John Michael D’Cunh ಟೀಕೆ;ಜೋಶಿ ತತ್ ಕ್ಷಣ ರಾಜೀನಾಮೆ ನೀಡಲಿ: ಎಚ್.ಕೆ. ಪಾಟೀಲ್
ಆಯೋಗದ ಬಗ್ಗೆ ಲಘುವಾಗಿ ಟೀಕೆ ಮಾಡಿರುವುದು ಅತ್ಯಂತ ದುರ್ದೈವದ ಸಂಗತಿ
Team Udayavani, Nov 13, 2024, 12:19 PM IST
ಗದಗ: ಸಂವಿಧಾನ ಎತ್ತಿ ಹಿಡಿಯುವ, ನ್ಯಾಯಾಂಗದ ಬಗ್ಗೆ ಪ್ರಶ್ನಿಸಬಾರದು ಹಾಗೂ ಗೌರವದಿಂದ ಇರಬೇಕಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಜಸ್ಟಿಸ್ ಮೈಕೆಲ್ ಕುನ್ನಾ ಅವರ ಬಗ್ಗೆ ಏಜೆಂಟ್ ಎಂದು ಹೇಳಿರುವುದು, ಆಯೋಗದ ಬಗ್ಗೆ ಲಘುವಾಗಿ ಟೀಕೆ ಮಾಡಿರುವುದು ಅತ್ಯಂತ ದುರ್ದೈವದ ಸಂಗತಿಯಾಗಿದ್ದು, ಪ್ರಹ್ಲಾದ್ ಜೋಶಿ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ್ ಆಗ್ರಹಿಸಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಕಳೆದ ಕೆಲ ದಿನಗಳಿಂದ ಉನ್ನತ ಹಾಗೂ ಎತ್ತರದ ಹುದ್ದೆಗಳಲ್ಲಿರುವ ಜವಾಬ್ದಾರಿ ವ್ಯಕ್ತಿಗಳು ಮನಬಂದಂತೆ ಮಾತನಾಡುತ್ತಿದ್ದಾರೆ. ನ್ಯಾಯಾಂಗದ ಭಾಗವಾಗಿರುವ ನ್ಯಾಯಮೂರ್ತಿಗಳು ಹಾಗೂ ತನಿಖಾ ಸಂಸ್ಥೆಯ ನೇತೃತ್ವ ಹೊಂದಿರುವ ಆಯೋಗಗಳಿಗೂ ಮನಬಂದಂತೆ ಮಾತನಾಡಿರುವುದು ಅಕ್ಷಮ್ಯ ಅಪರಾಧವಾಗಿದೆ’ ಎಂದರು.
‘ಪ್ರಹ್ಲಾದ್ ಜೋಶಿ ನಮ್ಮ ರಾಜ್ಯದ ತನಿಖಾ ಆಯೋಗದಕ್ಕೆ ಅಗೌರವ ಹಾಗೂ ಅಸಂಬದ್ಧ ರೀತಿ ನಡೆದುಕೊಂಡಿರುವುದು ಅಕ್ಷಮ್ಯ ಅಪರಾಧವಾಗಿದ್ದು, ರಾಷ್ಟ್ರಪತಿಗಳು ಅವರನ್ನು ತಕ್ಷಣ ಮಂತ್ರಿ ಸ್ಥಾನದಿಂದ ತೆಗೆದುಹಾಕಬೇಕು. ಅಲ್ಲದೇ ರಾಜಕೀಯ ಭಯ, ಸತ್ಯಾನ್ವೇಶನೆ ನಡೆಯಬಾರದು, ಭ್ರಷ್ಟಾಚಾರಿಗಳಿಗೆ ಶಿಕ್ಷೆ ಆಗಬಾರದು ಎಂಬ ಹಾದಿಯಲ್ಲಿ ಹೊರಟಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಮೇಲೆ ರಾಷ್ಟ್ರಪತಿಗಳು ಕಾನೂನು ಕ್ರಮಕೈಗೊಳ್ಳುವ ಮೊದಲೇ ತಕ್ಷಣ ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದರು.
‘ಜಸ್ಟಿಸ್ ಮೈಕೆಲ್ ಕುನ್ನಾ ಅವರು ಕಡತಗಳನ್ನು ಪರಿಶೀಲಿಸಿ 7223 ಕೋಟಿ ರೂ. ಅವ್ಯವಹಾರದ ಸತ್ಯಶೋಧನೆ ನಡೆಸಿದ್ದಾರೆ. ನೂರಾರು ಕೋಟಿ ರೂ. ವೆಚ್ಚಗಳ ಕುರಿತು ಲೆಕ್ಕಪತ್ರಗಳಿಲ್ಲ, ಕಾಗದಗಳೂ ಇಲ್ಲ. ಯಡಿಯೂರಪ್ಪ ಸಿಎಂ ಹಾಗೂ ಶ್ರೀರಾಮುಲು ಆರೋಗ್ಯ ಸಚಿವರಾಗಿದ್ದ ಸಂದರ್ಭದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದಾರೆ’ ಎಂದರು.
ಜಸ್ಟಿಸ್ ಮೈಕೆಲ್ ಕುನ್ನಾ ಅವರ ಆಯೋಗವು ಸಲ್ಲಿಸಿದ ಮಧ್ಯಂತರ ವರದಿಯಲ್ಲಿ ಯಡಿಯೂರಪ್ಪ ಅವರು ಸಿಎಂ ಹಾಗೂ ಶ್ರೀರಾಮುಲು ಅವರು ಆರೋಗ್ಯ ಸಚಿವರಾಗಿದ್ದ ಸಂದರ್ಭದಲ್ಲಿ 3 ಲಕ್ಷ ಪಿಪಿಇ ಕಿಟ್ ಗಳನ್ನು 2,117 ರೂ. ನಂತೆ ಖರೀದಿಸಿ ಮಾರಾಟ ಮಾಡಿದ್ದಾರೆ.ಕೇಂದ್ರ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಮಾನ್ಯತೆ ಇಲ್ಲದ 14 ಖಾಸಗಿ ಲ್ಯಾಬೊರೇಟೊರಿಗಳಿಗೆ ಕೋಟ್ಯಂತರ ಹಣ ಸಂದಾಯ ಮಾಡಿದ್ದಾರೆ. ಮತ್ತು ಇನ್ನೂ 8 ಲ್ಯಾಬೊರೇಟೊರಿಗಳಿಗೆ 4 ಕೋಟಿ ಗೂ ಅಧಿಕ ಹಣ ಸಂದಾಯ ಮಾಡಿರುವುದುದನ್ನು ಆಯೋಗ ತರಾಟೆ ತೆಗೆದುಕೊಂಡಿದೆ.
‘ಕೋವಿಡ್ ಸನ್ನಿವೇಶದಲ್ಲಿ ಭ್ರಷ್ಟಾಚಾರ ಮಾಡಿರುವುದನ್ನು ಆಯೋಗ ಹೇಳಿದೆ. ಅದನ್ನು ಸಹಿಸಿಕೊಳ್ಳಲಾಗದೇ ಜೋಶಿ ಅವರು ಪ್ರತಿಕ್ರಿಯಿಸಿದ್ದಾರೆ. ಸತ್ಯವನ್ನು ಎದುರಿಸುವ ಧೈರ್ಯ ಇಲ್ಲದ ಜೋಶಿ ಅವರು ಜಸ್ಟಿಸ್ ಕುನ್ನಾ ಅವರ ಆಯೋಗದ ಬಗ್ಗೆ ಏಜೆಂಟ್ ಎಂದು ಕರೆದಿರುವುದು, ಮದ್ಯಂತರ ವರದಿಗಳ ಬಗ್ಗೆ ಟೀಕೆ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ, ಕಾನೂನು ಬಾಹಿರವಾಗಿರುವ ಅವರ ಮಾತು ಇದೊಂದು ಗುನ್ನೆಯ ಹಾಗೆ ಎಂದು ಭಾವಿಸುತ್ತೇನೆ’ ಎಂದರು.
‘ಜೋಶಿ ಅವರ ಉದ್ದೇಶ ಇಂತಹ ಮಹತ್ವದ ತೀರ್ಪು ಬರುವ ಸಂದರ್ಭದಲ್ಲಿ ಸತ್ಯ ಸಂಶೋಧನೆ, ಸತ್ಯಾನ್ವೇಶನೆಯನ್ನು ತಡೆಯಲು ಜೋಶಿ ಅವರು ಆಡಿದ ಮಾತುಗಳು ಆಯೋಗದ ಘನತೆಯನ್ನು, ಗೌರವವನ್ನು ಕಡಿಮೆ ಮಾಡಬೇಕು, ಅವರ ಅಧಿಕಾರದ ಹುದ್ದೆಯಿಂದ ಬೆದರಿಕೆಯ ರೂಪದಲ್ಲಿ ರಾಜಕೀಯ ಇಂಟಪ್ರಿಯನ್ಸ್ ಮಾಡುವ ಮೂಲಕ ಶಿಕ್ಷಾರ್ಹವಾಗಿರುವ ಹೇಳಿಕೆ ನೀಡಿದ್ದಾರೆ’ ಎಂದರು.
‘ಗದಗ ಜಿಲ್ಲೆಯಲ್ಲಿ ಕೋಟುಮಚಗಿ ಗ್ರಾಮದಲ್ಲಿ 562 ಸರ್ವೇ ನಂಬರ್ ನ ಸೋಮೇಶ್ವರ ದೇವಸ್ಥಾನ ಟ್ರಸ್ಟ್ ಕಮೀಟಿ ಹೆಸರು ಇದ್ದಾಗ್ಯೂ ಇದು ವಕ್ಫ ಹೆಸರಿನಲ್ಲಿದೆ ಎಂದು ಅಪಪ್ರಚಾರ ಮಾಡಿದ್ದಾರೆ. ಇದು ಬದಲಾವಣೆ ಆಗಿಲ್ಲ. ಆ ರೀತಿ ಬದಲಾವಣೆ ಮಾಡಕೂಡದು ಎಂದು ಸರಕಾರ ಆದೇಶ ನೀಡಿದೆ. ಈ ಕುರಿತು ತಪ್ಪು ಮಾಹಿತಿ ಹರಡುವವರ ಮಾತಿಗೆ ಯಾರೂ ಕಿವಿಕೊಡಬಾರದು’ ಎಂದು ಸಚಿವ ಎಚ್.ಕೆ. ಪಾಟೀಲ್ ಮನವಿ ಮಾಡಿದರು.
ಮುಖಂಡರಾದ ಬಿ.ಬಿ. ಅಸೂಟಿ, ಅಶೋಕ ಮಂದಾಲಿ, ಬಸವರಾಜ ಕಡೇಮನಿ ಸೇರಿ ಅನೇಕರು ಸುದ್ದಿಗೋಷ್ಠಿಯಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ
MUDA CASE: ಸಿಎಂ ಆಪ್ತ, ಸಂಸದ ಇ.ಡಿ. ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Bantwala: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು
Kanguva Movie: ಪ್ರೇಕ್ಷಕರ ಮನದಲ್ಲಿ ಕಂಗೊಳಿಸಿದ ʼಕಂಗುವʼ..ಸಿನಿಮಾ ನೋಡಿದವರು ಹೇಳಿದ್ದೇನು?
IPL 2025: ಸಾತಂತ್ರ್ಯ ನೀಡುವ ತಂಡವೇ ನನ್ನ ಆದ್ಯತೆ: ಕೆ.ಎಲ್.ರಾಹುಲ್
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.