ಜು. 14,15ರಂದು ಬಿಜೆಪಿ ಹಿರಿಯ ನಾಯಕರ ನೇತೃತ್ವದಲ್ಲಿ ಗೌಪ್ಯ ಸಭೆ
Team Udayavani, Jul 9, 2022, 6:25 AM IST
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಿದ್ಧತೆ ಹಾಗೂ ಪ್ರಸ್ತುತ ಸರಕಾರದ ಕಾರ್ಯವೈಖರಿ ಕುರಿತು ಚರ್ಚಿಸಲು ಜುಲೈ 14, 15ರಂದು ಬಿಜೆಪಿ ಹಿರಿಯ ನಾಯಕರ ಸಭೆ ನಡೆಯಲಿದೆ.
ಬೆಂಗಳೂರಿನ ಹೊರ ವಲಯದಲ್ಲಿ ನಡೆಯುವ ಗೌಪ್ಯ ಸಭೆಗೆ ಬಿಜೆಪಿಯ ರಾಷ್ಟ್ರೀಯ ನಾಯಕರು ಆಗಮಿಸಲಿದ್ದು, ಆದರೆ ಯಾರು ಭಾಗವಹಿಸುತ್ತಾರೆ ಎಂಬುದನ್ನೂ ಗೌಪ್ಯವಾಗಿಡಲಾಗಿದೆ.
ಸರಕಾರದ ಕಾರ್ಯವೈಖರಿ ಚರ್ಚೆ
ಮುಂದಿನ 10 ತಿಂಗಳಲ್ಲಿ ವಿಧಾನಸಭೆಗೆ ಚುನಾವಣೆ ಇರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಯಾವ ರೀತಿ ಕಾರ್ಯ ನಿರ್ವಹಿಸುತ್ತಿದೆ? ಸಚಿವರು ತಮ್ಮ ಇಲಾಖೆಗಳಿಗೆ ಸಂಬಂಧಿಸಿ ಏನೆಲ್ಲ ಯೋಜನೆಗಳನ್ನು ಜಾರಿಗೊಳಿಸಿ ಜನರಿಗೆ ತಲುಪಿಸುವ ಕೆಲಸ ಮಾಡಿದ್ದಾರೆ? ಉಸ್ತುವಾರಿ ನೀಡಿರುವ ಜಿಲ್ಲೆಗಳಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಂಪರ್ಕ ಹಾಗೂ ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟನಾತ್ಮಕವಾಗಿ ಬಲಪಡಿಸುವಲ್ಲಿ ಎಷ್ಟರ ಮಟ್ಟಿಗೆ ಕೆಲಸ ಮಾಡಿದ್ದಾರೆ ಎನ್ನುವ ಕುರಿತು ಮೌಲ್ಯಮಾಪನ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಮಿಷನ್ ದಕ್ಷಿಣ್ ಕಾರ್ಯತಂತ್ರ
ಪ್ರಮುಖವಾಗಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವುದು, ಇತ್ತೀಚೆಗೆ ತೆಲಂಗಾಣದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ದಕ್ಷಿಣ ಭಾರತದಲ್ಲಿ ಬಿಜೆಪಿಯ ಶಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ವರಿಷ್ಠರು ಕೆಲವು ಸೂಚನೆ ನೀಡಿದ್ದು, ಅದನ್ನು ರಾಜ್ಯದಲ್ಲಿ ಜಾರಿಗೊಳಿಸುವ ಕುರಿತೂ ಚರ್ಚೆಯಾಗುವ ಸಾಧ್ಯತೆ ಇದೆ.
ಚುನಾವಣೆ ನೀಲನಕ್ಷೆ
ಚುನಾವಣೆಗೆ ಈಗಿನಿಂದಲೇ ಯಾವ ರೀತಿಯ ಕಾರ್ಯತಂತ್ರ ರೂಪಿಸುವುದು, ನರೇಂದ್ರ ಮೋದಿ, ಅಮಿತ್ ಶಾ ಹಾಗೂ ಯೋಗಿ ಆದಿತ್ಯನಾಥ ಅವರು ರಾಜ್ಯದಲ್ಲಿ ಯಾವ ಸಂದರ್ಭದಲ್ಲಿ ಪ್ರವಾಸ ಮಾಡಬೇಕು ಮುಂತಾದವುಗಳ ಬಗ್ಗೆಯೂ ಚರ್ಚೆಯಾಗಲಿದೆ.
ಪ್ರಸ್ತುತ ವಿದ್ಯಮಾನಗಳ ಚರ್ಚೆ
ಪ್ರಸ್ತುತ ರಾಜ್ಯದಲ್ಲಿ ಹಿಜಾಬ್‌ನಿಂದ ಹಿಡಿದು ಆಝಾನ್‌ವರೆಗಿನ ಸಂಘರ್ಷದಲ್ಲಿ ಸರಕಾರ ನಡೆದುಕೊಂಡ ರೀತಿ, ಕಾಂಗ್ರೆಸ್‌ನ ಆರೋಪಗಳಿಗೆ ಪಕ್ಷದ ನಾಯಕರಿಂದ ಪ್ರತ್ಯುತ್ತರ ನೀಡಿರುವ ಬಗ್ಗೆಯೂ ಚರ್ಚಿಸುವ ಮಾಹಿತಿ ಲಭ್ಯವಾಗಿದೆ. ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಎಡಿಜಿಪಿ ದರ್ಜೆಯ ಪೊಲೀಸ್ ಅಧಿಕಾರಿ ಬಂಧನವಾಗಿದ್ದು, ಲಂಚ ಪ್ರಕರಣಲ್ಲಿ ಜಿಲ್ಲಾಧಿಕಾರಿ ಬಂಧನ, ಎಸಿಬಿ ಕಾರ್ಯವೈಖರಿ ಕುರಿತು ಹೈಕೋರ್ಟ್ ನ್ಯಾಯಮೂರ್ತಿಗಳ ಅಭಿಪ್ರಾಯಗಳ ಕುರಿತೂ ಚರ್ಚೆಯಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?
CIDಗೆ ಹೆಬ್ಬಾಳ್ಕರ್ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?
Congress; ಪರಿಷತ್ ನಾಮನಿರ್ದೇಶನಕ್ಕೆ ಆಕಾಂಕ್ಷಿಗಳಿಂದ ಲಾಬಿ
ಬೆರಳ ತುದಿಯಲ್ಲೇ ಸಿಗಲಿದೆ ಕನ್ನಡ ರಂಗಭೂಮಿ ಮಾಹಿತಿ; ಇಂದು ಜಾಲತಾಣಕ್ಕೆ ಸಿಎಂ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.