ಹಲಾಲ್- ಜಟ್ಕಾ ಕೆಲ ವ್ಯಕ್ತಿಗಳು ಆಡುತ್ತಿರುವ ಆಟ; ಇಲ್ಲಿ ನಾನು ರಾಜಕಾರಣ ಮಾಡಲ್ಲ- ಈಶ್ವರಪ್ಪ
Team Udayavani, Apr 3, 2022, 4:26 PM IST
ಕಾರ್ಕಳ: ಹಲಾಲ್ ಜಟ್ಕಾ ಇಂಥದ್ದನ್ನೆಲ್ಲ ಕೆಲವು ವ್ಯಕ್ತಿಗಳು, ಪಕ್ಷಗಳು ಸೃಷ್ಟಿ ಮಾಡಿದ್ದಾರೆ. ಇದು ಕೆಲ ವ್ಯಕ್ತಿಗಳು ಆಡುತ್ತಿರುವ ಆಟ. ಕರ್ನಾಟಕದಲ್ಲಿ ಜನ ಅನುಭವಿಸುತ್ತಿದ್ದಾರೆ. ಯಾರು ಯಾವುದನ್ನು ಪೂಜೆ ಮಾಡುತ್ತಾರೆ ಅದನ್ನು ಮಾಡಿಕೊಳ್ಳಬೇಕು. ಅವರವರು ಅವರ ಪದ್ದತಿಯನ್ನು ಮುಂದುವರೆಸಿಕೊಂಡು ಹೋಗಲಿ. ಮುಸಲ್ಮಾನರು ಹಲಾಲ್ ಮಾಡುವುದಾದರೆ ಮಾಡಲಿ ಹಿಂದೂಗಳು ಜಟಕಾ ಮಾಡುವುದಾದರೆ ಮಾಡಿಕೊಂಡು ಹೋಗಲಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಯುಗಾದಿ ದಿನ ನಾನು ಮಾಂಸ ತಿನ್ನಲ್ಲ. ಭಾನುವಾರ ನನ್ನ ಮನೆದೇವರು ಮಾಂಸ ತಿನ್ನಲ್ಲ. ಸೋಮವಾರ ಮಾಂಸ ತಿನ್ನುವ ಅಭ್ಯಾಸ ಇಲ್ಲ, ಮಂಗಳವಾರ ಮಾಂಸ ಬಿಡುವುದೇ ಇಲ್ಲ. ಮುಸಲ್ಮಾನರು ಹಲಾಲ್ ಮಾಡುವುದಾದರೆ ಮಾಡಲಿ ಹಿಂದೂಗಳು ಜಟ್ಕಾ ಮಾಡುವುದಾದರೆ ಮಾಡಿಕೊಂಡು ಹೋಗಲಿ ಮುಸಲ್ಮಾನರು ನಮ್ಮ ಮನೆಗೆ ಬಂದು ಏನು ಒತ್ತಡ ಹಾಕುವುದಿಲ್ಲ. ನಾನು ಯಾರು ಮುಸಲ್ಮಾನರ ಮನೆಗೆ ಹೋಗಿ ಒತ್ತಡ ಹಾಕುವುದಿಲ್ಲ ಎಂದರು.
ಈ ವಿಚಾರದಲ್ಲಿ ಸಮಾಜವನ್ನು ಒಡೆಯುವ ದಿಕ್ಕಿನಲ್ಲಿ ಕುತಂತ್ರ ಮಾಡಲಾಗುತ್ತಿದೆ. ಇದರಲ್ಲಿ ನಾನು ರಾಜಕಾರಣ ಮಾಡಲು ಇಷ್ಟ ಪಡಲ್ಲ. ಚುನಾವಣೆ ಬಂದಾಗ ಒಬ್ಬರಿಗೊಬ್ಬರು ಬಹಿರಂಗವಾಗಿ ತೊಡೆತಟ್ಟೊಣ. ಚುನಾವಣೆ ಬಂದಾಗ ನಾನೇನು ಮಾಡಿದ್ದೇನೆ ನೀನ್ ಏನ್ ಮಾಡಿದ್ದೆ ಜನಗಳ ಮುಂದೆ ಇಡೋಣ ಎಂದರು.
ಇದನ್ನೂ ಓದಿ: ರಾಯಚೂರು: ಸ್ನೇಹಿತರೊಂದಿಗೆ ಈಜಲು ಹೋದ ಇಬ್ಬರು ನೀರುಪಾಲು; ಹಬ್ಬದಂದೇ ನಡೆಯಿತು ದುರಂತ
ಹಿಜಾಬ್ ವಿವಾದ ರಾಜ್ಯದಲ್ಲಿ ಆರಂಭ ಮಾಡಿದ್ದು ಯಾರು? ಹರ್ಷ ಕೊಲೆಯಾದಾಗ ಕಾಂಗ್ರೆಸ್ ಉಗ್ರವಾಗಿ ಯಾಕೆ ಖಂಡಿಸಿಲ್ಲ? ದೇಶದಲ್ಲಿ ನಿರ್ನಾಮವಾಗಿರುವ ಕಾಂಗ್ರೆಸ್ಸು ಹಿಜಾಬ್ , ಹಲಾಲ್ ರಾಷ್ಟ್ರ ಧ್ವಜದ ಬಗ್ಗೆ ಚರ್ಚೆ ಮಾಡುತ್ತಿದೆ ಮುಸಲ್ಮಾನರನ್ನು ತೃಪ್ತಿ ಪಡಿಸುವ ಪ್ರಯತ್ನ ಒಳ್ಳೆಯದಲ್ಲ ನಾವು ಹುಟ್ಟಿದಾಗಿನಿಂದ ಹಿಂದುತ್ವದವರು ರಾಷ್ಟ್ರಭಕ್ತ ಮುಸಲ್ಮಾನರು,ಸ್ವಾತಂತ್ರ ಹೋರಾಟಗಾರ ಮುಸಲ್ಮಾನರನ್ನು ನಾವು ಗೌರವಿಸುತ್ತೇವೆ ಇಲ್ಲಿ ಅನ್ನ ತಿಂದು ಪಾಕಿಸ್ತಾನದಿಂದ ಜಿಂದಾಬಾದ್ ಅವರನ್ನು ನಾವು ಬಿಡುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
ಹರ್ಷ ಕೊಲೆಯ ಎನ್ ಐ ಎ ತನಿಖೆಯಲ್ಲಿ ನ್ಯಾಯ ಸಿಗುವ ನಂಬಿಕೆಯಿದೆ ಹಿಂದುಗಡೆಯಿಂದ ಬಂದು ಕೊಚ್ಚಿ ಹೋದವರನ್ನು ಗಂಡಸರು ಎಂದು ಕರೆಯಲು ಸಾಧ್ಯವೇ? ಚುನಾವಣೆ ಬಂದಾಗ ನಾವು ಉತ್ತರ ಕೊಡುತ್ತೇವೆ ಎಂದರು.
ಲೋಕಸಭಾ ಚುನಾವಣೆಯಲ್ಲಿ ಒಂದು ಸೀಟು ಬರಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಚುನಾವಣೆಗೆ ಮುನ್ನ ನಾವು ಏನನ್ನು ಕೊಚ್ಚಿಕೊಳ್ಳುವುದಿಲ್ಲ ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಚುನಾವಣೆಯಲ್ಲಿ ಸೋತರು. ಉಪಚುನಾವಣೆ, ಗ್ರಾಮ ಪಂಚಾಯತಿ ಎಲ್ಲವನ್ನು ಬಿಜೆಪಿ ಗೆದ್ದುಕೊಂಡಿತು. ಕಾಂಗ್ರೆಸ್ ಬರೀ ಘೋಷಣೆಯನ್ನು ಮಾಡುತ್ತದೆ ಬಿಜೆಪಿ ಸಾಧನೆಯನ್ನು ಮಾಡುತ್ತದೆ ರಾಜ್ಯದಲ್ಲಿ 150ಕ್ಕಿಂತ ಹೆಚ್ಚು ಎಲ್ಲಾ 28 ಲೋಕಸಭಾ ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬೆಲೆ ಏರಿಕೆ ಇಂದು-ನಿನ್ನೆಯದಲ್ಲ ಹಿಂದಿನಿಂದಲೂ ನಡೆದುಕೊಂಡು ಬರುತ್ತಿದೆ . ವಿದೇಶಿ ವಿನಿಮಯದ ಮೇಲೆ ಪೆಟ್ರೋಲ್-ಡೀಸೆಲ್ ಅವಲಂಬಿತವಾಗಿದೆ ಕೇಂದ್ರ ಸರ್ಕಾರ ಏನೇನು ಕ್ರಮ ಕೈಗೊಳ್ಳಬೇಕು ಅದನ್ನ ಕೈಗೊಳ್ಳುತ್ತದೆ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.