ಸಿದ್ದರಾಮಯ್ಯ ಸೊಕ್ಕಿನ ಮನುಷ್ಯ.. ದೇವೇಗೌಡರನ್ನು ಟೀಕಿಸಿದ್ದ ಸಿಎಂ ಮೇಲೆ JDS ಆಕ್ರೋಶ


Team Udayavani, Jan 7, 2024, 12:59 PM IST

ಸಿದ್ದರಾಮಯ್ಯ ಸೊಕ್ಕಿನ ಮನುಷ್ಯ.. ದೇವೇಗೌಡರನ್ನು ಟೀಕಿಸಿದ್ದ ಸಿಎಂ ಮೇಲೆ JDS ಆಕ್ರೋಶ

ಬೆಂಗಳೂರು: ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡರ ಬಗ್ಗೆ ಲಘುವಾಗಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ಈ ಎಕ್ಸ್ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್ ಪಕ್ಷವು, ಸಿದ್ದರಾಮಯ್ಯ ಅವರು ಕರ್ನಾಟಕದ ಸೊಕ್ಕಿನ ಮನುಷ್ಯ ಟೀಕಾಪ್ರಹಾರ ನಡೆಸಿದೆ. ಅಲ್ಲದೆ, ನೈಸ್ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯಲು ಯಾವ ಅತೀಂದ್ರ ಶಕ್ತಿ ಅಡ್ಡವಿದೆ ಎಂದು ಪ್ರಶ್ನೆ ಮಾಡಿದೆ.

ಮಾಜಿ ಪ್ರಧಾನಿಗಳು ಹೇಳಿದ್ದರಲ್ಲಿ ಲವಲೇಶವೂ ಉತ್ಪ್ರೇಕ್ಷೆ ಇಲ್ಲ. ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿ ಇಲ್ಲಿ ಕಾಂಗ್ರೆಸ್ ಅಂತ್ಯ ಕಾಣುತ್ತದೆ, ಹೌದು. ದೇಶವನ್ನು ಜಾತಿ,ಧರ್ಮದಿಂದಲೇ ವಿಭಜಿಸಿ ಪ್ರಜಾಪ್ರಭುತ್ವವನ್ನೇ ಅಂತ್ಯ ಕಾಣಿಸಲು ಹೊರಟಿದ್ದ ಕಾಂಗ್ರೆಸ್, ಚರಿತ್ರೆಯ ಕೊನೇಪುಟದಲ್ಲಿ ಏದುಸಿರು ಬಿಡುತ್ತಿದೆ ಎಂದು ಜೆಡಿಎಸ್ ತಿರುಗೇಟು ನೀಡಿದೆ.

ಗೌಡರ ಕೈ ಅನುಗ್ರಹದ ದ್ಯೋತಕ:

ಶಾಪ ಹಾಕುವುದನ್ನು ಗೌಡರೆಂದೂ ಮಾಡಿಲ್ಲ, ಮಾಡುವುದೂ ಇಲ್ಲ.ಅವರ ಹಸ್ತ ಅಭಯ ಹಸ್ತ. ಅದು ಆಶೀರ್ವಾದ, ಅನುಗ್ರಹದ ದ್ಯೋತಕ. ಗುರುಸ್ವಾಮಿ ಎಂಬ ಅನಾಮಧೇಯ ವ್ಯಕ್ತಿ ಎದುರು ಸೋತ ನಿಮ್ಮನ್ನು ಅನುಗ್ರಹದಲ್ಲಿಯೇ ಅವರು ಅನುಗ್ರಹಿಸಿದ್ದು ಮರೆತಿರಾ? ಅಂದು ಆ ಕೈ ನಿಮ್ಮ ಕೈ ಹಿಡಿಯದಿದ್ದರೆ ನೀವಿಷ್ಟು ಎತ್ತರಕ್ಕೇರಲು ಸಾಧ್ಯವಿತ್ತೆ ಸಿದ್ದರಾಮಯ್ಯನವರೇ? ಎಂದು ಜೆಡಿಎಸ್, ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದೆ.

ಅಪರ ಬ್ರೂಟಸ್ ಎಂದು ಕಿಡಿ:

ಜಾತ್ಯತೀತತೆ ನೀವಷ್ಟೇ ಹೇಳಬೇಕು ಸಿದ್ದರಾಮಯ್ಯನವರೇ? ಸಿಎಂ ಸಚಿವಾಲಯದ ಕೊಳಕು ಕೊಡವಿದರೆ ನಿಮ್ಮ ಢೋಂಗಿ ಜಾತ್ಯತೀತತೆಯ ಅಸಲಿ ಮುಖ ಕಳಚಿ ಬೀಳುತ್ತದೆ. ಅಭಿಪ್ರಾಯ, ಭಿನ್ನಾಭಿಪ್ರಾಯ, ಪ್ರಾಮಾಣಿಕತೆ, ಜಾತ್ಯತೀತತೆ.. ಈ ಪದಗಳೆಲ್ಲ ನಿಮಗೆ ಆಗಿ ಬರಲ್ಲ. ನಿಮ್ಮದೇನಿದ್ದರೂ ಏಕಾಭಿಪ್ರಾಯ. ಸರ್ವಾಧಿಕಾರ ಧೋರಣೆ, ತುಘಲಕ್ ಮನಃಸ್ಥಿತಿ. ದೇವೇಗೌಡರು  ಸಾಮಾಜಿಕ ನ್ಯಾಯ, ಜಾತ್ಯತೀತತೆ, ನಂಬಿಕೆ, ವಿಶ್ವಾಸಾರ್ಹತೆ ಉಳ್ಳವರು ಆಗಿಲ್ಲದಿದ್ದಿದ್ದರೆ ನೀವು ಈವರೆಗೆ ಏನೇನೋ ಆಗಿದ್ದಿರಲ್ಲಾ… ಅದರಲ್ಲಿ ಏನೊಂದೂ ಆಗುತ್ತಿರಲಿಲ್ಲ. ನಿಮಗೆ ಏಣಿಯಾಗಿ, ಹೆಗಲಾಗಿದ್ದ ಅವರ ಬೆನ್ನಿಗಿರಿದ ‘ಅಪರ ಬ್ರೂಟಸ್’ ನೀವು. ಬೂಟಾಟಿಕೆ ಮಾಡಿಕೊಂಡೇ ರಾಜಕೀಯ ಬದುಕು ಕಟ್ಟಿಕೊಂಡವರು ನೀವು ಎಂದು ಜೆಡಿಎಸ್ ಕುಟುಕಿದೆ.

ಯಾರು, ಯಾರ ಸಂಗ ಮಾಡಿದ್ದರು? ಯಾವ ಗಾಳಿ ಯಾರಿಗೆ ಸೋಕಿತ್ತು? ನಿಮ್ಮ ಇಂಥ ಕಾಗಕ್ಕ,ಗೂಬ್ಬಕ್ಕ ಕಥೆಗಳ ಮೂಲಕ್ಕೆ ಹೋದರೆ ನೀವೇ ಬೆತ್ತಲೆ ಸ್ಥಿತಿಯಲ್ಲಿ ನಿಲ್ಲಬೇಕಾಗುತ್ತದೆ. ಅಂತಹ ಸ್ಥಿತಿ ತಂದುಕೊಳ್ಳಬೇಡಿ. ನಿಮ್ಮ ರಾಜಕೀಯ ಅಂತ್ಯಕಾಲ ಆನಂದವಾಗಿರಲಿ, ಅದಕ್ಕೆ ಕಳಂಕ ಮೆತ್ತಿಕೊಳ್ಳಬೇಡಿ ಎನ್ನುವುದು ನಮ್ಮ ಕಳಕಳಿಯ ಸಲಹೆ ಎಂದಿದೆ ಜೆಡಿಎಸ್.

ಸಿದ್ದಾರಮೆ ಆಟ ಯಾರಿಗೆ ಎಲ್ಲರಿಗೂ ಗೊತ್ತು:

ನಿಮ್ಮಂಥ ಆತ್ಮಸಾಕ್ಷಿ ಹೀನರು ಇದ್ದರೆ ಕಾಂಗ್ರೆಸ್ ಅಂತ್ಯವಾಗುತ್ತದೆ, ನಿಜ. ಜೆಡಿಎಸ್ ಪಕ್ಷವನ್ನು ಅಂತ್ಯ ಕಾಣಿಸಲು ನೀವು ಆಡುತ್ತಿರುವ ‘ಸಿದ್ದಾರಮೆ ಆಟ’ ಯಾರಿಗೆ ಗೊತ್ತಿಲ್ಲ? ಇವತ್ತಿಗೂ ಕತ್ತಲಾದೊಡನೆ ನಮ್ಮ ಪಕ್ಷದ ನಾಯಕರ ಮನೆಗಳ ಮುಂದೆ ಠಳಾಯಿಸುವ ನಿಮ್ಮ ಕತ್ತಲು ಗಿರಾಕಿಗಳ ಬಗ್ಗೆ ಹೇಳಬೇಕೆ? ಜೆಡಿಎಸ್ ಅಂತ್ಯ ನಿಮ್ಮ ಕನಸು ಅಷ್ಟೇ. ಸೊಕ್ಕು ಎನ್ನುವುದು ನಿಮ್ಮ ಪೇಟೆಂಟ್. ಆ ನಿಮ್ಮ ಸದ್ಗುಣ(!?)ವನ್ನು ದೇವೇಗೌಡರಿಗೆ ಅಂಟಿಸುವ ಪಾಪದ ಕೆಲಸ ಮಾಡಬೇಡಿ. ಕರ್ನಾಟಕದ ‘ಸೊಕ್ಕಿನ ಮನುಷ್ಯ’ ಅಂತ ಯಾರಾದರೂ ಇದ್ದರೆ ಅದು ತಾವೇ ಸಿದ್ಧರಾಮಯ್ಯನವರೇ. ನಿಮ್ಮ ಪಕ್ಷದ ಪಡಸಾಲೆಗೆ ಬಂದರೆ ಅಲ್ಲಿರುವ ಪ್ರತಿ ಬಾಗಿಲು ನಿಮ್ಮ ಸೊಕ್ಕಿನ ಕಥೆಗಳನ್ನೇ ಹೇಳುತ್ತವೆ ಎಂದು ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.

ಜನಾದೇಶವನ್ನು ದೇವೇಗೌಡರು ಎಂದೂ ಧಿಕ್ಕರಿಸಿಲ್ಲ. ಶಿರಸಾ ವಹಿಸಿದ್ದಾರೆ. ಅಂತಹ ಆಚಾರ, ವಿಚಾರ, ಸದ್ವಿಚಾರ, ಶಿಷ್ಟಾಚಾರವನ್ನು ನಿಮಗೆ ಕಲಿಸಿದ್ದೇ ಅವರು. ಆದರೆ, ಅಡ್ಡದಾರಿ ಆಯ್ಕೆ ಮಾಡಿಕೊಂಡ ನಿಮಗೆ ಇವೆಲ್ಲಾ ರುಚಿಸುತ್ತಿಲ್ಲ. ಸದ್ಯಕ್ಕೆ ನಿಮಗೆ ನೆಲ ಕಾಣುತ್ತಿಲ್ಲ. ನೆಲವೇ ಬುದ್ದಿ ಕಲಿಸುವ ಕಾಲ ಹತ್ತಿರದಲ್ಲಿದೆ. ಕಾಲ ಕ್ಷಣಿಕ. ಜೆಡಿಎಸ್, ಬಿಜೆಪಿ ಬಿ ಟೀಮ್ ಎನ್ನುವ ನೀವು ಚುನಾವಣೆ ಬಂದಾಗಲೆಲ್ಲಾ ಮಾಡುವ ಮೊದಲ ಕೆಲಸ ಮ್ಯಾಚ್ ಫಿಕ್ಸಿಂಗ್ & ಇನ್ನೊಂದು ಟೀಮ್ ಗೆ ಬಾಲಂಗೋಚಿ ಆಗುವುದು. 2023ರ ವಿಧಾನಸಭೆ ಚುನಾವಣೆಯಲ್ಲೂ ಇದೇ ಆಟ ಅಡಿದಿರಿ. ಆ ನಿಮ್ಮ ರಂಗಿನಾಟ, ಕಳ್ಳಾಟ ದೇಶ ರಾಜಕಾರಣಕ್ಕೆ ಮಾದರಿ!! ಏನಂತೀರಿ? ಎಂದು ಜೆಡಿಎಸ್ ಕೇಳಿದೆ.

ನೈಸ್ ಗೆ’ಅತೀಂದ್ರ ಶಕ್ತಿ’ ಅಡ್ಡವಾಗಿ ಕೂತಿದೆಯಾ?:

ದೇವೇಗೌಡರು ಕೇಳಿದ್ದು ನೈಸ್ ಯೋಜನೆಯನ್ನು ಸರಕಾರದ ವಶಕ್ಕೆ ಪಡೆಯಿರಿ ಎಂದು. ಅವರು ಅದನ್ನೇ ಆಗ್ರಹಿಸಿ ಪತ್ರ ಬರೆದಿದ್ದರು. ನೀವು ಆ ಪಾಯಂಟಿಗೇ ಬರುತ್ತಿಲ್ಲ. ಸತ್ಯದ ಸೊಲ್ಲೆತ್ತದೆ ಸೈಲಂಟಾಗಿ ನೈಸ್ ಅನ್ನು ಪಕ್ಕಕ್ಕೆ ಸರಿಸುತ್ತಿದ್ದೀರಿ. ಯಾಕೆ? ಹೇಳಿಬಿಡಿ ಕಾರಣ ಎಂದಿರುವ ಜೆಡಿಎಸ್; ನೈಸ್ ಯೋಜನೆ ಸರಕಾರದ ವಶಕ್ಕೆ ಪಡೆಯುವುದು ನಿಮಗೆ ಇಷ್ಟ ಇಲ್ಲದಿದ್ದರೆ ಹೇಳಿ? ಆ ಕಳಂಕ, ಆ ಕಪ್ಪುಚುಕ್ಕೆ ಹೊತ್ತುಕೊಂಡೇ ರಾಜಕೀಯ ಅಂತ್ಯ ಕಾಣಬೇಕೆ? ನಿಮ್ಮ ಹಣೆಯಲ್ಲಿ ಹಾಗೆಯೇ  ಬರೆದಿದ್ದರೆ ಯಾರು ಏನು ಮಾಡಿಯಾರು? ಅಲ್ಲಿಯೂ ಯಾವುದಾದರೂ ‘ಅತೀಂದ್ರ ಶಕ್ತಿ’ ಅಡಗಿ ಕೂತಿದೆಯಾ? ನಿಮ್ಮ ಮೌನ ಆ ಅನುಮಾನಕ್ಕೆ ಕಾರಣ. ದಯಮಾಡಿ ಮಾತನಾಡಿ ಎಂದು ಒತ್ತಾಯ ಮಾಡಿದೆ.

ಟಾಪ್ ನ್ಯೂಸ್

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!

Explained: ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

9

Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ

ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…

ಸವದತ್ತಿ:ರೈಲು ಮಾರ್ಗ- ಸವದತ್ತಿಗೇ ಜಾಸ್ತಿ ಲಾಭ! ಆರ್ಥಿಕ ಅಭಿವೃದ್ಧಿಗೆ ನೆರವು…

Putturu-Police

Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್‌ ಕುಮಾರ್‌ ರೈ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.