ಶಕ್ತಿ ಸೂತ್ರದಡಿ ಜೆಡಿಎಸ್‌ಗೆ ಸಿಗೋದು 4 ಸ್ಥಾನ!
Team Udayavani, Feb 4, 2019, 12:39 AM IST
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್‌ನಲ್ಲಿ ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ಕುರಿತು ಆಂತರಿಕ ಗುದ್ದಾಟ ಆರಂಭವಾಗಿದ್ದು, ಜೆಡಿಎಸ್ ಬೇಡಿಕೆ ಇಟ್ಟಿರುವಷ್ಟು ಕ್ಷೆತ್ರಗಳನ್ನು ಬಿಟ್ಟು ಕೊಡಲು ಕಾಂಗ್ರೆಸ್‌ನಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಅದೇ ಕಾರಣಕ್ಕೆ ಕಾಂಗ್ರೆಸ್ ವಾಸ್ತವದಲ್ಲಿ ಆಯಾ ಕ್ಷೇತ್ರದಲ್ಲಿ ಪಕ್ಷಗಳ ಶಕ್ತಿ ಆಧಾರಿತವಾಗಿ ಸೀಟು ಹಂಚಿಕೆ ಮಾಡಬೇಕು ಎಂಬ ‘ಶಕ್ತಿ ಸೂತ್ರ’ ಬೇಡಿಕೆ ಮುಂದಿಡುತ್ತಿದೆ.
ಜೆಡಿಎಸ್ ಅಧಿಕಾರದಲ್ಲಿರುವುದರಿಂದ ಮೈತ್ರಿ ಪಕ್ಷದ ಭಾಗವಾಗಿ ಮೂರನೇ ಎರಡರಷ್ಟು ಲೋಕಸಭಾ ಸ್ಥಾನಗಳನ್ನು ಬಿಟ್ಟುಕೊಡುವಂತೆ ಜೆಡಿಎಸ್ ಪಟ್ಟು ಹಿಡಿದಿದ್ದು, ಅದರಂತೆ ಕನಿಷ್ಠ ಹತ್ತು ಸೀಟುಗಳನ್ನಾದರೂ ಬಿಟ್ಟು ಕೊಡಬೇಕು ಎಂಬ ಬೇಡಿಕೆ ಇಟ್ಟಿದೆ. ಆದರೆ, ವಾಸ್ತವದಲ್ಲಿ ಜೆಡಿಎಸ್ ಶಕ್ತಿ ಇರುವುದು ಕೇವಲ ನಾಲ್ಕು ಲೋಕಸಭಾ ಕ್ಷೇತ್ರಗಳಲ್ಲಿ ಮಾತ್ರ ಎನ್ನುವುದು ಕಾಂಗ್ರೆಸ್ ವಾದ. ಅದಕ್ಕೆ ಪುಷ್ಟಿ ನೀಡುವಂತೆ ಕಾಂಗ್ರೆಸ್ 2018ರಲ್ಲಿ ನಡೆದ ವಿಧಾನಸಭೆ ಚುನಾವಣೆ ಫಲಿತಾಂಶದ ಆಧಾರದಲ್ಲಿ ಯಾವ ಕ್ಷೇತ್ರದಲ್ಲಿ ಯಾವ ಪಕ್ಷದ ಶಕ್ತಿ ಎಷ್ಟಿದೆ ಎಂಬ ಮಾಹಿತಿ ಸಂಗ್ರಹಿಸಿದೆ. ಅದರಂತೆ ಹಾಸನ, ಮಂಡ್ಯ, ತುಮಕೂರು, ಕೋಲಾರ ನಾಲ್ಕು ಕ್ಷೇತ್ರಗಳಲ್ಲಿ ಮಾತ್ರ ಜೆಡಿಎಸ್ ಕಾಂಗ್ರೆಸ್‌ಗಿಂತ ಹೆಚ್ಚು ಮತಗಳನ್ನು ಪಡೆದಿದೆ.
ಆದರೆ, ಮೈತ್ರಿ ಧರ್ಮದ ಪ್ರಕಾರ ಹೆಚ್ಚಿನ ಸ್ಥಾನ ಬಿಟ್ಟುಕೊಡುವ ಸಂದರ್ಭ ಬಂದಲ್ಲಿ ಜೆಡಿಎಸ್‌ಗೆ ಐದರಿಂದ ಏಳು ಸೀಟುಗಳನ್ನು ಮಾತ್ರ ಬಿಟ್ಟುಕೊಡಬಹುದು ಎನ್ನುವುದು ಕಾಂಗ್ರೆಸ್ ಲೆಕ್ಕಾಚಾರ. ಹೀಗಾಗಿಯೇ ಜೆಡಿಎಸ್‌ಗೆ ವಾಸ್ತವದ ಲೆಕ್ಕಾಚಾರದಂತೆ ಸೀಟು ಹಂಚಿಕೆಯ ಸೂತ್ರ ಪಾಲಿಸಲು ಕಾಂಗ್ರೆಸ್ ಪಟ್ಟು ಹಿಡಿದಿದೆ ಎಂದು ತಿಳಿದು ಬಂದಿದೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಜೆಡಿಎಸ್ 7.64 ಲಕ್ಷ ( 54%)ರಷ್ಟು ಮತ ಪಡೆದಿದೆ. ಕಾಂಗ್ರೆಸ್ 4.55 ಲಕ್ಷ (32.22%) ರಷ್ಟು ಮತ ಪಡೆದಿದೆ. ಬಿಜೆಪಿ ಕೇವಲ 74 ಸಾವಿರ ಮತ ಪಡೆದಿತ್ತು. ಆದರೆ, ಉಪ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳ ವಿರುದ್ಧ ಬಿಜೆಪಿ ಅಭ್ಯರ್ಥಿ 2.44 ಲಕ್ಷಕ್ಕೂ ಹೆಚ್ಚು ಮತ ಪಡೆದಿರುವುದು ಅವರ ಶಕ್ತಿ ವೃದ್ಧಿಸುವಂತೆ ಮಾಡಿದೆ.
ತುಮಕೂರಿನಲ್ಲಿಯೂ ಕಾಂಗ್ರೆಸ್‌ಗಿಂತ ಜೆಡಿಎಸ್ ಹೆಚ್ಚು ಮತ ಪಡೆದಿದ್ದು, 4.90 ಲಕ್ಷ (37%) ರಷ್ಟು ಮತ ಗಳಿಸಿದ್ದರೆ ಕಾಂಗ್ರೆಸ್ 3.30 ಲಕ್ಷ (25%) ರಷ್ಟು ಮತ ಪಡೆದಿದೆೆ. ಆದರೆ, ಇಲ್ಲಿ ಬಿಜೆಪಿ 3.90 ಲಕ್ಷ (29%) ಮತದಿಂದ ಕಾಂಗ್ರೆಸ್‌ಗಿಂತ ಹೆಚ್ಚು ಮತ ಪಡೆದಿದ್ದು ಪೈಪೋಟಿ ನೀಡುವ ಲಕ್ಷಣ ಕಾಣುತ್ತಿದೆ.
ಕೋಲಾರದಲ್ಲಿ ಜೆಡಿಎಸ್ ಕಡಿಮೆ ಶಾಸಕರನ್ನು ಹೊಂದಿದ್ದರೂ, ಕಾಂಗ್ರೆಸ್‌ಗಿಂತ ಹೆಚ್ಚು ಮತ ಪಡೆದಿದೆ. ಕೋಲಾರದಲ್ಲಿ 5.03 ಲಕ್ಷ (38%) ಮತ ಜೆಡಿಎಸ್ ಪಾಲಾಗಿದ್ದರೆ, ಕಾಂಗ್ರೆಸ್ 4.28 ಲಕ್ಷ (32 %) ರಷ್ಟು ಮತವನ್ನಷ್ಟೇ ಪಡೆಯಲು ಯಶಸ್ವಿಯಾಗಿದೆ. ಇನ್ನು ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಜೆಡಿಎಸ್ 6.16 ಲಕ್ಷ (46% ) ಮತ, ಕಾಂಗ್ರೆಸ್ 4.02 ಲಕ್ಷ (30.11%) ರಷ್ಟು ಮತಗಳಿಸಿದೆ. ಹಾಸನದಲ್ಲಿ ಬಿಜೆಪಿ ಕೂಡ 2.86 ಲಕ್ಷ (21%)ಮತಗಳಿಸಿ ಪ್ರಬಲ ಪೈಪೋಟಿ ನೀಡುವ ನಿರೀಕ್ಷೆ ಮೂಡಿಸಿದೆ.
ಈ ನಾಲ್ಕು ಕ್ಷೇತ್ರಗಳ ಹೊರತಾಗಿ ಜೆಡಿಎಸ್ ಬೇಡಿಕೆ ಇಟ್ಟಿರುವ ಚಿಕ್ಕಬಳ್ಳಾಪುರ, ಮೈಸೂರು, ಬೆಂಗಳೂರು ಉತ್ತರ, ಚಿತ್ರದುರ್ಗ, ಶಿವಮೊಗ್ಗ, ವಿಜಯಪುರ, ಬೀದರ್ ಕ್ಷೇತ್ರಗಳಲ್ಲಿ ಜೆಡಿಎಸ್ ಶಕ್ತಿ ಹೇಳಿಕೊಳ್ಳುವಷ್ಟಿಲ್ಲ.
ಮೈಸೂರು, ಚಿಕ್ಕಬಳ್ಳಾಪುರ, ವಿಜಯಪುರ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗಿಂತ ಜೆಡಿಎಸ್ ಶೇ. 10ರಿಂದ ಶೇ. 35ರಷ್ಟು ಕಡಿಮೆ ಮತ ಪಡೆದಿದೆ.
ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ಹಾವೇರಿ, ಧಾರವಾಡ. ಉತ್ತರ ಕನ್ನಡ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತಗಳಿಕೆ ಶೇ. 10ಕ್ಕಿಂತ ಕಡಿಮೆ ಇದ್ದು, ಕೆಲವು ಕ್ಷೇತ್ರಗಳಲ್ಲಿ ಶೇ. 1 ರಷ್ಟು ಇರುವುದರಿಂದ ಮೈತ್ರಿಯಾದರೂ ಜೆಡಿಎಸ್‌ನಿಂದ ಹೆಚ್ಚಿನ ಪ್ರಯೋಜನವಾಗುವುದಿಲ್ಲ ಎನ್ನುವುದು ಕಾಂಗ್ರೆಸ್‌ನ ನಾಯಕರ ವಾದವಾಗಿದೆ.
ಅದೇ ಕಾರಣಕ್ಕೆ ಜೆಡಿಎಸ್ ಶಕ್ತಿ ಹೆಚ್ಚಾಗಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕೂಡ ಪ್ರಬಲವಾಗಿರುವುದರಿಂದ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದರೆ ಜೆಡಿಎಸ್‌ಗೆ ಅನುಕೂಲವಾಗುತ್ತದೆ.
ಹೀಗಾಗಿ ಅವರು ಸ್ಪರ್ಧೆ ಮಾಡಿದ ಕ್ಷೇತ್ರಗಳಲ್ಲೆಲ್ಲಾ ಜೆಡಿಎಸ್ ಗೆಲ್ಲಲು ಅವಕಾಶಗಳು ಹೆಚ್ಚಿವೆ. ಆದರೆ, ಜೆಡಿಎಸ್ ಸ್ಫರ್ಧೆಗೆ ಅವಕಾಶ ಕೇಳದಿರುವ ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳು ಜಂಟಿಯಾಗಿ ಕಾಂಗ್ರೆಸ್ ಅಭ್ಯರ್ಥಿ ಕಣಕ್ಕಿಳಿಸಿದರೂ, ಆ ಕ್ಷೇತ್ರಗಳಲ್ಲಿ ಬಿಜೆಪಿ ಪ್ರಬಲವಾಗಿರುವುದರಿಂದ ಕಾಂಗ್ರೆಸ್ ಸ್ಪರ್ಧೆ ಮಾಡಿದ ಎಲ್ಲ ಕ್ಷೇತ್ರಗಳನ್ನು ಗೆಲ್ಲಲು ಸಾಧ್ಯವಿಲ್ಲದ ಕಾರಣ ಅವರಿಗೆ ಹೆಚ್ಚಿನ ಸೀಟು ಬಿಟ್ಟುಕೊಟ್ಟರೆ ಕಾಂಗ್ರೆಸ್‌ಗೆ ನಷ್ಟವಾಗಲಿದೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿವೆ.
ಆದರೆ, ಜೆಡಿಎಸ್ ಕನಿಷ್ಠ 10 ಸ್ಥಾನಗಳಿಗೆ ಬೇಡಿಕೆ ಇಟ್ಟಿರುವುದರಿಂದ ಕಾಂಗ್ರೆಸ್‌ನ ‘ಶಕ್ತಿ ಸೂತ್ರ’ ಎಷ್ಟರ ಮಟ್ಟಿಗೆ ಒಪ್ಪಿಕೊಳ್ಳುತ್ತದೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.
ಯಾವ ಪಕ್ಷಕ್ಕೆ ಎಲ್ಲಿ ಗೆಲ್ಲುವ ಶಕ್ತಿ ಇದೆ ಎನ್ನುವುದನ್ನು ಗಮನದಲ್ಲಿರಿಸಿಕೊಂಡು ಸೀಟು ಹಂಚಿಕೆಯಾಗಬೇಕು. . ಹೆಚ್ಚು ಸೀಟು ಗೆಲ್ಲುವುದು ಮುಖ್ಯವಾಗಬೇಕು. ಅದೇ ಆಧಾರದಲ್ಲಿ ಸೀಟು ಹಂಚಿಕೆಯಾಗಬೇಕು. • ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ
ಶಂಕರ ಪಾಗೋಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.