ಜಾವಡೇಕರ್ ಸರಣಿ ಸಭೆ
Team Udayavani, Oct 28, 2017, 8:42 AM IST
ಬೆಂಗಳೂರು: ನವ ಕರ್ನಾಟಕ ನಿರ್ಮಾಣ ಪರಿವರ್ತನಾ ಯಾತ್ರೆ ಸಿದ್ಧತೆಗಳು ಮತ್ತು ಮುಂಬರುವ ವಿಧಾನಸಭೆ ಚುನಾವಣೆ ಕುರಿತಂತೆ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್ ನೇತೃತ್ವದಲ್ಲಿ ಪಕ್ಷದ ರಾಜ್ಯ ಘಟಕವು ಶುಕ್ರವಾರ ಸರಣಿ ಸಭೆಗಳನ್ನು ನಡೆಸಿದೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ಬೂತ್ ಸಶಕ್ತೀಕರಣ ಸಮಿತಿ ಸಭೆ,
ರಾಜಕೀಯ ವ್ಯವಹಾರಗಳ ಸಮಿತಿ ಸಭೆ, ಸಾಮಾಜಿಕ ಜಾಲತಾಣ ವಿಭಾಗದ ಸಭೆ, ಇತರೆ ಮಾಧ್ಯಮ ಕುರಿತ ಸಭೆ ಹಾಗೂ ಚುನಾವಣಾ ಪ್ರಣಾಳಿಕೆ ಸಭೆಗಳನ್ನು ನಡೆಸಲಾಗಿದೆ.
ನ. 2ರಂದು ಪರಿವರ್ತನಾ ಯಾತ್ರೆ ಉದ್ಘಾಟನೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬರಲಿದ್ದು, ಈ ಕುರಿತು ವಿಸ್ತ್ರತ ಸಮಾಲೋಚನೆ ನಡೆಸಲಾಯಿತು ಎಂದು ಪಕ್ಷದ ರಾಜ್ಯ ಪ್ರ. ಕಾರ್ಯದರ್ಶಿ ಅರವಿಂದ ಲಿಂಬಾವಳಿ ತಿಳಿಸಿ ದ್ದಾರೆ. 29ರಂದು ಪ್ರಧಾನಿ ಮೋದಿ ಬೀದರ್‌ನಲ್ಲಿ ನಡೆಯಲಿ ರುವ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುತ್ತಿರುವ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎಂದೂ ಅವರು ಹೇಳಿದ್ದಾರೆ.
ಆದಿಚುಂಚನಗಿರಿ ಶ್ರೀ ಭೇಟಿ: ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್ ಅವರು ಶುಕ್ರವಾರ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.
ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠದಲ್ಲಿ ಬೆಳಗ್ಗೆ ಸ್ವಾಮೀಜಿಯವರನ್ನು ಭೇಟಿ ಮಾಡಿದ ಮುರಳೀಧರರಾವ್ ಅವರ ಆಶೀರ್ವಾದ ಪಡೆದರಲ್ಲದೆ, ಕೆಲ ಕಾಲ ಮಾತುಕತೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.