ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಇಂದು
Team Udayavani, Feb 17, 2020, 3:04 AM IST
ಬೆಂಗಳೂರು: ರಾಜ್ಯ ವಿಧಾನ ಮಂಡಲದ ಜಂಟಿ ಅಧಿವೇಶನದ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆ 9.30ಕ್ಕೆ ವಿಧಾನಸೌಧದ ಜೆಡಿಎಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಅಧಿವೇಶನದಲ್ಲಿ ಆಡಳಿತಾರೂಢ ಬಿಜೆಪಿ ವಿರುದ್ಧದ ಹೋರಾಟದ ರೂಪುರೇಷೆ ಕುರಿತು ಚರ್ಚೆ ನಡೆಯಲಿದೆ.
ಬೀದರ್‌ನ ಶಾಹಿನ್ ಶಾಲೆಯ ಮುಖ್ಯ ಶಿಕ್ಷಕಿ ವಿರುದ್ಧ ದೇಶದ್ರೋಹ ಪ್ರಕರಣ ಹಾಕಿರುವುದು, ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆ ವೇಳೆ ನಡೆದ ಘಟನಾವಳಿಗಳು, ಹೊಸಪೇಟೆಯ ಮರಿಯಮ್ಮನಹಳ್ಳಿ ಕಾರು ಅಪಘಾತ ಪ್ರಕರಣ, ಶಾಸಕರ ಅನುದಾನ ಕಡಿತಗೊಳಿಸಿರುವುದು, ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ರೂಪಿಸಿರುವ ಯೋಜನೆಗಳನ್ನು ರದ್ದುಗೊಳಿಸಿರುವುದರ ಜತೆಗೆ ಇನ್ನು ಕೆಲವು ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡದಿರುವುದು ಹೋರಾಟದ ಪ್ರಮುಖ ಅಸ್ತ್ರಗಳಾಗಲಿವೆ. ಈ ವಿಷಯಗಳ ಕುರಿತು ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡಲು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಈ ಸಂಬಂಧ “ಉದಯವಾಣಿ’ಯೊಂದಿಗೆ ಮಾತನಾಡಿದ ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ರಾಜ್ಯ ಸರ್ಕಾರದ ವೈಫಲ್ಯಗಳು ಹಾಗೂ ಜನ ಎದುರಿಸುತ್ತಿ ರುವ ಸಮಸ್ಯೆಗಳ ಬಗ್ಗೆ ಅಧಿವೇಶನದ ಒಳಗೆ ಮತ್ತು ಹೊರಗೆ ಹೋರಾಟದ ಮೂಲಕ ಸರ್ಕಾರದ ಗಮನ ಸೆಳೆಯಲಾಗು ವುದು ಎಂದರು. ಅಲ್ಲದೆ, ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಮಾಡಲಿರುವ ಭಾಷಣದ ಪ್ರಮುಖ ವಿಚಾರ ಗಳ ಬಗ್ಗೆಯೂ ಚರ್ಚೆ ನಡೆಸಲಾಗುವುದು. ನಾಲ್ಕೂ ದಿನ ಅಧಿವೇಶನದಲ್ಲಿ ಎಲ್ಲ ಶಾಸಕರೂ ಹಾಜರಿರಬೇಕು ಎಂದು ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.