ಜಿಂದಾಲ್‌ಗೆ ಭೂಮಿ ಪರಭಾರೆ ಬೇಡ: ಈಶ್ವರಪ್ಪ
Team Udayavani, Jun 17, 2019, 3:05 AM IST
ಬಳ್ಳಾರಿ: ಜಿಂದಾಲ್ ಸಂಸ್ಥೆಗೆ 3,667 ಎಕರೆ ಜಮೀನನ್ನು ಯಾವುದೇ ಕಾರಣಕ್ಕೂ ಪರಭಾರೆ ಮಾಡಬಾರದೆಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಂದಾಲ್ ಸಂಸ್ಥೆಗೆ ಜಮೀನು ಪರಭಾರೆ ಮಾಡುವ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಹಾಲಿ ಸಿಎಂ ಕುಮಾರಸ್ವಾವಿ ಯಾವುದೇ ಅಭಿಪ್ರಾಯ ವ್ಯಕ್ತಪಡಿಸದೇ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ ಎಂದು ಹೇಳಿದರು.
ಕಾಂಗ್ರೆಸ್‌ನ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ಎಸ್.ಆರ್.ಪಾಟೀಲ್, ಆನಂದ್‌ಸಿಂಗ್, ಜೆಡಿಎಸ್ ಶಾಸಕ ವಿಶ್ವನಾಥ್ ಅವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಅವರೊಬ್ಬರೇ ಜಮೀನು ಪರಭಾರೆ ಮಾಡುವುದಾಗಿ ಭಂಡತನದ ಹೇಳಿಕೆ ನೀಡುತ್ತಿದ್ದಾರೆ.
ಇದನ್ನು ಗಮನಿಸಿದಾಗ ಜಿಂದಾಲ್ ಸಂಸ್ಥೆಯಿಂದ ಕಿಕ್‌ಬ್ಯಾಕ್ ಆಗಿದ್ದು, ಆ ಒತ್ತಡಕ್ಕೆ ಜಮೀನು ಪರಭಾರೆ ಮಾಡುತ್ತೇವೆ ಎನ್ನುತ್ತಿದ್ದಾರೆ. ಜಿಂದಾಲ್ ಸಂಸ್ಥೆ ಆಸ್ತಿ ಲೂಟಿ ಹೊಡೆಯಲು ಹಲವರು ಪ್ರಯತ್ನಿಸುತ್ತಿದ್ದಾರೆ. ಹಾಗಾಗಿ ಜಮೀನು ಉಳಿಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ವಿಧಾನಸೌಧವನ್ನು ಸಹ ಕಾಂಗ್ರೆಸ್‌ನವರು ಮಾರಿ ಬಿಡುತ್ತಾರೆಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.