![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 27, 2020, 9:11 PM IST
ಬೆಂಗಳೂರು :ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸೋಮವಾರ ಸಂಜೆಯೊಳಗಾಗಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಕನಿಷ್ಠ ಹತ್ತು ಸಾವಿರ ಹಾಸಿಗೆಗಳ ವ್ಯವಸ್ಥೆ ಮಾಡುವ ಕಾರ್ಯ ಪ್ರಗತಿಯಲ್ಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಶನಿವಾರ ವಿಡಿಯೋ ಕಾನ್ಫರೆನ್ಸ್ ನಡೆಸಿದ ನಂತರ ಮಾತನಾಡಿದ ಅವರು, ಸಕಾರಿ ಮತ್ತು ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳಲ್ಲದೆ, ಬಿಡಿಎ, ವಸತಿ ಇಲಾಖೆ ಮತ್ತು ಖಾಸಗಿ ನಿರ್ಮಾಣ ಸಂಸ್ಥೆಗಳು ನಿರ್ಮಿಸಿರುವ ವಸತಿ ಸಮುಚ್ಚಯಗಳು, ಸಕಾರಿ ಮತ್ತು ಖಾಸಗಿ ಕ್ರೀಡಾ ಸಂಕೀರ್ಣಗಳು, ಕ್ರೀಡಾಂಗಣಗಳು, ಹಾಸ್ಟೆಲ್‌ಗಳು ಮತ್ತು ಬೃಹತ್ ವಾಣಿಜ್ಯ ಸಮುತ್ಛಯಗಳನ್ನು ಕೋವಿಡ್ ಚಿಕಿತ್ಸೆ ಉದ್ದೇಶಕ್ಕೆ ಬಳಸಿಕೊಳ್ಳಲು ನಿರ್ಧರಿಸಲಾಗಿದೆ. ಇವುಗಳನ್ನು ಸೌಲಭ್ಯಗಳ ಆಧಾರದ ಮೇಲೆ ಕೋವಿಡ್ ಚಿಕಿತ್ಸಾ ಆಸ್ಪತ್ರೆ ಮತ್ತು ಕೋವಿಡ್ ರ್ಕೇ ಸೆಂಟರ್‌ಗಳನ್ನಾಗಿ ಪರಿವತಿಸಲಾಗುವುದು ಎಂದು ಹೇಳಿದರು.
ಬೆಂಗಳೂರು ನಗರದಾದ್ಯಂತ ಚಿಕಿತ್ಸೆಗೆ ಅಗತ್ಯವಿರುವ ಸರ್ಕಾರಿ ಮತ್ತು ಖಾಸಗಿ ಪ್ರದೇಶಗಳನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದ್ದು ಸೋಮವಾರ ಸಂಜೆ ವೇಳೆಗೆ ಖಚಿತ ಮಾಹಿತಿ ಲಭ್ಯವಾಗಲಿದೆ ಎಂದು ತಿಳಿಸಿದರು.
ವೆಂಟಿಲೇಟರ್, ಹೈ ಪ್ಲೊ ಆಕ್ಸಿಜನ್ ಮತ್ತು ಇತರೆ ಅಗತ್ಯ ಸೌಲಭ್ಯಗಳಿರುವ ಕಡೆ ಕೋವಿಡ್ ಆಸ್ಪತ್ರೆಗಳನ್ನಾಗಿ ಪರಿವರ್ತಿಸಲಾಗುವುದು. ನಗರದಲ್ಲಿ ಕಳೆದ ಒಂದು ವಾರದಿಂದ ಈಚೆಗೆ ಕೊರೋನಾ ಸೋಂಕಿತರ ಪೈಕಿ ಶೇ. 30 ರಿಂದ 50 ರೋಗದ ಲಕ್ಷಣ ಕಾಣಿಸಿಕೊಳ್ಳುತ್ತಿವೆ. ಹೀಗಾಗಿ ಸೋಂಕಿತರ ಲಕ್ಷಣ ಆಧರಿಸಿ ಲಘು ಮಧ್ಯಮ ಮತ್ತು ತೀವ್ರ ಸ್ವರೂಪ ಎಂದು ವಿಂಗಡಿಸಿ ಚಿಕಿತ್ಸೆ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ಚಿಕಿತ್ಸಾ ವಿಧಾನದ ವಿಧಿ -ವಿಧಾನಗಳನ್ನು ಅಂತಿಮಗೊಳಿಸಲು ತಜ್ಞರಿಗೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.
ಖಾಸಗಿ ಆಸ್ಪತ್ರೆಗಳಲ್ಲಿ ಶೇ. 50 ರಷ್ಟು ಹಾಸಿಗೆಗಳನ್ನು ಕೋವಿಡ್ ಚಿಕಿತ್ಸೆಗೆ ಬಿಟ್ಟುಕೊಡಲು ಸೂಚನೆ ನೀಡಲಾಗಿದೆ. ಮಾಲೀಕರ ಜತೆ ಸೋಮವಾರ ಮಾತುಕತೆ ನಡೆಸಲಾಗುವುದು. ಅವರಿಗೆ ನಿಗದಿತ ದರ ನೀಡಲಾಗುವುದು. ಆ ಕುರಿತು ಅವರೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಲಾಗುವುದು. ಹಾಗೆಯೇ ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳನ್ನು ಬಹುತೇಕ ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳುವ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ ಎಂದರು.
ಪರಿಶೀಲನೆ
ಕೋವಿಡ್ ಕೇರ್ ಸೆಂಟರ್‌ಗಳಿಗೆ ಹೆಚ್ಚಿನ ಸೌಲಭ್ಯ ಅಗತ್ಯವಿಲ್ಲ. ಹೀಗಾಗಿ ಬಿಡಿಎ, ವಸತಿ ಇಲಾಖೆ ನಿರ್ಮಿಸಿ ಸಿದ್ಧಗೊಂಡಿರುವ ಬಹುಮಹಡಿ ವಸತಿ ಸಮುತ್ಛಯಗಳನ್ನು ಬಳಸಲಾಗುವುದು. ಬಿಡಿಎ ಬಳಿ 1700 ಫ್ಲಾಟ್‌ಗಳಿವೆ. ಅವುಗಳಲ್ಲಿ ಬಳಕೆಗೆ ಲಭ್ಯವಿರುವ ನಿಖರ ಸಂಖ್ಯೆಯನ್ನು ಸೋಮವಾರ ತಿಳಿಸುವುದಾಗಿ ಆಯುಕ್ತ ಮಹದೇವ್ ತಿಳಿಸಿದ್ದಾರೆ. ಅದರ ಜತೆ ವಸತಿ ಇಲಾಖೆ, ರೇರಾದಲ್ಲಿ ನೋಂದಣಿಯಾಗಿರುವ ಖಾಸಗಿ ವಲಯದ ಮೂರು ಸಾವಿರ ಪ್ರಾಜೆಕ್ಟ್ಗಳಲ್ಲಿ ಲಭ್ಯವಾಗುವ ವಸತಿ ಸಮುತ್ಛಯದ ವಿವರಗಳು ಲಭ್ಯವಾಗಲಿವೆ. ಎಲ್ಲವನ್ನೂ ಅಧಿಕಾರಿಗಳು ಖುದ್ದು ಪರಿಶೀಲಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸ್ವಚ್ಛತೆಗೆ ನಗರದಲ್ಲಿರುವ ನೂರಾರು ಖಾಸಗಿ ಕಂಪನಿಗಳ ನೆರವನ್ನೂ ಪಡೆಯಲಾಗುವುದು. ಸುರಕ್ಷತೆಗೆ ರಾಜ್ಯ ಮೀಸಲು ಪೋಲೀಸ್, ನಗರ ಸಶಸ್ತ್ರ ಮೀಸಲು ಪಡೆಗಳಲ್ಲದೆ, ಗೃಹ ರಕ್ಷಕ ದಳ, ಎನ್‌ಸಿಸಿ ಕೆಡೆಟ್‌ಗಳಲ್ಲದೆ, ನಗರದಲ್ಲಿ ಕೇಂದ್ರ ಹೊಂದಿರುವ ಅರೆ ಮಿಲಿಟರಿ ಪಡೆಗಳ ನೆರವು ಪಡೆಯಲಾಗುವುದು ಎಂದರು.
ವಿಡಿಯೋ ಸಂವಾದದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ , ಬಿಡಿಎ ಆಯುಕ್ತ ಡಾ. ಎಂ. ಮಹದೇವ್, ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿಟಿ.ಕೆ. ಅನಿಲ್ ಕುರ್ಮಾ, ರೇರಾ ಕಾರ್ಯದರ್ಶಿ ಲತಾಕುಮಾರಿ, ಕ್ರೀಡಾ ಇಲಾಖೆ ಆಯುಕ್ತ ಶ್ರೀನಿವಾಸ್, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ. ಗಿರೀಶ್ ಉಪಸ್ಥಿತರಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.