2023 ಚುನಾವಣೆಯಲ್ಲಿ ಜೆಡಿಎಸ್ ನಿಂದ 30-35 ಮಹಿಳೆಯರಿಗೆ ಟಿಕೆಟ್: ಹೆಚ್ ಡಿ ಕೆ ಘೋಷಣೆ
Team Udayavani, Sep 29, 2021, 1:13 PM IST
ರಾಮನಗರ: 2023ರ ಚುನಾವಣೆಯಲ್ಲಿ 30-35 ವಿಧಾನಸಭೆ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ಮೀಸಲು ಇಡುತ್ತೇವೆ ಎಂದು ಜೆಡಿಎಸ್ ಪಕ್ಷದ ವರಿಷ್ಠ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದರು.
ಜನತಾ ಪರ್ವ 1.O ಹಾಗೂ ಮಿಷನ್ 123 ಗುರಿಯೊಂದಿಗೆ ಬಿಡದಿಯ ಕೇತಗಾನಹಳ್ಳಿಯ ತೋಟದಲ್ಲಿ ಹಮ್ಮಿಕೊಳ್ಳಲಾಗಿರುವ 3ನೆ ದಿನದ ಸಂಘಟನಾ ಕಾರ್ಯಗಾರ ಆರಂಭವಾಗುವುದಕ್ಕೆ ಮುನ್ನ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಈಗಾಗಲೇ ಮೊದಲ ಹಂತದಲ್ಲಿ 7-8 ಜನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇವೆ. ಮಹಿಳೆಯರಿಗೂ ಹೆಚ್ಚಿನ ಶಕ್ತಿ ತುಂಬಲು ಈ ಬಾರಿ 30-35 ಸೀಟುಗಳನ್ನು ಮಹಿಳೆಯರಿಗೆ ಕೊಡಲಾಗುವುದು ಎಂದು ಅವರು ತಿಳಿಸಿದರು.
ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ಹೋಲಿಕೆ ಮಾಡಿದರೆ ನಮ್ಮ ಮಹಿಳಾ ಘಟಕ ಸ್ವಲ್ಪ ಹಿಂದೆ ಉಳಿದಿದೆ. ಇದನ್ನು ಸರಿ ಮಾಡುವ ಕೆಲಸ ಮಾಡಲಾಗುವುದು ಎಂದ ಅವರು, ಮಹಿಳಾ ಘಟಕಕ್ಕೆ ಹೆಚ್ಚಿನ ಶಕ್ತಿ ತುಂಬುವ ಕೆಲಸ ಈ ಕಾರ್ಯಾಗಾರದಿಂದ ಪ್ರಾರಂಭ ಮಾಡುತ್ತೇವೆ ಎಂದರು.
ಮಹಿಳೆಯರಿಗೂ ಟಾಸ್ಕ್:
ಬೂತ್ ಮಟ್ಟದಿಂದ ಮಹಿಳಾ ಘಟಕಕ್ಕೆ ಶಕ್ತಿ ತುಂಬುವ ಟಾಸ್ಕ್ ಕೊಡಲಾಗುವುದು. 3ನೇ ದಿನದ ಇಂದಿನ ಕಾರ್ಯಾಗಾರದಲ್ಲಿ ಮಹಿಳಾ ಘಟಕದ ಸದಸ್ಯರಿಗೆ ಪಕ್ಷ ಹಾಗೂ ಚುನಾವಣೆಗಾಗಿ ಒಂದು ದಿಕ್ಸೂಚಿ ನಿಗದಿ ಮಾಡಲಾಗುವುದು.30 ಜಿಲ್ಲೆಗಳಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಗೆದ್ದಿರುವ ಮಹಿಳಾ ಸದಸ್ಯರು ಕಾರ್ಯಾಗಾರದಲ್ಲಿ ಇದ್ದಾರೆ ಎಂದು ಕುಮಾರಸ್ವಾಮಿ ಅವರು ತಿಳಿಸಿದರು.
ಇದನ್ನೂ ಓದಿ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಪ್ರಕರಣ; ದೀಪಕ್ ರಾವ್ ಕೊಲೆ ಆರೋಪಿಯ ಬಂಧನ
ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಬಗ್ಗೆ ಇಂದು ಚರ್ಚೆ ಮಾಡುವುದರ ಜತೆಗೆ, ಎಲ್ಲ ಮಹಿಳಾ ನಾಯಕಿಯರಿಗೆ ಸೂಕ್ತ ತರಬೇತಿ ಕೊಡಲಾಗುವುದು. ಪ್ರತಿ ಕ್ಷೇತ್ರದಲ್ಲಿ 100 ಕುಟುಂಬಗಳ ಸಮಸ್ಯೆಗೆ ಪರಿಹಾರ ನೀಡುವ ಜವಾಬ್ದಾರಿಯನ್ನ ಪ್ರತಿ ಮಹಿಳಾ ನಾಯಕಿಯರಿಗೆ ನೀಡಲಾಗುತ್ತದೆ.
ಮಹಿಳೆಯರಿಗೆ 33% ಮೀಸಲು ವಿಧೇಯಕ:
ಮಾಜಿ ಪ್ರಧಾನಮಂತ್ರಿಗಳಾದ ದೇವೇಗೌಡರು ಮಹಿಳೆಯರಿಗೆ ಚುನಾವಣೆಯಲ್ಲಿ 33% ಮೀಸಲಾತಿ ಕೊಡಬೇಕು ಅಂತ ಧ್ವನಿ ಎತ್ತಿದ್ದರು. ಆದರೆ ಕಾಂಗ್ರೆಸ್- ಬಿಜೆಪಿ ಸರ್ಕಾರಗಳು ಮೀಸಲಾತಿ ಜಾರಿ ಮಾಡಲಿಲ್ಲ. ಕರ್ನಾಟಕದಿಂದಲೇ ಮಹಿಳಾ ಮೀಸಲಾತಿಗೆ ಧ್ವನಿ ಎತ್ತುವ ಕೆಲಸ ನಾವು ಮಾದುತ್ತೇವೆ. 2023 ರಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ 33% ಮೀಸಲಾತಿ ವಿಧೇಯಕಕ್ಕೆ ಜೀವ ತುಂಬುತ್ತೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೇಳಿದರು.
ಮಹಿಳಾ ಕಾರ್ಯಾಗಾರಕ್ಕೆ ಚಾಲನೆ:
ಇದೇ ವೇಳೆ ಶಾಸಕರಾದ ಶ್ರೀಮತಿ ಅನಿತಾ ಕುಮಾರಸ್ವಾಮಿ ಹಾಗೂ ಮಹಿಳಾ ಜೆಡಿಎಸ್ ರಾಜ್ಯಾಧ್ಯಕ್ಷೆಯಾದ ಲೀಲಾದೇವಿ ಆರ್ ಪ್ರಸಾದ್ ಅವರು ಕಾರ್ಯಗಾರವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟನೆ ನೆರವೇರಿಸಿದರು. ಈ ಕ್ಷಣಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಸಾಕ್ಷಿಯಾದರು.
ಪ್ರಾಸ್ತಾವಿಕವಾಗಿ ಲೀಲಾದೇವಿ ಆರ್ ಪ್ರಸಾದ್ ಅವರು ಮಾತನಾಡಿದರು. ದೇವದುರ್ಗದ ಮುಂದಿನ ಅಭ್ಯರ್ಥಿ ಕರಿಯಮ್ಮ, ಮಹಿಳಾ ಜನತಾದಳದ ಬೆಂಗಳೂರು ಘಟಕದ ಅಧ್ಯಕ್ಷೆ ರುತ್ ಮನೋರಮಾ ವೇದಿಕೆಯ ಮೇಲಿದ್ದರು.
ಪ್ರತಿ ವಿಧಾನಸಭೆ ಕ್ಷೇತ್ರದಿಂದ ತಲಾ ಇಬ್ಬರಂತೆ ಮಹಿಳಾ ಪ್ರತಿನಿಧಿಗಳು ಕಾರ್ಯಗಾರದಲ್ಲಿ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.