Bhovi Community ಜು. 20ಕ್ಕೆ ದೀಕ್ಷಾ ರಜತ ಮಹೋತ್ಸವ: ಲಿಂಬಾವಳಿ
ಸಿಎಂ, ಡಿಸಿಎಂಗೆ ಸನ್ಮಾನ: ಸಚಿವ ಶಿವರಾಜ್ ತಂಗಡಗಿ
Team Udayavani, Jul 2, 2024, 9:33 PM IST
ಬೆಂಗಳೂರು: ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ದೀಕ್ಷೆ ಸ್ವೀಕರಿಸಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಭೋವಿ ಸಮುದಾಯ ಜು.20ರಂದು ದೀಕ್ಷಾ ರಜತ ಮಹೋತ್ಸವವನ್ನು ಹಮ್ಮಿಕೊಂಡಿದೆ.
ಅಂದು ಬೆಳಗ್ಗೆ 11ಕ್ಕೆ ಚಿತ್ರದುರ್ಗದಲ್ಲಿ ಈ ರಜತ ಮಹೋತ್ಸವವನ್ನು ಆಯೋಜಿಸಲಾಗಿದೆ. ಮಂತ್ರಾಲಯದ ಸುಭುದೇಂದ್ರ ತೀರ್ಥರು ಆಶೀರ್ವಚನ ನೀಡಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೆಲ ಗ್ರಂಥಗಳನ್ನು ಲೋಕಾರ್ಪಣೆಗೊಳಿಸಲಿದ್ದಾರೆ.
ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ ಜೋಶಿ, ಶೋಭಾ ಕರಂದ್ಲಾಜೆ, ವಿ.ಸೋಮಣ್ಣ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಮಾಜಿ ಸಚಿವ ಅರವಿಂದ ಲಿಂಬಾವಳಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಚಿವ ಶಿವರಾಜ ತಂಗಡಗಿ ಮಾತನಾಡಿ, ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ಕ್ಕೆ ಮೊದಲ ಬಾರಿ ಸಮಾಜದಿಂದ ಓರ್ವರನ್ನು ಸದಸ್ಯರನ್ನಾಗಿ ಸರ್ಕಾರ ನೇಮಿಸಿದೆ. ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸನ್ಮಾನಿಸಲಾಗುವುದು. ಅಲ್ಲದೆ, ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದವರನ್ನು ಅಭಿನಂದಿಸಲಾಗುವುದುಎಂದರು. ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್, ಮಾಜಿ ಶಾಸಕ ನಾಗರಾಜ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.