70 ಶಾಸಕರು ಜೆಡಿಎಸ್ ಸೇರಲಿದ್ದಾರೆ: ಸ್ಫೋಟಕ ಹೇಳಿಕೆ ಕೊಟ್ಟ ಸಿ.ಎಂ.ಇಬ್ರಾಹಿಂ
Team Udayavani, Jul 23, 2022, 3:03 PM IST
ಕುಷ್ಟಗಿ: (ಕೊಪ್ಪಳ) ನವೆಂಬರ್- ಡಿಸೆಂಬರ್ ಹೊತ್ತಿಗೆ ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಕಾರಣಕ್ಕೆ ಸಿಎಂ ಬಸವರಾಜ ಬೊಮ್ಮಾಯಿಗೆ ಕ್ಯಾಬಿನೆಟ್ ವಿಸ್ತರಣೆಗೆ ಬಿಜೆಪಿ ಬಿಟ್ಟಿಲ್ಲ.ಗುಜರಾತ್ ಜೊತೆಗೆ ಕರ್ನಾಟಕದ ಚುನಾವಣೆ ನಡೆಯಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ರಾಜ್ಯಾದ್ಯಂತ 70 ಶಾಸಕರು ಜೆಡಿಎಸ್ ಸೇರಲಿದ್ದಾರೆ. ಕಾಂಗ್ರೆಸ್- ಬಿಜೆಪಿ ಎರಡೂ ಪಕ್ಷದ ನಾಯಕರು ಪಕ್ಷ ಸೇರಲಿದ್ದಾರೆ. ರಾಜ್ಯದಲ್ಲಿ ಅಕ್ಟೋಬರ್ ನಲ್ಲಿ ಅನಿರೀಕ್ಷಿತ ಬೆಳವಣಿಗೆ ನಡೆಯಲಿದೆ ಎಂದರು.
ಸೋನಿಯಾ ಗಾಂಧಿಗೆ ಒಂದು ನೋಟಿಸ್ ಕೊಟ್ಟಿದ್ದಕ್ಕೆ ಕಾಂಗ್ರೆಸ್ಸಿಗರು ಬೀದಿಗೆ ಇಳಿದಿದ್ದಾರೆ. ಜನರ ಸಂಕಷ್ಟಕ್ಕೆ ಹೋರಾಟ ಇಲ್ಲ. ಮಳೆಯಾಗಿ ಜನರು ತೊಂದರೆ ಅನುಭವಿಸಿದಾಗ ಇವರೆಲ್ಲಾ ಎಲ್ಲಿದ್ದರು ಎಂದು ಪ್ರಶ್ನಿಸಿದರು.
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು ಕಾಂಗ್ರೆಸ್ ಮುಕ್ತ ಆಗಲಿವೆ. ಮುನಿಯಪ್ಪ ಅವರನ್ನು ಸೋಲಿಸಿದ್ದಕ್ಕೆ ಅವರ ಸಮುದಾಯ ಸಿಟ್ಟಾಗಿದೆ. ಇನ್ನು ಕೊಪ್ಪಳ ಜಿಲ್ಲೆಯಲ್ಲಿ 5 ಅಭ್ಯರ್ಥಿಗಳು ಜೆಡಿಎಸ್ ನಿಂದ ಗೆಲ್ಲಲಿದ್ದಾರೆ. ಕೊಪ್ಪಳ ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡನಗೌಡ, ಕಾಂಗ್ರೆಸ್ ನಾಯಕ ಹಸನ್ ಸಾಬ್ ದೋಟಿಹಾಳ ಜೆಡಿಎಸ್ ಸೇರ್ಪಡೆ ವಿಚಾರ ಕುರಿತು ಶೀಘ್ರದಲ್ಲಿ ಈ ಬಗ್ಗೆ ಮಾಹಿತಿ ಹೊರ ಬೀಳಲಿದೆ. ಪರೋಕ್ಷವಾಗಿ ಇಬ್ಬರು ನಾಯಕರು ಸಂಪರ್ಕದಲ್ಲಿ ಇದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: ಕುಟುಂಬ ರಾಜಕಾರಣ ಮಾಡದವರು ಯಾರಿಲ್ಲ?; ಯಡಿಯೂರಪ್ಪ ಪರ ಈಶ್ವರಪ್ಪ ಬ್ಯಾಟಿಂಗ್
ಈಗಾಗಲೇ ನಾವು ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದೇವೆ. ಈಗಲೂ ನಮ್ಮ ಪಕ್ಷಕ್ಕೆ ಸಾಕಷ್ಟು ಟಿಕೆಟ್ ಆಕಾಂಕ್ಷಿಗಳು ಬರುತ್ತಿದ್ದಾರೆ. ಬೆಜೆಪಿಗೆ ಜನರ ಬಗ್ಗೆ ಕಾಳಜಿ ಇಲ್ಲ, ಬರೀ ವಿವಾದ ಸೃಷ್ಠಿ ಮಾಡುತ್ತಿದ್ದಾರೆ ಎಂದರು.
ಮುಸ್ಲಿಂಮರ ಮಾಂಸದಂಗಡಿ ಬಹಿಷ್ಕಾರ ಮಾಡುತ್ತೇವೆ ಎಂಬ ಪ್ರಮೋದ ಮುತಾಲಿಕ್ ಹೇಳಿಕೆಗೆ ಪ್ರತಿಕ್ರಿಯೆ ಕೊಟ್ಟ ಅವರು, ಅಯ್ಯೋ ಆ ಮುತಾಲಿಕ್ ಗೆ ತಲೆಯಲ್ಲಿ ಕೂದಲಿಲ್ಲ. ಅದಕ್ಕೆ ಯಾಕೆ ಕಟ್ಟಿಂಗ್ ಶಾಪ್ ಬೇಕೆಂದು ವ್ಯಂಗ್ಯವಾಡಿದರು.
ಸಂಸದ ಸಂಗಣ್ಣ ಕರಡಿ, ಇಕ್ಬಾಲ್ ಅನ್ಸಾರಿ ಜೆಡಿಎಸ್ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಾರೇ ಬಂದರೂ ಜೆಡಿಎಸ್ ಗೆ ಸ್ವಾಗತ ಎಂದರು.
ಮಾಜಿ ಸಿಎಂ ಸಿದ್ದರಾಮಯ್ಯರ ಬಗ್ಗೆ ನನಗೆ ಅನುಕಂಪ ಇದೆ. ಅವರು ಅಸೆಂಬ್ಲಿಗೆ ಬರಬೇಕು ಅನ್ನೋದು ನನಗೂ ಆಸೆ ಇದೆ. ಅವರು ಎಲ್ಲಿ ನಿಂತರೂ ಗೆಲ್ಲುವುದು ಕಷ್ಟ ಇದೆ. ಸಿದ್ದರಾಮಯ್ಯ ದಾರಿ ತಪ್ಪಿದ್ದಾರೆ. ಸಿದ್ದರಾಮಯ್ಯರನ್ನು ನಾನೇ ಸಿಎಂ ಮಾಡಿದ್ದೇನೆ. ಸಿದ್ದರಾಮಯ್ಯ ಬಾದಾಮಿಯಲ್ಲಿ ಗೆಲ್ಲಲು ನಾನೇ ಕಾರಣ. ಹಗಲೆಲ್ಲ ಒಂದು ಕಡೆ, ರಾತ್ರಿ ಇಡೀ ಬಾದಾಮಿಯಲ್ಲಿ ಕೆಲಸ ಮಾಡಿ ಸಿದ್ದರಾಮಯ್ಯ ಗೆಲ್ಲಿಸಿದ್ದೇವೆ ಎಂದರು.
ಮಾಜಿ ಸಿಎಂ ಯಡಿಯೂರಪ್ಪ ಕ್ಷೇತ್ರ ತ್ಯಾಗ ಮಾಡಿಲ್ಲ. ಬಿಜೆಪಿ ಯಡಿಯೂರಪ್ಪರನ್ನು ಹೊರಗೆ ದಬ್ಬಿದೆ. ಇವರು ಕ್ಷೇತ್ರ ಬಿಟ್ಟು ಕೊಡೋದಲ್ಲ. ಬಿಜೆಪಿಗರು ಟಿಕೆಟ್ ಕೊಡೋದಿಲ್ಲ ಅಂತಾ, ಘೋಷಣೆ ಮಾಡಿದ್ದಾರೆ. ಲಿಂಗಾಯತರ ವೋಟ್ ಪಡೆದ ಬಿಜೆಪಿ, ಯಡಿಯೂರಪ್ಪರಿಗೆ ವಂಚನೆ ಮಾಡಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.