ಅನುದಾನಿತ ಶಿಕ್ಷಕರಿಗೂ ಜ್ಯೋತಿ ಸಂಜೀವಿನಿ: ಸಿಎಂ ಜೊತೆ ಚರ್ಚೆ- ಸುರೇಶ್ ಕುಮಾರ್


Team Udayavani, Dec 14, 2020, 8:10 PM IST

ಅನುದಾನಿತ ಶಿಕ್ಷಕರಿಗೂ ಜ್ಯೋತಿ ಸಂಜೀವಿನಿ: ಸಿಎಂ ಜೊತೆ ಚರ್ಚೆ- ಸುರೇಶ್ ಕುಮಾರ್

ಬೆಂಗಳೂರು: ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಇರುವಂತೆ ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುದಾನಿತ ಶಾಲೆಗಳ ಶಿಕ್ಷಕರಿಗೂ ವಿಸ್ತರಿಸುವ ಕುರಿತಂತೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿ ಚರ್ಚಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂ (ರಿ), ರಾಜ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ ನೌಕರರ ಹಾಗೂ ಆಡಳಿತ ಮಂಡಳಿಗಳ ಹೋರಾಟ ಸಮನ್ವಯ ಸಮಿತಿ ಹಾಗೂ ರಾಜ್ಯದ ವಿವಿಧ ಸಂಟನೆಗಳ ಆಶ್ರಯದಲ್ಲಿ ಧಾರವಾಡದಲ್ಲಿ  ನಡೆಯುತ್ತಿರುವ ಸತ್ಯಾಗ್ರಹದ ಹಿನ್ನೆಲೆಯಲ್ಲಿ ಸೋಮವಾರ ಬೆಂಗಳೂರಿನಲ್ಲಿ ವಿಧಾನಪರಿಷತ್ ಸದಸ್ಯ ಬಸವರಾಜ ಎಸ್. ಹೊರಟ್ಟಿ ಮತ್ತು ಸಂಟಘನೆಗಳ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿ ಮಾತನಾಡಿದ ಅವರು, ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಸರ್ಕಾರಿ ನೌಕರರಿಗಿರುವ ಸೌಲಭ್ಯಗಳನ್ನು ನೀಡುವಲ್ಲಿ ಸರ್ಕಾರ ಮುಕ್ತ ಮನಸ್ಸು ಹೊಂದಿದ್ದು, ಈ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಸೂಕ್ತ ವೇದಿಕೆಯಲ್ಲಿ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು ಎಂದರು.

ಬಸವರಾಜ ಹೊರಟ್ಟಿಯವರ ನೇತೃತ್ವದ ಸಮಿತಿ ಸಲ್ಲಿಸಿರುವ ಕಾಲ್ಪನಿಕ ವೇತನ ಅನುಷ್ಠಾನದಿಂದಾಗುವ ಆರ್ಥಿಕ ಪರಿಣಾಮಗಳನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸಿ ವಿವರವಾದ ವರದಿ ತಯಾರಿಸಿ ಸಂಪುಟದ ಮುಂದಿಡಲಾಗುವುದು. ಈ ಕುರಿತಂತೆ ವರದಿಯನ್ನು ಕಡತದಲ್ಲಿ ಮಂಡಿಸುವಂತೆ ಸಚಿವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಬಾಕಿ ವೇತನದ ಹೊರೆಯಿಲ್ಲದೇ ಮತ್ತು ಸರ್ಕಾರದ ಬೊಕ್ಕಸಕ್ಕೆ ಅನಾವಶ್ಯಕ ಹೊರೆಯಾಗದಂತೆ ಎಲ್ಲ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಸೌಲಭ್ಯವನ್ನು ಒದಗಿಸಲು ಸಿಎಂ ಜೊತೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು ಎಂದು ಅವರು ವಿವರಿಸಿದರು.

ಎನ್.ಪಿ.ಎಸ್ ಪದ್ಧತಿ ರದ್ದುಪಡಿಸಿ ಹಳೆ ಪಿಂಚಣಿ ವ್ಯವಸ್ಥೆ ಮುಂದುವರೆಸುವುದು ಶಿಕ್ಷಣ ಇಲಾಖೆಯೊಂದೇ ತೆಗೆದುಕೊಳ್ಳಬೇಕಾದ ನಿರ್ಧಾರವಲ್ಲ. ಅದು ಎಲ್ಲ ಇಲಾಖೆಗಳಿಗೂ ಸಂಬಂಧಿಸಿದಾಗಿದ್ದು, ಇದು ನೀತಿ ನಿರೂಪಣಾ ವಿಷಯವಾಗಿರುವುದರಿಂದ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಎಲ್ಲ ಇಲಾಖೆಗಳೂ ಸೇರಿ ಒಂದು ನಿರ್ಧಾರಕ್ಕೆ ಬರಬೇಕಿದೆ. ಹಳೇ ಪದ್ಧತಿಯನ್ನೇ ಮುಂದುವರೆಸುವುದು ಇಲ್ಲವೇ ಎನ್.ಪಿ.ಎಸ್ ಮುಂದುವರೆಸುವುದಾದರೆ ಉದ್ಯೋಗದಾತನ ವಂತಿಗೆಯನ್ನು ಸರ್ಕಾರವೇ ಭರ್ತಿ ಮಾಡಬೇಕೆಂಬ ಕುರಿತ ತಮ್ಮ ಆಗ್ರಹವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಸುರೇಶ್ ಕುಮಾರ್ ಹೇಳಿದರು.

ದೈಹಿಕ ಶಿಕ್ಷಕರ ಬೇಡಿಕೆಗಳಿಗೆ ಸಂಬಂಧಿಸಿದ ಡಾ. ವೈದ್ಯನಾಥನ್ ವರದಿಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿಗೆ ಪ್ರಸ್ತಾಪಿಸಿದ್ದು, ಈ ಶಿಕ್ಷಕರನ್ನು ಇತರೆ ಶಿಕ್ಷಕರ ಸಾಲಿನಲ್ಲಿ ಸಮಾನವಾಗಿ ಗುರುತಿಸಲು ಅನುವಾಗುವಂತೆ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

2015ರ ನಂತರ ಅನುದಾನಿತ ಶಾಲಾ ಕಾಲೇಜುಗಳಲ್ಲಿ ನಿವೃತ್ತಿ, ನಿಧನ ಸೇರಿದಂತೆ ಹಲವಾರು ಕಾರಣಗಳಿಂದ ತೆರವಾಗಿರುವ ಹುದ್ದೆಗಳ ಭರ್ತಿಗೆ ಪ್ರಸ್ತುತ ಆರ್ಥಿಕ ಇಲಾಖೆಯ ನಿರ್ಬಂಧದ ತೆರವಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ಹಾಗೆಯೇ ಇದಕ್ಕೂ ಮುನ್ನ ರಾಜ್ಯದ ಖಾಸಗಿ ಅನುದಾನಿತ ಶಾಲಾ ಕಾಲೇಜುಗಳಲ್ಲಿ ಖಾಲಿಯಾಗಿರುವ ಹುದ್ದೆಗಳ ವಿವರಗಳನ್ನು ಶಾಲಾವಾರು ಸಂಗ್ರಹಿಸಿ ಸಲ್ಲಿಸಬೇಕೆಂದು ಸುರೇಶ್ ಕುಮಾರ್ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದರು.

ಅನುದಾನ ರಹಿತ ಖಾಸಗಿ ಶಾಲೆಗಳ ಶಿಕ್ಷಕರು ಮತ್ತು ಸಿಬ್ಬಂದಿಯ ಸೇವಾ ಭದ್ರತೆ ಆಯಾ ಆಡಳಿತ ಮಂಡಳಿಗಳ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಕಠಿಣ ಸುತ್ತೋಲೆಯನ್ನು ಕೂಡಲೇ ಜಾರಿ ಮಾಡುವುದಲ್ಲದೇ  ವಿಚಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲಾಗುವುದು ಎಂದು ಸಚಿವರು ವಿವರಿಸಿದರು.

ಶಿಕ್ಷಕ ಮತ್ತು ವಿದ್ಯಾರ್ಥಿಗಳ ಪ್ರಸ್ತುತ ಅನುಪಾತ 1:70ನ್ನು 1:50ಕ್ಕೆ ಬದಲಾಯಿಸುವ ಕುರಿತು ಆಡಳಿತಾತ್ಮಕ ಅನುಮೋದನೆ ನೀಡುವ ಸಂಬಂಧದಲ್ಲಿ ಪ್ರಸ್ತಾವನೆ ಸಲ್ಲಿಸಬೇಕೆಂದು ಸೂಚನೆ ನೀಡಿದರು. ಖಾಸಗಿ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಸರ್ಕಾರಿ ಶಾಲಾ ಶಿಕ್ಷಕರಿಗೆ ನೀಡುವ ತರಬೇತಿಯನ್ನು ವಿಸ್ತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಧಾರವಾಡ ವಿಭಾಗದಲ್ಲಿ 100ಕ್ಕಿಂತ ಕಡಿಮೆ ಇರುವ ಶಾಲೆಗಳ ನೊಂದಣಿ ರದ್ದುಪಡಿಸಲು ಆ ಭಾಗದ ಆಯುಕ್ತರು ಹೊರಡಿಸಿರುವ ಆದೇಶ ಶಿಕ್ಷಣ ಅಧಿನಿಯಮದ ಆದೇಶಕ್ಕೆ ವಿರುದ್ಧವಾಗಿದ್ದು, ತಕ್ಷಣವೇ ಹಿಂಪಡೆಯಲು ಅಪರ ಆಯುಕ್ತರಿಗೆ ನಿರ್ದೇಶನ ನೀಡಬೇಕೆಂದು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದರು.

ಸರ್ಕಾರವು ಎಲ್ಲ ಶಿಕ್ಷಕರ ಸಮಸ್ಯೆಯನ್ನು ಪರಿಹರಿಸಲು ತೆರೆದ ಮನಸ್ಸು ಹೊಂದಿದ್ದು ಮೂರು ತಿಂಗಳ ಅವಧಿಯಲ್ಲಿ ಈಡೇರಿಸಲು ಸಾಧ್ಯವಾಗಬಹುದಾದ ಬೇಡಿಕೆಗಳನ್ನು ಅನುಷ್ಠಾನಗೊಳಿಸುವಲ್ಲಿ ಕ್ರಮ ವಹಿಸುತ್ತದೆ. ನಾಡಿನ ಮಕ್ಕಳ ಹಿತದೃಷ್ಟಿಯಿಂದ ಸಂಘಟನೆಯು ನಡೆಸುತ್ತಿರುವ ಪ್ರತಿಭಟನೆಯನ್ನು ಹಿಂಪಡೆಯಬೇಕೆಂದು ಸುರೇಶ್ ಕುಮಾರ್ ಮನವಿ ಮಾಡಿದರು.

ಸಭೆಯಲ್ಲಿ ಮಾಜಿ ಶಿಕ್ಷಣ ಸಚಿವರೂ ಆದ ವಿಧಾನಪರಿಷತ್ ಸದಸ್ಯ ಬಸವರಾಜ ಎಸ್. ಹೊರಟ್ಟಿ, ಸಂಘಟನೆಯ ರಾಜ್ಯ ಸಂಟನಾ ಕಾರ್ಯದರ್ಶಿ ಶಾಮ ಮಲ್ಲನಗೌಡ, ಪ್ರಧಾನ ಕಾರ್ಯದರ್ಶಿ ಜಿ.ಆರ್. ಭಟ್ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.