High Court ಮುಖ್ಯ ನ್ಯಾಯಮೂರ್ತಿಯಾಗಿ ನಿಲಯ್ ವಿಪಿನ್ ಚಂದ್ರ ಅಂಜಾರಿಯಾ ಪ್ರಮಾಣ ವಚನ
ಸುಪ್ರೀಂ ಕೋರ್ಟ್ ಕೊಲಿಜಿಯಂ ಈ ತಿಂಗಳ ಆರಂಭದಲ್ಲಿ ಶಿಫಾರಸು ಮಾಡಿತ್ತು...
Team Udayavani, Feb 25, 2024, 6:40 PM IST
ಬೆಂಗಳೂರು: ನ್ಯಾಯಮೂರ್ತಿ ನಿಲಯ್ ವಿಪಿನ್ ಚಂದ್ರ ಅಂಜಾರಿಯಾ ಅವರು ಕರ್ನಾಟಕ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದ ‘ಗಾಜಿನ ಮನೆ’ಯಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧಿಸಿದರು.ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ. ಪಾಟೀಲ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಅಂಜಾರಿಯಾ ಅವರು ಈ ಹಿಂದೆ ಗುಜರಾತ್ ಹೈಕೋರ್ಟ್‌ನ ನ್ಯಾಯಾಧೀಶರಾಗಿದ್ದರು ಮತ್ತು ಅವರ ಹೆಸರನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಈ ತಿಂಗಳ ಆರಂಭದಲ್ಲಿ ಶಿಫಾರಸು ಮಾಡಿತ್ತು.
ಜಸ್ಟಿಸ್ ಅಂಜಾರಿಯಾ ಅವರು ನವೆಂಬರ್ 2011 ರಲ್ಲಿ ಗುಜರಾತ್ ಹೈಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡು ಕಾರ್ಯನಿರ್ವಹಿಸುತ್ತಿದ್ದರು.
ನ್ಯಾಯಾಧೀಶರಾಗಿ ಪದೋನ್ನತಿಯಾಗುವ ಮೊದಲು ಅವರು ಗುಜರಾತ್ ಹೈಕೋರ್ಟ್‌ನಲ್ಲಿ ಸಿವಿಲ್, ಸಾಂವಿಧಾನಿಕ, ಕಂಪನಿ ಕಾನೂನು, ಕಾರ್ಮಿಕ ಮತ್ತು ಸೇವಾ ವಿಷಯಗಳಲ್ಲಿ ಅಭ್ಯಾಸ ಮಾಡಿದ್ದರು ಎಂದು ಕೊಲಿಜಿಯಂ ಅವರ ಹೆಸರನ್ನು ಶಿಫಾರಸು ಮಾಡುವಾಗ ಗಮನಿಸಿದೆ.
ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರು ಫೆಬ್ರವರಿ 24 ರಂದು 62 ವರ್ಷಗಳನ್ನು ಪೂರೈಸಿ ನಿರ್ಗಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
MUST WATCH
ಹೊಸ ಸೇರ್ಪಡೆ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.