ನವೆಂಬರ್ 1ರಿಂದ ಜೆಡಿಎಸ್ ಜನತಾ ಪಂಚರತ್ನ ಯಾತ್ರೆ ಆರಂಭ
Team Udayavani, Oct 6, 2022, 4:34 PM IST
ಬೆಂಗಳೂರು: ಹಳೇ ಮೈಸೂರು ಭಾಗಕ್ಕೆ ಮಾತ್ರ ಜೆಡಿಎಸ್ ಸೀಮಿತವಾಗಲ್ಲ. ರಾಜ್ಯದೆಲ್ಲೆಡೆ ಪಕ್ಷವನ್ನು ಸಂಘಟನೆ ಮಾಡುತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಪಕ್ಷದ ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆಗೆ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನದಂದು ಚಾಲನೆ ನೀಡುವುದಾಗಿ ಅವರು ಘೋಷಿಸಿದರು.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಈಗಾಗಲೇ ಪೂರ್ವ ಸಿದ್ಧತೆ ಕಾರ್ಯಗಳು ನಡೆಯುತ್ತಿವೆ. ಇದಕ್ಕಾಗಿ ವಾಹನಗಳು ಸಹ ಸಿದ್ದಗೊಳ್ಳುತ್ತಿವೆ ಎಂದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಈಗಾಗಲೇ ಸಂಘಟನೆ ಆರಂಭಿಸಿದ್ದೇವೆ. ಉತ್ತರ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಅಸ್ತಿತ್ವ ಏನು ಎಂಬುದನ್ನು ಈ ಕಾರ್ಯಕ್ರಮಗಳ ಮೂಲಕ ತೋರಿಸುತ್ತೇವೆ ಅವರು ಹೇಳಿದರು.
ಇದನ್ನೂ ಓದಿ:ಅಕ್ಟೋಬರ್ 28 ರಂದು ವಿನೂತನ ಕೋಟಿ ಕಂಠ ಗಾಯನ: ಸಚಿವ ಸುನಿಲ್ ಕುಮಾರ್
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ತೆಲಂಗಾಣ ಸಿಎಂ ಕೆ. ಚಂದ್ರಶೇಖರ ರಾವ್ ಅವರು ಜೆಡಿಎಸ್ ಪರ ಪ್ರಚಾರಕ್ಕೆ ಬರಲಿದ್ದಾರೆ. ಈ ಬಗ್ಗೆ ಎರಡೂ ಪಕ್ಷಗಳು ಚರ್ಚೆ ಮಾಡಿದ್ದೇವೆ ಎಂದು ತಿಳಿಸಿದರು.
ಅ.8ರಂದು ಜನತಾ ಮಿತ್ರ ಸಮಾರೋಪ: ಅಕ್ಟೋಬರ್ 8ಕ್ಕೆ ಜನತಾಮಿತ್ರ ಸಮಾರೋಪ ಸಮಾರಂಭ ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಮದ್ಯಾಹ್ನ 3 ಘಂಟೆಗೆ ಆಯೋಜಿಸಿದ್ದೇವೆ. ಈ ಸಂಬಂಧ ಪೂರ್ವ ಸಿದ್ದತೆಗಾಗಿ ಚರ್ಚೆ ಮಾಡಲು ಬೆಂಗಳೂರು ನಗರ ಘಟಕದ ಪದಾಧಿಕಾರಿಗಳ ಸಭೆ ಕರೆದಿದ್ದೇನೆ ಎಂದು ಕುಮಾರಸ್ವಾಮಿ ಅವರು ಹೇಳಿದರು.
ಬಿಬಿಎಂಪಿ ಚುನಾವಣಾ ಪ್ರಚಾರ: ಮಳೆಯಿಂದಾಗಿ ಜನತಾ ಮಿತ್ರ ಸಮಾರೋಪ ಕಾರ್ಯಕ್ರಮ ಎರಡು ಬಾರಿ ಮುಂದೂಡಿಕೆ ಆಗಿತ್ತು. ಅ.8ರಂದು ಮಧ್ಯಾಹ್ನ ಈ ಕಾರ್ಯಕ್ರಮ ನಡೆಸಲಾಗುತ್ತದೆ. ಮುಂದಿನ ಬಿಬಿಎಂಪಿ ಚುನಾವಣಾ ಪ್ರಚಾರದ ಸಮಾವೇಶ ಕೂಡ ಇದೇ ಕಾರ್ಯಕ್ರಮದಿಂದ ಪ್ರಾರಂಭವಾಗಲಿದೆ ಎಂದು ಅವರು ತಿಳಿಸಿದರು.
ಮೆಚ್ಯುರಿಟಿ ಸಿಎಂ ಗೆ ಇದೆಯಾ?:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ಸಿಎಂ ಗೆ ಮೆಚ್ಯುರಿಟಿ ಇದೆಯೇ ಎಂದು ಕೇಳಬೇಕಿದೆ. ಶಾಸಕರ ಶಿಷ್ಟಾಚಾರ ನೀವೇ ಮಾಡಿದ್ದು, ಆದರೆ ಈಗ ಏನಾಯ್ತು. ಕಲಾವಿದರ ಕೋಟಾದಿಂದ ಬಂದವರಿಗೆ 50 ಕೋಟಿ ಅನುದಾನ ಕೊಡುವುದೆಂದರೆ ಹೇಗೆ?. ಕಾರ್ಯಕ್ರಮ ರದ್ದಾಗಿದೆ ಅಂತ ಹಿಂದಿನ ದಿನ ಹೇಳಿದ್ದಾರೆ. ಆದರೆ ಮತ್ತೆ ಯಾಕೆ ಕಾರ್ಯಕ್ರಮ ಮಾಡಿದರು ಎಂದು ಸಿಎಂ ವಿರುದ್ಧ ಗರಂ ಆದರು.
ನಾನು ಇದನ್ನು ಇಲ್ಲಿಗೆ ಬಿಡುವುದಿಲ್ಲ. ಕಲ್ಲು ತೂರಾಟ ಯಾಕೆ ಆಯ್ತು. ಬೇರೊಂದು ಕಾರ್ಯಕ್ರಮಕ್ಕೆ ಬೇರೆ ಮಾರ್ಗದಲ್ಲಿ ಹೋಗಬಹುದಿತ್ತು. ಶಾಂತಿಯುತವಾಗಿ ಇದ್ದವರನ್ನು ಲಾಠಿ ಚಾರ್ಜ್ ಮಾಡಿದ್ದು ಪೊಲೀಸರು. ಗಲಭೆ ಸೃಷ್ಟಿ ಮಾಡಿದ್ದು ಯಾರು ಹಾಗಾದರೆ, ತಾಕತ್ತಿದೆ ಅನ್ನುವ ಭಾಷಣ ಮಾಡಿದರಲ್ಲಾ, ನಿಮ್ಮ ಶಾಸಕರನ್ನು ಹದ್ದು ಬಸ್ತಿನಲ್ಲಿ ಇಡದೇ ನನ್ನ ಬಗ್ಗೆ ಮಾತಾಡ್ತೀರಾ ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.