ಪ್ರಾದೇಶಿಕ ಮಟ್ಟದಲ್ಲೂ ಉದ್ಯೋಗ ಮೇಳ: ಸಿಎಂ ಸಿದ್ದರಾಮಯ್ಯ

ಕೌಶಲ ಅಭಿವೃದ್ಧಿ ಕಾರ್ಯಕ್ರಮ ಆಯೋಜನೆ, ಕೌಶಲ ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ ಸರಕಾರ ಒತ್ತು

Team Udayavani, Feb 26, 2024, 11:56 PM IST

ಪ್ರಾದೇಶಿಕ ಮಟ್ಟದಲ್ಲೂ ಉದ್ಯೋಗ ಮೇಳ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ದಿನಗಳಲ್ಲಿ ಪ್ರಾದೇಶಿಕ ಮಟ್ಟದಲ್ಲೂ ಬೃಹತ್‌ ಉದ್ಯೋಗ ಮೇಳಗಳನ್ನು ಆಯೋಜಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮ(ಕೆಎಸ್‌ಡಿಸಿ)ದಿಂದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿರುವ ಯುವ ಸಮೃದ್ಧಿ ಸಮ್ಮೇಳನ ಬೃಹತ್‌ ಉದ್ಯೋಗ ಮೇಳ-2024ರ ಉದ್ಘಾಟನೆ ಹಾಗೂ ಮೇಳದ ಲಾಂಛನ ಅನಾವರಣಗೊಳಿಸಿ ಅವರು ಮಾತನಾಡಿದರು.

ಸರಕಾರ ಉದ್ಯೋಗ ಸೃಜನೆ ಮಾಡ ಬೇಕು, ಉದ್ಯೋಗ ಬಯಸುವವರಿಗೆ ಉದ್ಯೋಗ ನೀಡಬೇಕು ಎನ್ನುವ ಉದ್ದೇಶದಿಂದ ಇನ್ನು ಮುಂದೆ ಪ್ರತಿವರ್ಷ ರಾಜ್ಯ ಹಾಗೂ ಪ್ರಾದೇಶಿಕ ಮಟ್ಟದಲ್ಲಿ ಮೇಳವನ್ನು ಆಯೋಜಿಸುತ್ತೇವೆ. ಇದರ ಜತೆಗೆ ಕೌಶಲ ಅಭಿವೃದ್ಧಿ ಕಾರ್ಯಕ್ರಮಗಳ ಆಯೋಜನೆ ಮತ್ತು ಕೌಶಲ ಅಭಿವೃದ್ಧಿ ಕೇಂದ್ರಗಳ ಸ್ಥಾಪನೆಗೂ ಸರಕಾರ ಒತ್ತು ನೀಡಲಿದೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ.

ಕೇಂದ್ರ ಸರಕಾರಕ್ಕೆ ಚಾಟಿ
ಪ್ರಧಾನಿ ಮೋದಿ ಅವರು ಹತ್ತು ವರ್ಷಗಳ ಹಿಂದೆ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಭರವಸೆ ನೀಡಿದ್ದರು. ಆ ಲೆಕ್ಕದಲ್ಲಿ 10 ವರ್ಷಗಳಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಸಬೇಕಿತ್ತು. ಆದರೆ ಮೋದಿಯವರು ಇರುವ ಉದ್ಯೋಗ ಅವಕಾಶವನ್ನೂ ಕಸಿದುಕೊಂಡ ಕಾರಣ ನಿರುದ್ಯೋಗ ದೊಡ್ಡ ಮಟ್ಟದಲ್ಲಿ ಹೆಚ್ಚಾಗಿದೆ. 2014ರಲ್ಲಿ ಶೇ.2.1ರಷ್ಟಿದ್ದ ನಿರುದ್ಯೋಗ ಪ್ರಮಾಣ ಈಗ ಶೇ. 8.40ಕ್ಕೆ ಏರಿಕೆಯಾಗಿದೆ ಎಂದು ಸಿದ್ದರಾಮಯ್ಯ ಟೀಕಿಸಿದರು.

2016ರಲ್ಲಿ ನಮ್ಮ ಸರಕಾರದ ಅವಧಿಯಲ್ಲಿ ಕೌಶಲಾಭಿವೃದ್ಧಿ ಇಲಾಖೆಯನ್ನು ಆರಂಭಿಸಿ ಮಾನವ ಸಂಪನ್ಮೂಲ ಒದಗಿಸಿದೆವು. ಇಂದು ಮಾರುಕಟ್ಟೆಯಲ್ಲಿ ಬೇಡಿಕೆ ಇರುವ ಕೌಶಲಗಳಿಗೆ ಅನುಗುಣವಾಗಿ ಕೌಶಲ ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು.

ಉದ್ಯೋಗ ಸಿಗದಿದ್ದರೆ
ಕೌಶಲ ತರಬೇತಿ
ಕೌಶಲಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣ ಪ್ರಕಾಶ್‌ ಪಾಟೀಲ್‌ ಮಾತನಾಡಿ, ಯುವ ಪೀಳಿಗೆಗೆ ಭದ್ರತೆ ನೀಡಲು, ಎಲ್ಲ ರೀತಿಯ ಪ್ರೋತ್ಸಾಹ ನೀಡಲು ಸರಕಾರ ಬದ್ಧವಾಗಿದೆ. ಈ ಯುವ ಸಮೃದ್ಧಿ ಉದ್ಯೋಗ ಮೇಳದ ಮೂಲಕ ಎಲ್ಲ ಕನಿಷ್ಠ ಹಾಗೂ ಗರಿಷ್ಠ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳನ್ನು ಒಳಗೊಂಡಂತೆ ಉದ್ಯೋಗಾವಕಾಶ ಪಡೆಯುವ ಅವಕಾಶ ಕಲ್ಪಿಸಲಾಗಿದೆ. ನೇರವಾಗಿ ಉದ್ಯಮಿಗಳಿಂದಲೇ ನೇಮಕಾತಿ ಪ್ರಕ್ರಿಯೆ ನಡೆಯುವುದರಿಂದ ಮಧ್ಯವರ್ತಿಗಳಿಗೆ ಅವಕಾಶ ಇರುವುದಿಲ್ಲ ಎಂದರು.

ಗ್ರಾಮೀಣಾಭಿವೃದ್ಧಿ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹಮದ್‌, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್‌, ವ್ಯವಸ್ಥಾಪಕ ನಿರ್ದೇಶಕಿ ಕನಗವಲ್ಲಿ ಸೇರಿದಂತೆ ಕೌಶಲ ಅಭಿವೃದ್ಧಿ ಇಲಾಖೆಯ ಉನ್ನತ ಅಧಿಕಾರಿಗಳು ಉದ್ಘಾಟನ ಸಮಾರಂಭದಲ್ಲಿ ಪಾಲ್ಗೊಂಡರು.

ಯುವ ಜನರ ಸದೃಢಗೊಳಿಸಲು ತೀರ್ಮಾನ
ಉದ್ಯೋಗಕ್ಕಾಗಿ 5 ಕಂಪೆನಿಗಳನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರÂವಿದೆ. ಉದ್ಯೋಗ ಮೇಳದಲ್ಲಿ ಉದ್ಯೋಗ ಸಿಗದವರಿಗೆ ಕೌಶಲ ತರಬೇತಿ ನೀಡಿ, ಉದ್ಯೋಗ ಸಿಗುವವರೆಗೆ ನಿಮ್ಮ ಸಂಪರ್ಕದಲ್ಲಿರುತ್ತೇವೆ. ಬಜೆಟ್‌ನಲ್ಲಿ ಕೌಶಲಾಭಿವೃದ್ಧಿ ಇಲಾಖೆಗೆ ಹೆಚ್ಚಿನ ಆದ್ಯತೆ ನೀಡಿದ್ದು, ರಾಜ್ಯದ ಯುವ ಜನರನ್ನು ಸದೃಢಗೊಳಿಸಲು ಸರಕಾರ ತೀರ್ಮಾನಿಸಿದೆ.
-ಡಾ| ಶರಣ ಪ್ರಕಾಶ್‌ ಪಾಟೀಲ್‌,
ಕೌಶಲಾಭಿವೃದ್ಧಿ ಮತ್ತು ವೈದ್ಯಕೀಯ ಶಿಕ್ಷಣ ಸಚಿವ

ಟಾಪ್ ನ್ಯೂಸ್

Water Supply

Mangaluru;’ಸ್ವಚ್ಛ ಸುಜಲ’ದತ್ತ ಗ್ರಾಮ ಪಂಚಾಯತ್‌ಗಳು

President  ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

prahlad-joshi

Rahul Gandhi ಮೊಹಬ್ಬತ್‌ ಕೀ ದೂಕಾನ್‌ನಲ್ಲಿ ಹ*ತ್ಯೆ-ಆತ್ಮಹ*ತ್ಯೆ: ಪ್ರಹ್ಲಾದ್‌ ಜೋಶಿ

KSRT

Bus ticket ದರ ಶೇ. 15 ದುಬಾರಿ; ಸರಕಾರ ಸಮಜಾಯಿಷಿ

ಶಬರಿಮಲೆಗೆ ಕಾಡಿನ ದಾರಿಯಲ್ಲಿ ಬರುವವರಿಗಿದ್ದ ಪಾಸ್‌ ರದ್ದು: ಮಂಡಳಿ

Kerala ಶಬರಿಮಲೆಗೆ ಕಾಡಿನ ದಾರಿಯಲ್ಲಿ ಬರುವವರಿಗಿದ್ದ ಪಾಸ್‌ ರದ್ದು: ಮಂಡಳಿ

KEA: ಒಪ್ಪಿಗೆ ಬಳಿಕ 747 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

KEA: ಒಪ್ಪಿಗೆ ಬಳಿಕ 747 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KSRT

Bus ticket ದರ ಶೇ. 15 ದುಬಾರಿ; ಸರಕಾರ ಸಮಜಾಯಿಷಿ

KEA: ಒಪ್ಪಿಗೆ ಬಳಿಕ 747 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

KEA: ಒಪ್ಪಿಗೆ ಬಳಿಕ 747 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ರಾಜ್ಯಕ್ಕೆ ನಡ್ಡಾ ಆಗಮನ: ರಾಜ್ಯ ನಾಯಕರ ಜತೆ ಚರ್ಚೆ

BJP: ರಾಜ್ಯಕ್ಕೆ ನಡ್ಡಾ ಆಗಮನ: ರಾಜ್ಯ ನಾಯಕರ ಜತೆ ಚರ್ಚೆ

ಮಾಸಿಕ ಗೌರವಧನದ ಆಧಾರದಲ್ಲಿ ತಜ್ಞ ವೈದ್ಯರ ನೇಮಕಕ್ಕೆ ತೀರ್ಮಾನ

Health Department: ಮಾಸಿಕ ಗೌರವಧನದ ಆಧಾರದಲ್ಲಿ ತಜ್ಞ ವೈದ್ಯರ ನೇಮಕಕ್ಕೆ ತೀರ್ಮಾನ

ಬಿಜೆಪಿಯಿಂದ ಸಚಿನ್‌ ಪಾಂಚಾಳ್‌ ಡೆತ್‌ನೋಟ್‌ ಪ್ರತಿ ಬಿಡುಗಡೆ

ಬಿಜೆಪಿಯಿಂದ ಸಚಿನ್‌ ಪಾಂಚಾಳ್‌ ಡೆತ್‌ನೋಟ್‌ ಪ್ರತಿ ಬಿಡುಗಡೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Water Supply

Mangaluru;’ಸ್ವಚ್ಛ ಸುಜಲ’ದತ್ತ ಗ್ರಾಮ ಪಂಚಾಯತ್‌ಗಳು

President  ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

prahlad-joshi

Rahul Gandhi ಮೊಹಬ್ಬತ್‌ ಕೀ ದೂಕಾನ್‌ನಲ್ಲಿ ಹ*ತ್ಯೆ-ಆತ್ಮಹ*ತ್ಯೆ: ಪ್ರಹ್ಲಾದ್‌ ಜೋಶಿ

KSRT

Bus ticket ದರ ಶೇ. 15 ದುಬಾರಿ; ಸರಕಾರ ಸಮಜಾಯಿಷಿ

ಶಬರಿಮಲೆಗೆ ಕಾಡಿನ ದಾರಿಯಲ್ಲಿ ಬರುವವರಿಗಿದ್ದ ಪಾಸ್‌ ರದ್ದು: ಮಂಡಳಿ

Kerala ಶಬರಿಮಲೆಗೆ ಕಾಡಿನ ದಾರಿಯಲ್ಲಿ ಬರುವವರಿಗಿದ್ದ ಪಾಸ್‌ ರದ್ದು: ಮಂಡಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.