ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಪುನಾರಚನೆ
Team Udayavani, Sep 2, 2019, 3:05 AM IST
ಬೆಂಗಳೂರು: ಜನತಾದಳ (ಜಾತ್ಯತೀತ) ಪಕ್ಷದ ರಾಷ್ಟ್ರೀಯ ಸಮಿತಿಯನ್ನು ಪುನಾರಚಿಸಲಾಗಿದ್ದು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಹಿತ ಹಲವು ಪ್ರಮುಖರು ಸ್ಥಾನಪಡೆದುಕೊಂಡಿದ್ದಾರೆ. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಸಮಿತಿಯನ್ನು ಪುನಾರಚಿಸಿ ಆದೇಶ ಹೊರಡಿಸಿದ್ದು, ಅದರಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವರಾದ ಎಚ್.ಡಿ. ರೇವಣ್ಣ, ಸಾ.ರಾ. ಮಹೇಶ್, ಸಿ.ಎಸ್. ಪುಟ್ಟರಾಜು, ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ, ಮಾಜಿ ಶಾಸಕ ವೈಎಸ್‌ವಿ ದತ್ತಾ ಸೇರಿ ಹಲವರನ್ನು ರಾಷ್ಟ್ರೀಯ ಸಮಿತಿಗೆ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.
ಇದರ ಜೊತೆಗೆ ವಿಧಾನಪರಿಷತ್ ಸದಸ್ಯ ಬಿ.ಎಂ. ಫಾರೂಕ್ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ, ವಿಧಾನಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಅವರನ್ನು ವಕ್ತಾರರನ್ನಾಗಿ, ಮಾಜಿ ಶಾಸಕ ಎನ್.ಎಚ್. ಕೋನರೆಡ್ಡಿ, ಜಫರುಲ್ಲಾ ಖಾನ್ ಅವರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಉಳಿದಂತೆ ಪಕ್ಷದ ಬಹುತೇಕ ಹಾಲಿ ಶಾಸಕರು, ವಿಧಾನಪರಿಷತ್ ಸದಸ್ಯರನ್ನು ರಾಷ್ಟ್ರೀಯ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ.
ಇದಲ್ಲದೇ ಕೇರಳ, ತಮಿಳುನಾಡು, ಮಹಾರಾಷ್ಟ್ರ, ಆಂಧ್ರಪ್ರದೇಶ, ಉತ್ತರಪ್ರದೇಶ, ಉತ್ತರಾಂಚಲ, ನವದೆಹಲಿ, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್, ಪಶ್ಚಿಮ ಬಂಗಾಳ, ಜಮ್ಮು ಕಾಶ್ಮೀರ, ಜಾರ್ಖಂಡ್, ಹರಿಯಾಣ, ಪಂಜಾಬ್, ಅರುಣಾಚಲ ಪ್ರದೇಶದ ಪಕ್ಷದ ಮುಖಂಡರನ್ನು ಸಮಿತಿಗೆ ನೇಮಕ ಮಾಡಲಾಗಿದೆ. ರಾಷ್ಟ್ರೀಯ ಸಮಿತಿಯ 74 ಪದಾಧಿಕಾರಿಗಳು ಮತ್ತು 11 ಆಹ್ವಾನಿತರಲ್ಲಿ ಕರ್ನಾಟಕದವರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.