ವಿಮ್ಸ್ ಆಸ್ಪತ್ರೆ ಘಟನೆ ತಪ್ಪಿತಸ್ಥರ ವಿರುದ್ಧ ಕ್ರಮ ಶತಸಿದ್ಧ: ಸಚಿವ ಡಾ.ಕೆ.ಸುಧಾಕರ್
Team Udayavani, Sep 17, 2022, 5:37 PM IST
ಬೆಂಗಳೂರು: ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳು ಸಾವಿಗೀಡಾದ ಘಟನೆ ಕುರಿತು ತನಿಖೆ ನಡೆಯುತ್ತಿದೆ. ಈ ಘಟನೆಗೆ ಕಾರಣವಾದವರ ವಿರುದ್ಧ ನೂರಕ್ಕೆ ನೂರು ಕ್ರಮ ವಹಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ರೋಗಿಗಳು ಸಾವಿಗೀಡಾದ ಕೂಡಲೇ ಡಾ.ಸ್ಮಿತಾ ಅವರ ಅಧ್ಯಕ್ಷತೆಯಲ್ಲಿ ಉನ್ನತ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗಿದೆ. ಸಮಿತಿಯವರು ನಿನ್ನೆ ಇಡೀ ದಿನ ಆಸ್ಪತ್ರೆಯಲ್ಲಿದ್ದು ಮಾಹಿತಿ ಪಡೆದಿದ್ದಾರೆ. ಇನ್ನೂ ಕೆಲ ಎಲೆಕ್ಟ್ರಿಕ್ ಎಂಜಿನಿಯರ್ ಗಳನ್ನು ಅಲ್ಲಿಗೆ ಕರೆದೊಯ್ಯಬೇಕು ಎಂದು ಸಮಿತಿಯವರು ಹೇಳಿದ್ದು, ಅದಕ್ಕೂ ವ್ಯವಸ್ಥೆ ಮಾಡಲಾಗಿದೆ. ಶೀಘ್ರದಲ್ಲಿ ಈ ಕುರಿತ ವರದಿ ಬರಲಿದೆ. ಯಾರೇ ತಪ್ಪಿತಸ್ಥರಿದ್ದರೂ ಅವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದರು.
ಈ ದುರ್ಘಟನೆಯಿಂದಾಗಿ ನಮಗೂ ನೋವಾಗಿದೆ. ಸಾವಿಗೀಡಾದ ರೋಗಿಗಳು ಆಸ್ಪತ್ರೆಗೆ ದಾಖಲಾದಾಗ ಅವರ ಆರೋಗ್ಯ ತೀವ್ರವಾಗಿ ಹದಗೆಟ್ಟಿತ್ತು ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ. ಆದರೂ ಸರ್ಕಾರದಿಂದ ತನಿಖೆಯನ್ನು ನಡೆಸಲಾಗುತ್ತಿದೆ. ತನಿಖಾ ವರದಿ ಬಂದ ನಂತರ ಅದನ್ನು ಪರಿಶೀಲಿಸಲಾಗುವುದು. ನೊಂದವರ ಕುಟುಂಬಕ್ಕೆ ಈಗಾಗಲೇ 5 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ನಾಳೆ ನಾನೇ ಬಳ್ಳಾರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ಮಾಡಲಿದ್ದೇನೆ. ಸರ್ಕಾರ ಯಾವುದೇ ಅಂಶವನ್ನು ಮುಚ್ಚಿಡುವುದಿಲ್ಲ. ಪ್ರತಿಯೊಬ್ಬರ ಜೀವವೂ ಸರ್ಕಾರಕ್ಕೆ ಬಹಳ ಮುಖ್ಯ ಎಂದರು.
ಯಾವುದೇ ಶಾಸಕರು ಹೇಳಿದಾಕ್ಷಣ ಆಸ್ಪತ್ರೆಗೆ ನಿರ್ದೇಶಕರನ್ನು ನೇಮಿಸಲು ಸಾಧ್ಯವಿಲ್ಲ. ನಿರ್ದೇಶಕರನ್ನು ನೇಮಿಸಲು ಕೆಲ ನಿಯಮಗಳಿರುತ್ತವೆ. ಅರ್ಹರಾದವರನ್ನು ಮಾತ್ರ ನಿರ್ದೇಶಕ ಸ್ಥಾನಕ್ಕೆ ನೇಮಕ ಮಾಡಲಾಗುತ್ತದೆ. ಕರುಣಾಕರ ರೆಡ್ಡಿ, ಸಚಿವ ಶ್ರೀರಾಮುಲು, ಸಚಿವ ಆನಂದ್ ಸಿಂಗ್ ಎಲ್ಲರೂ ಬಳ್ಳಾರಿಯಲ್ಲಿದ್ದಾರೆ. ಈ ಪ್ರಕ್ರಿಯೆ ಹೇಗೆ ನಡೆದಿದೆ ಎಂಬುದು ಅವರೆಲ್ಲರಿಗೂ ಗೊತ್ತಿದೆ. ಇದರಲ್ಲಿ ರಾಜಕಾರಣ ಮಾಡುವವರ ಘನತೆಯೇ ಕಡಿಮೆಯಾಗುತ್ತದೆ. ಇಂತಹ ವಿಚಾರದಲ್ಲಿ ಆರೋಪ ಮಾಡುವುದು ಬಹಳ ಸುಲಭ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.