JDS ಎನ್ ಡಿಎ ಮೈತ್ರಿಕೂಟ ಸೇರ್ಪಡೆಯಿಂದ ಎರಡೂ ಪಕ್ಷಗಳಿಗೂ ಶಕ್ತಿ: ಜಿಟಿಡಿ
Team Udayavani, Sep 22, 2023, 7:18 PM IST
ಮೈಸೂರು: ರಾಜ್ಯ ಮತ್ತು ದೇಶದ ಹಿತದೃಷ್ಟಿಯಿಂದ ಎನ್ ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಸೇರ್ಪಡೆಯಾಗಲು ತೀರ್ಮಾನ ಮಾಡಿರುವುದನ್ನು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು ಮುಕ್ತವಾಗಿ ಸ್ವಾಗತಿಸಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಸಮಾಲೋಚನೆ ನಡೆಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮೈತ್ರಿಯನ್ನು ಅಧಿಕೃತವಾಗಿ ಘೋಷಣೆ ಮಾಡುತ್ತಿದ್ದಂತೆ ಜಿ.ಟಿ.ದೇವೇಗೌಡರು ಸ್ವಾಗತಿಸಿ, ಈ ಮೈತ್ರಿಯಿಂದ ಎರಡೂ ಪಕ್ಷಗಳಿಗೆ ಶಕ್ತಿ ಬರಲಿದೆ ಎಂದರು.
ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹಾಗೂ ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರು ಒಟ್ಟಿಗೆ ಕುಳಿತು ದೇಶದ ಹಿತಾಸಕ್ತಿ, ರಾಜ್ಯದ ಗಮನವನ್ನು ಇಟ್ಟುಕೊಂಡು ಸಮಾಲೋಚನೆ ಮಾಡಿದ್ದರು. ದೇಶದ ಹಿತಕ್ಕಾಗಿ ಜೆಡಿಎಸ್ ಎನ್ ಡಿಎ ಭಾಗವಾಗಬೇಕೆಂದು ಕೋರಿದ್ಷರ ಪರಿಣಾಮವಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ ಬಳಿಕ ಎನ್ ಡಿಎ ಭಾಗವಾಗಿ ಇರಲು ತೀರ್ಮಾನ ಮಾಡಿರುವುದು ಒಳ್ಳೆಯ ತೀರ್ಮಾನವಾಗಿದೆ. ದೇಶ,ರಾಜ್ಯಗಳ ಪರಿಸ್ಥಿತಿ ಅವಲೋಕನ ಸೇರಿದಂತೆ ಹಲವು ವಿಚಾರಗಳ ಕುರಿತು ಸಮಾಲೋಚನೆ ಮಾಡಿ ಒಂದಾಗಿರುವುದರಿಂದ ಅನುಕೂಲ ಆಗಲಿದೆ. ಕರ್ನಾಟಕದಲ್ಲಿ ಈ ಎರಡೂ ಪಕ್ಷಗಳಮೈತ್ರಿಯಿಂದ ಮುಂದಿನ ದಿನಗಳಲ್ಲಿ ಎರಡು ಪಕ್ಷಗಳಿಗೆ ದೊಡ್ಡ ಶಕ್ತಿ ಬರಲಿದೆ ಮತ್ತು ಇದರಿಂದ ಅನುಕೂಲ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ನಾಯಕರು ಮಾಡಿರುವ ಈ ತೀರ್ಮಾನವನ್ನು ನಾನು ಸ್ವಾಗತ ಮಾಡುವೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.