BJP MLA ಮುನಿರತ್ನಗೆ ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ
Team Udayavani, Sep 21, 2024, 4:06 PM IST
ಬೆಂಗಳೂರು: ಅತ್ಯಾಚಾರ ಮತ್ತು ಕಿರುಕುಳದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರಾಜರಾಜೇಶ್ವರಿನಗರ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಜನಪ್ರತಿನಿಧಿ ವಿಶೇಷ ನ್ಯಾಯಾಲಯ ಶನಿವಾರ (ಸೆ21 ) ಅಕ್ಟೋಬರ್ 5ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.
ಮುನಿರತ್ನ ವಿರುದ್ಧ 40 ವರ್ಷದ ಮಹಿಳೆಯೊಬ್ಬರು ಪ್ರಕರಣ ದಾಖಲಿಸಿದ ನಂತರ ಅತ್ಯಾಚಾರ ಮತ್ತು ಕಿರುಕುಳದ ಆರೋಪದ ಮೇಲೆ ಕಗ್ಗಲ್ಲಿಪುರ ಠಾಣೆ ಪೊಲೀಸರು ಬಂಧಿಸಿದ್ದರು. ಜನಪ್ರತಿನಿಧಿ ವಿಶೇಷ ನ್ಯಾಯಾಲಯದ ಏಕ ಪೀಠದ ನ್ಯಾಯಾಧೀಶ ಕೆ.ಎಂ.ಶಿವಕುಮಾರ್ ಮುಂದೆ ಮುನಿರತ್ನ ಅವರನ್ನು ಇಂದು ಹಾಜರುಪಡಿಸಲಾಯಿತು.
ಮುನಿರತ್ನ ವಿರುದ್ಧ ಮಹಿಳೆ ಬೆಂಗಳೂರು ಗ್ರಾಮಾಂತರದ ಕಗ್ಗಲ್ಲಿಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.