ಹೊರಟ್ಟಿಗೆ ಸಭಾಪತಿ ಪಟ್ಟ: ಜೆಡಿಎಸ್ ಬೆಂಬಲ?
Team Udayavani, Jun 6, 2017, 3:45 AM IST
ಬೆಂಗಳೂರು: ವಿಧಾನಪರಿಷತ್ ಹಿರಿಯ ಸದಸ್ಯರಾದ ಜೆಡಿಎಸ್ ಪಕ್ಷದ ನಾಯಕ ಬಸವರಾಜ್ ಹೊರಟ್ಟಿ ಅವರನ್ನು ಸಭಾಪತಿ ಮಾಡುವ ಷರತ್ತಿಗೊಳಪಟ್ಟು ಸಭಾಪತಿ ಡಿ.ಎಚ್. ಶಂಕರಮೂರ್ತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸುವ ವಿಷಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲು ಜೆಡಿಎಸ್ ಚಿಂತನೆ ನಡೆಸಿದೆ.
ಕಾಂಗ್ರೆಸ್ ಬೆಂಬಲ ಕೇಳುವ ತನಕ ತಟಸ್ಥ ಧೋರಣೆ ಅನುಸರಿಸಲು ಜೆಡಿಎಸ್ ನಿರ್ಧರಿಸಿದೆ ಯಾದರೂ ಅವಿಶ್ವಾಸ ಮಂಡನೆಗೆ ಕಾಂಗ್ರೆಸ್ ಅಧಿಕೃತವಾಗಿ ಬೆಂಬಲ ಕೇಳಿದಾಗ ತನ್ನ ಪಕ್ಷಕ್ಕೇ ಸಭಾಪತಿ ಸ್ಥಾನ ನೀಡುವುದಾದರೆ ಮಾತ್ರ ಶಂಕರಮೂರ್ತಿ ಪದಚ್ಯುತಿ ಪ್ರಕ್ರಿಯೆಯಲ್ಲಿ ಭಾಗವಹಿಸುವ ಸಂದೇಶವನ್ನು ಕಾಂಗ್ರೆಸ್ಗೆ ರವಾನಿಸಿದೆ ಎಂದು ಹೇಳಲಾಗಿದೆ. ಈಗ ಕಾಂಗ್ರೆಸ್ ತೆಗೆದುಕೊಂಡಿರುವ ನಿಲುವಿನಿಂದ ಜೆಡಿಎಸ್ಗೆ ಯಾವುದೇ ರೀತಿಯ ಲಾಭವಿಲ್ಲ. ಈ ಸಂದರ್ಭ ಕಾಂಗ್ರೆಸನ್ನು ಬೆಂಬಲಿಸಿದರೆ, ಬಿಜೆಪಿ ಅದನ್ನೇ ಅಸ್ತ್ರವಾಗಿರಿಸಿಕೊಂಡು ಚುನಾ ವಣೆಯಲ್ಲಿ ಎರಡೂ ಪಕ್ಷಗಳ ವಿರುದ್ಧ ವಾಗ್ಧಾಳಿ ನಡೆಸಲು ಅನುಕೂಲವಾಗಬಹುದು ಎಂಬ ಅಭಿಪ್ರಾಯ ಜೆಡಿಎಸ್ ವಲಯದಲ್ಲಿ ಮೂಡಿದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.