ಕಲಾಪಕ್ಕೆ ಅಡ್ಡಿ: ಕಾಂಗ್ರೆಸ್-ಬಿಜೆಪಿ ವಿರುದ್ಧ ಜೆಡಿಎಸ್ ಧರಣಿ
Team Udayavani, Feb 21, 2022, 11:00 PM IST
ಬೆಂಗಳೂರು: ಆಡಳಿತ ಪಕ್ಷದ ಅಸಮರ್ಥತೆ ಹಾಗೂ ವಿಪಕ್ಷ ಕಾಂಗ್ರೆಸ್ನ ಪ್ರತಿಷ್ಠೆಯಿಂದ ವಿಧಾನಮಂಡಲ ಕಲಾಪ ಸಂಪೂರ್ಣವಾಗಿ ಹಾಳಾಗಿದ್ದು, ಇದರ ವಿರುದ್ಧ ಜೆಡಿಎಸ್ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ವಿಧಾನಸೌಧ ಬಳಿಯ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು.
ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಎಚ್. ಕೆ. ಕುಮಾರಸ್ವಾಮಿ, ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಕಾಶೆಂಪೂರ್ ನೇತೃತ್ವದಲ್ಲಿ ಶಾಸಕರು ಧರಣಿ ನಡೆಸಿದರು.
ಎಚ್ಡಿಕೆ ವಾಗ್ಧಾಳಿ
ಈ ವೇಳೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಸದನದ ಕಲಾಪವನ್ನು ರಾಜಕೀಯ ಗುರಿ ಸಾಧನೆಗೆ ಗುರಾಣಿಯಾಗಿ ಮಾಡಿಕೊಂಡಿವೆ. ಜನರ ನಿರೀಕ್ಷೆಗಳನ್ನು ಎರಡೂ ಪಕ್ಷಗಳು ಹೊಸಕಿ ಹಾಕುತ್ತಿವೆ. ರಾಜ್ಯದ ಸಮಸ್ಯೆಗಳು ಹಾಗೂ ಜನರ ಕಷ್ಟಗಳ ಬಗ್ಗೆ ಅಧಿವೇಶನದಲ್ಲಿ ನಾವು ಚರ್ಚಿಸಬೇಕಿತ್ತು. ಅದಕ್ಕೆ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಅವಕಾಶ ನೀಡಲಿಲ್ಲ ಎಂದು ಟೀಕಿಸಿದರು.
ಸದನದಿಂದ ಹೊರಹಾಕಬೇಕಿತ್ತು: ಎಚ್ಕೆಕೆ
ಸರಕಾರಕ್ಕೆ ಸದನ ನಡೆಸುವ ಬದ್ಧತೆ ಇದ್ದರೆ ಗಲಾಟೆ ಮಾಡಿ ಕಲಾಪ ಹಾಳು ಮಾಡುತ್ತಿದ್ದವರನ್ನು ಹೊರಗೆ ಹಾಕಬೇಕಿತ್ತು ಅಥವಾ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಬೇಕಿತ್ತು. ಅಧಿವೇಶನ ಪ್ರಾರಂಭವಾಗಿ ಒಂದು ವಾರ ಆಗಿದ್ದರೂ ಜನಪರವಾದ ಯಾವುದೇ ಚರ್ಚೆ ಆಗಿಲ್ಲ. ಕಾಂಗ್ರೆಸ್ನವರಿಗೆ ಈಶ್ವರಪ್ಪ ಅವರದ್ದೊಂದೇ ವಿಷಯವಾಗಿದೆ ಎಂದು ಎಚ್. ಕೆ. ಕುಮಾರಸ್ವಾಮಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್ಕೌಂಟರ್ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.