಗೆ ಚಂದ್ರೋದಯವಾಗಲಿದೆ. ಹೀಗಾಗುವುದು ಸುಮಾರು 150 ವರ್ಷಕ್ಕೊಮ್ಮೆ ಎನ್ನುತ್ತಾರೆ ಖಗೋಳ ಪರಿಣತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್
Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ticket Price Hike: ನಾಲ್ಕು ನಿಗಮಗಳ ಬಸ್ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ
Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.