PSI ಹಗರಣದ ನ್ಯಾಯಾಂಗ ತನಿಖೆ ದ್ವೇಷದ ರಾಜಕಾರಣ: ಬೊಮ್ಮಾಯಿ ಟೀಕೆ
Team Udayavani, Jul 23, 2023, 7:10 AM IST
ಬೆಂಗಳೂರು: ಪಿಎಸ್‌ಐ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿರುವುದು ದ್ವೇಷದ ರಾಜಕಾರಣ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಗರಣದಲ್ಲಿ ಕಾಂಗ್ರೆಸ್‌ನವರು ಇದ್ದಾರೆ. ಪ್ರಕರಣದ ತನಿಖೆ ನಡೆದು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಈ ಸಂದರ್ಭ ಮತ್ತೆ ತನಿಖೆಗೆ ಆದೇಶ ಮಾಡಿರುವುದು ದ್ವೇಷ ರಾಜಕೀಯವನ್ನು ತೋರಿಸುತ್ತದೆ ಎಂದರು.
ಪಿಎಸ್‌ಐ ಹಗರಣವನ್ನು ನಾವೇ ಹೊರಗೆ ತಂದು ಸಿಐಡಿ ತನಿಖೆಗೆ ಆದೇಶಿಸಿದ್ದೆವು. ಪ್ರಕರಣದಲ್ಲಿ ಎಡಿಜಿಪಿ ಹುದ್ದೆಯ ಅಧಿಕಾರಿಯನ್ನು ಜೈಲಿಗೆ ಕಳುಹಿಸಿದ್ದೇವೆ ಎಂದು ತಮ್ಮ ಅವಧಿಯಲ್ಲಿ ಕೈಗೊಂಡಿದ್ದ ಕ್ರಮಗಳನ್ನು ಅವರು ಸಮರ್ಥಿಸಿಕೊಂಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯವರು ಗೋಡ್ಸೆ ಪ್ರತಿಮೆ ಮುಂದೆ ಪ್ರತಿಭಟನೆ ಮಾಡಲಿ ಅಂತ ಹೇಳಿದ್ದಾರೆ. ನಕಲಿ ಗಾಂಧಿಗಳ ಜಪ ಮಾಡುತ್ತಿರುವವರು ಕಾಂಗ್ರೆಸ್‌ನವರು. ಗಾಂಧೀಜಿ ಅವರನ್ನು ಹೆಚ್ಚು ದುರುಪಯೋಗ ಮಾಡಿಕೊಂಡವರು ಕಾಂಗ್ರೆಸ್‌ನವರು. ಕಾಂಗ್ರೆಸ್‌ನವರಿಗೆ ದೇಶ ಆಳಲು ಬರುವುದಿಲ್ಲ ಎಂಬ ಕಾರಣಕ್ಕಾಗಿ ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್ಸನ್ನು ವಿಸರ್ಜಿಸಲು ಗಾಂಧೀಜಿ ಹೇಳಿದ್ದರು. ಆದರೆ ಇವರು ಗಾಂಧೀಜಿ ಹೆಸರು ಹೇಳಿಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಸಿದ್ದು ಸರಕಾರದಿಂದ ಬೆಲೆ ಏರಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ ಬಂದ ಮೇಲೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ಜೀವನ ದುಸ್ತರವಾಗಿದೆ. ಕಾಂಗ್ರೆಸ್ ಸರಕಾರ ಬಂದ ಕೂಡಲೇ ವಿದ್ಯುತ್ ದರವನ್ನು ಹೆಚ್ಚಿಸಿದರು. ಎಲ್ಲ ತರಕಾರಿ ಬೆಲೆಯೂ ಹೆಚ್ಚಿದೆ. ಈಗ ಹಾಲಿನ ದರ ಹೆಚ್ಚಳ ಮಾಡಿ¨ªಾರೆ. ಆಗಸ್ಟ್ 1ರ ಬಳಿಕ ಸೈಟ್, ಕಾರು, ಹೊಸ ಮನೆ ಖರೀದಿ ದರವೂ ಹೆಚ್ಚಳವಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.