JDS protest: ಎಚ್‌ಡಿಕೆ ಕರಿಯ: ಜಮೀರ್ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ
ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ ಹಲವೆಡೆ ಜೆಡಿಎಸ್ ಪ್ರತಿಭಟನೆ
Team Udayavani, Nov 12, 2024, 11:44 PM IST
ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು “ಕರಿಯ’ ಎಂದು ಕರೆದಿದ್ದ ವಸತಿ ಸಚಿವ ಜಮೀರ್ ಅಹ್ಮದ್ ವಿರುದ್ಧ ಆಕ್ರೋಶ ಭುಗಿಲೆದ್ದಿದ್ದು, ಅವರನ್ನು ಸಚಿವ ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ರಾಜ್ಯದ ಹಲವೆಡೆ ಮಂಗಳವಾರ ಪ್ರತಿಭಟನೆ ನಡೆಸಿದರು.
ಮೈಸೂರಿನಲ್ಲಿ ಮಾಜಿ ಸಚಿವ ಸಾ.ರಾ. ಮಹೇಶ್ ನೇತೃತ್ವದಲ್ಲಿ ಜೆಡಿಎಸ್ ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿ ಕಾಂಗ್ರೆಸ್ ಸರಕಾರ, ಮುಖ್ಯಮಂತ್ರಿ, ಸಚಿವ ಜಮೀರ್ ಅಹ್ಮದ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸಾ.ರಾ. ಮಹೇಶ್ ಮಾತನಾಡಿ, ಜಮೀರ್ ಹೇಳಿಕೆ ಖಂಡನಾರ್ಹ. ಈ ಕೂಡಲೇ ರಾಜೀನಾಮೆ ಕೇಳಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ನಗರದಲ್ಲಿ ಆಯೋಜಿಸಿದ್ದ ವಕ್ಫ್ ಸಭೆಯಲ್ಲಿ ಜಮೀರ್ ಅಹ್ಮದ್ ಪಾಲ್ಗೊಂಡಿದ್ದಾರೆಂದು ತಿಳಿದು ಧರಣಿ ಮುಗಿದ ಬಳಿಕ ಮುತ್ತಿಗೆ ಹಾಕಲು ಮುಂದಾಗಿದ್ದರು. ಆದರೆ ತಮ್ಮ ಹೇಳಿಕೆಗೆ ಜಮೀರ್ ಕ್ಷಮೆ ಕೋರಿದ್ದರಿಂದ ಮುತ್ತಿಗೆಯನ್ನು ಕೈ ಬಿಟ್ಟರು.
ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್ ಕಾರ್ಯಕರ್ತರು ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು. ಮಂಡ್ಯ ಜಿಲ್ಲೆ ಮಳವಳ್ಳಿ, ಪಾಂಡವಪುರ, ಶ್ರೀರಂಗಪಟ್ಟಣ, ನಂಜನಗೂಡಿನಲ್ಲೂ ಜಮೀರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಸ್ತೆ ತಡೆ ನಡೆಸಿ, ಜೆಡಿಎಸ್ ಮುಖಂಡರು, ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಜನಾಂಗೀಯ ಘರ್ಷಣೆ ಹೇಳಿಕೆ
ಮಂಡ್ಯದಲ್ಲಿ ಮಾಜಿ ಶಾಸಕ ಕೆ. ಸುರೇಶ್ ಗೌಡ ಮಾತನಾಡಿ, ಜಮೀರ್ ಅವರು ಎಚ್.ಡಿ. ಕುಮಾರಸ್ವಾಮಿ ಅವರ ಬಣ್ಣದ ಬಗ್ಗೆ ಮಾತನಾಡುವ ಮೂಲಕ ಜನಾಂಗೀಯ ಘರ್ಷಣೆಗೆ ಕಾರಣವಾಗುವ ಹೇಳಿಕೆ ನೀಡಿದ್ದಾರೆ ಎಂದು ಕಿಡಿಕಾರಿದರು. ನಾವು ಹಿಂದೂಗಳು ಪೂಜೆ ಮಾಡುವ ದೇವರ ಮೂರ್ತಿಗಳು ಸಹ ಕಪ್ಪು. ಇದಕ್ಕೆ ಸಾರ್ವಜನಿಕರು ತಕ್ಕ ಉತ್ತರ ಕೊಡುತ್ತಾರೆಂದು ಹೇಳಿದರು.
ಒಮ್ಮೆಯೂ ಜಮೀರ್‌ಗೆ
ಎಚ್‌ಡಿಕೆ ಕುಳ್ಳ ಎಂದಿಲ್ಲ
ಮಂಡ್ಯ: ದೇವರಲ್ಲಿ ಪ್ರಮಾಣ ಮಾಡುತ್ತೇನೆ. ಒಂದು ದಿನ ಕೂಡ ಕುಮಾರಸ್ವಾಮಿ ಅವರು ಜಮೀರ್ ಅಹಮದ್ ಅವರನ್ನು ಕುಳ್ಳ ಎಂದು ಕರೆದಿಲ್ಲ. ಅದಕ್ಕೆ ನಾನೇ ಸಾಕ್ಷಿ ಎಂದು ಮಾಜಿ ಶಾಸಕ ಕೆ. ಅನ್ನದಾನಿ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಚಿವ ಜಮೀರ್ ಅಹಮದ್ ಕೇಂದ್ರ ಸಚಿವ ಎಚ್. ಡಿ.ಕುಮಾರಸ್ವಾಮಿ ಅವರನ್ನು ಅವಮಾನಿಸಿದ್ದಾರೆ. ಅದನ್ನು ನಾವು ಖಂಡಿಸುತ್ತೇವೆ. ಜಮೀರ್‌ಗೆ ಕನಿಷ್ಠ ಮಾತನಾಡುವ ಸೌಜನ್ಯ ಗೊತ್ತಿಲ್ಲ ಎಂದು ಹೇಳಿದರು.
ಸಂಪುಟದಿಂದ ಜಮೀರ್ ಕೈಬಿಡಿ: ಒಕ್ಕಲಿಗರ ಸಂಘ ಆಗ್ರಹ
ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಸಚಿವ ಜಮೀರ್ ಅಹಮದ್ ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸುವಂತೆ ರಾಜ್ಯ ಒಕ್ಕಲಿಗರ ಸಂಘ ಮತ್ತು ರಾಜ್ಯ ಒಕ್ಕಲಿಗರ ಮಹಾಸಭಾವು ಮುಖ್ಯಮಂತ್ರಿ
ಜಮೀರ್ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು ಒಕ್ಕಲಿಗರ ಸಂಘದ ಅಧ್ಯಕ್ಷ ಸಿ.ಎನ್. ಬಾಲ ಕೃಷ್ಣ ಆಗ್ರಹಿಸಿದ್ದಾರೆ. ರಾಜ್ಯ ಒಕ್ಕಲಿಗ ಮಹಾಸಭಾ ಕೂಡ ಸಚಿವ ಜಮೀರ್ ಹೇಳಿಕೆಯನ್ನು ಖಂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.