ಪಠ್ಯದಲ್ಲಿ ಜಯದೇವಿ ತಾಯಿ ಲಿಗಾಡೆ ಜೀವನ ಚರಿತ್ರೆ ಅಗತ್ಯ: ಸೋಮಶೇಖರ್
Team Udayavani, Jun 23, 2022, 8:39 PM IST
ಬೆಂಗಳೂರು: ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ್ದ ಡಾ| ಜಯದೇವಿತಾಯಿ ಲಿಗಾಡೆ ಅವರ ಜೀವನ ಚರಿತ್ರೆಯನ್ನು ಪಠ್ಯಪುಸ್ತಕಗಳಲ್ಲಿ ಅಳವಡಿಸಬೇಕು ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ| ಸಿ. ಸೋಮಶೇಖರ್ ಹೇಳಿದರು.
ನಗರದ ಗಾಂಧಿ ಭವನದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಗುರುವಾರ ಹಮ್ಮಿಕೊಂಡಿದ್ದ ಡಾ| ಜಯದೇವಿ ತಾಯಿ ಲಿಗಾಡೆ ಅವರ 110ನೇ ಜನ್ಮ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಶ್ರೀಮಂತ ಮನೆತನದಲ್ಲಿ ಜನಿಸಿ, ಚಿಕ್ಕವಯಸ್ಸಿನಲ್ಲೇ ವೈಧವ್ಯಕ್ಕೆ ಬಲಿಯಾದರೂ ಧೃತಿಗೆಡದೆ ಕನ್ನಡ ಪರ ಹೋರಾಟ ಮಾಡಿದ್ದರು. ಸ್ವಂತ ಹಣದಿಂದ 400 ಕನ್ನಡ ಶಾಲೆಗಳನ್ನು ತೆರೆದು, ಕನ್ನಡ ಶಿಕ್ಷಕರನ್ನು ನೇಮಕ ಮಾಡಿದ್ದ ಅವರು ಸಾಹಿತ್ಯದಲ್ಲೂ ಅಪಾರ ಸೇವೆ ಸಲ್ಲಿಸಿದ್ದರು ಎಂದರು.
ದೂರದರ್ಶನ ಮತ್ತು ಆಕಾಶವಾಣಿ ನಿರ್ದೇಶಕಿ ಡಾ| ನಿರ್ಮಲಾ ಎಲಿಗಾರ್ ಅವರು ಡಾ| ಜಯದೇವಿ ತಾಯಿ ಅವರ ಕನ್ನಡ ಪರ ಹೋರಾಟದ ಬಗ್ಗೆ ಉಪನ್ಯಾಸ ನೀಡಿದರು. ಜಯದೇವಿ ಅವರ ಸೊಸೆ ಡಾ| ಮಧುಮಾಲಾ ಅವರು ಲಿಗಾಡೆಯ ನಡೆ-ನುಡಿ, ಸಾಧನೆ, ಆದರ್ಶಗಳನ್ನು ಸ್ಮರಿಸಿಕೊಂಡರು.
ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ್ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.