ಜಾರಕಿಹೊಳಿ ಪ್ರಕರಣ: ವಿಚಾರಣೆ ಮುಂದಕ್ಕೆ
Team Udayavani, Oct 8, 2021, 6:29 AM IST
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿ.ಡಿ. ಬಹಿರಂಗ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ನ.8ಕ್ಕೆ ಮುಂದೂಡಿದೆ.
ಪ್ರಕರಣದ ತನಿಖೆಗೆ ಎಸ್ಐಟಿ ರಚಿಸಿದ ಕ್ರಮ ಪ್ರಶ್ನಿಸಿ ಹಾಗೂ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಪ್ರತ್ಯೇಕವಾಗಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಹಂಗಾಮಿ ಮುಖ್ಯ ನ್ಯಾ| ಸತೀಶ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿದ್ದವು.
ಈ ವೇಳೆ ಸಂತ್ರಸ್ತ ಯುವತಿ ಪರ ವಕೀಲರು ಹಾಜರಾಗಿ, ಪ್ರಕರಣದಲ್ಲಿ ಯುವತಿ ಪರ ವಾದ ಮಂಡಿಸುತ್ತಿರುವ ಸುಪ್ರೀಂಕೋರ್ಟ್ನ ಹಿರಿಯ ನ್ಯಾಯವಾದಿ ಇಂದಿರಾ ಜೈಸಿಂಗ್ ಅವರು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾಗಾಗಿ, ಕಾಲಾವಕಾಶ ಬೇಕು ಎಂದು ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ನ.8ಕ್ಕೆ ಮುಂದೂಡಿತು.
ಕಳೆದ ವಿಚಾರಣೆ ವೇಳೆ ನ್ಯಾಯಾಲಯ, ತನಿಖೆ ಪೂರ್ಣಗೊಳಿಸಿ ಎಸ್ಐಟಿ ಪೊಲೀಸರು ಸಿದ್ಧಪಡಿಸಿರುವ ಅಂತಿಮ ವರದಿ ಸಲ್ಲಿಸಲು ಅನುಮತಿ ನೀಡಲು ನಿರಾಕರಿಸಿತ್ತು. ನ್ಯಾಯಾಲಯದ ಅನುಮತಿ ಇಲ್ಲದೆ ವಿಚಾರಣಾ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸುವಂತಿಲ್ಲ ಎಂದು ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Darshan: ದರ್ಶನ್ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ
MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!
Ration Card: ಬಡವರಿಗೆ ಬಿಪಿಎಲ್ ಕಾರ್ಡ್ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ
Session: ವಕ್ಫ್ ಜೊತೆ ಬಿಪಿಎಲ್ ಹೋರಾಟಕ್ಕೆ ಬಿಜೆಪಿ ಸಜ್ಜು
Operation Fear: ಕಾಂಗ್ರೆಸ್ ಶಾಸಕರ ಮೇಲೆ ನಿಗಾ ವಹಿಸಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ
Viral Video: ಟಿಕ್ಟಾಕ್ ಸ್ಟಾರ್ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್
Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್ ಎಸ್ಎಸ್ ಹೇಳಿಕೆ: ಈಶ್ವರಪ್ಪ ಟೀಕೆ
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್ ಎನ್ಕೌಂಟರ್ ಬಗ್ಗೆ ಡಿಐಜಿ ಹೇಳಿದ್ದೇನು ?
Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.