ಈ ಬಾರಿ ದಸರಾ ಉದ್ಘಾಟಿಸೋದು ನಿತ್ಯೋತ್ಸವ ಕವಿ ನಿಸಾರ್ ಅಹಮದ್
Team Udayavani, Aug 17, 2017, 3:00 PM IST
ಬೆಂಗಳೂರು/ಮೈಸೂರು: ಸೆಪ್ಟೆಂಬರ್ 21ರಿಂದ 9 ದಿನಗಳ ಕಾಲ ನಡೆಯಲಿರುವ ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾವನ್ನು ನಿತ್ಯೋತ್ಸವ ಕವಿ ಕೆಸ್ ನಿಸಾರ್ ಅಹಮದ್ ಅವರು ಉದ್ಘಾಟಿಸಲಿದ್ದಾರೆ ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ಈ ಬಾರಿ ದಸರಾವನ್ನು ಹಿರಿಯ ಕವಿ ಕೆಸ್ ನಿಸಾರ್ ಅಹಮದ್ ಅವರು ಉದ್ಘಾಟಿಸಬೇಕೆಂದು ದಸರಾ ಉನ್ನತ ಮಟ್ಟದ ಸಮಿತಿ ನಿರ್ಧರಿಸಿದೆ. ಅದರಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಸಾರ್ ಜತೆ ಮಾತುಕತೆ ನಡೆಸಿರುವುದಾಗಿ ಹೇಳಿದರು.
ಶೀಘ್ರದಲ್ಲೇ ನಿಸಾರ್ ಅಹಮದ್ ಅವರಿಗೆ ಆಹ್ವಾನ ಪತ್ರಿಕೆ ನೀಡಲಾಗುವುದು ಎಂದು ಮಹದೇವಪ್ಪ ಈ ಸಂದರ್ಭದಲ್ಲಿ ತಿಳಿಸಿದರು. ಪ್ರೊ. ಕೊಕ್ಕರೆ ಹೊಸಳ್ಳಿ ಶೇಖಹೈದರ ನಿಸಾರ್ ಅಹಮದ್ ಅವರು ದೇವನಹಳ್ಳಿಯಲ್ಲಿ 1936ರ ಫೆಬ್ರುವರಿ 5ರಂದು ಜನಿಸಿದ್ದರು. ಸುಮಾರು 5 ದಶಕಗಳಿಂದ ಸಾಹಿತ್ಯ ಕೃಷಿಯಲ್ಲಿ ತೊಡಗಿರುವ ಕೆಎಸ್ 25 ಕೃತಿಗಳನ್ನು ರಚಿಸಿದ್ದಾರೆ.
ಮನಸು ಗಾಂಧಿ ಬಜಾರು ಹಾಗೂ ನಿತ್ಯೋತ್ಸವ ಪ್ರಸಿದ್ಧ ಕವನ ಸಂಕಲನಗಳಾಗಿದೆ. ನಿಸಾರ್ ಅವರು ಸಂವೇದನಾಶೀಲ ಹಾಗೂ ಜನಪ್ರಿಯ ಕವಿಯಾಗಿದ್ದಾರೆ. ಕುರಿಗಳು ಸಾರ್ ಕುರಿಗಳು ಅವರ ರಾಜಕೀಯ ವಿಡಂಬನೆಯ ಜನಪ್ರಿಯ ಕವನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Puttur: ಇದು ಅಜಿತರ ಸಾಹಸ : ರಬ್ಬರ್ ತೋಟದಲ್ಲಿ ಕಾಫಿ ಘಮ ಘಮ
Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.