ಅಡಿಕೆ ವ್ಯಾಪಾರಿ ದರೋಡೆ ಪ್ರಕರಣದಲ್ಲಿ ಡೀಲ್: ಎಸ್ ಜೆ ಪಾರ್ಕ್ ಇನ್ಸ್ ಪೆಕ್ಟರ್ ಅಮಾನತು
Team Udayavani, Sep 13, 2020, 4:09 PM IST
ಕಮಲ್ ಪಂತ್
ಪುತ್ತೂರು: ಬೆಂಗಳೂರಿನ ಎಸ್ ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ವೃತ್ತ ನಿರೀಕ್ಷಕರಾಗಿದ್ದ ಯೋಗೀಶ್ ಕುಮಾರ್ ರನ್ನು ಅಮಾನತುಗೊಳಿಸಿ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಕಮಲ್ ಪಂತ್ ಆದೇಶಿಸಿದ್ದಾರೆ.
ಭ್ರಷ್ಟಾಚಾರ ನಿಗ್ರಹದಳದ ಮಂಗಳೂರು ಘಟಕದಲ್ಲಿ ಇನ್ಸ್ ಪೆಕ್ಟರ್ ಆಗಿದ್ದ ಯೋಗೀಶ್ ಕುಮಾರ್ ರವರು ಪುತ್ತೂರಿನಲ್ಲಿ ತಹಶೀಲ್ದಾರ್ ಡಾ. ಪ್ರದೀಪ್ ಕುಮಾರ್, ಸಹಕಾರ ಸಂಘಗಳ ಸಹಾಯಕ ನಿಬಂಧಕ ಮಂಜುನಾಥ್ ಸಹಿತ ಹಲವರನ್ನು ಲಂಚ ಪಡೆಯುತ್ತಿದ್ದ ವೇಳೆ ಬಲೆಗೆ ಕೆಡವಿದ್ದ ಎ.ಸಿ.ಬಿ. ತಂಡದಲ್ಲಿದ್ದರು. ಯೋಗೀಶ್ ಕುಮಾರ್ ಈ ಹಿಂದೆ ಕಡಬ ಪೊಲೀಸ್ ಠಾಣಾ ಎಸ್.ಐ. ಆಗಿದ್ದರು. ಪ್ರಸ್ತುತ ಬೆಂಗಳೂರಿನ ಎಸ್.ಜೆ.ಪಾರ್ಕ್ ಠಾಣಾ ವೃತ್ತ ನಿರೀಕ್ಷಕರಾಗಿದ್ದರು. ಅಡಿಕೆ ಉದ್ಯಮಿಯೋರ್ವರ ದರೋಡೆ ಪ್ರಕರಣದಲ್ಲಿ ಡೀಲ್ ನಡೆಸಿ ಎಸ್.ಐ.ಯವರಿಂದ ಆರು ಲಕ್ಷ ರೂ ಲಂಚ ಪಡೆದ ಆರೋಪದಡಿ ಪೊಲೀಸ್ ಕಮೀಷನರ್ ಕಮಲ್ ಪಂತ್ ಯೋಗೀಶ್ ರವರನ್ನು ಅಮಾನತು ಮಾಡಿ ಆದೇಶ ಮಾಡಿದ್ದಾರೆ.
ಸದ್ಯ ಯೋಗೀಶ್ ಪರಾರಿಯಾಗಿದ್ದು ಅವರಿಗಾಗಿ ಶೋಧ ನಡೆಯುತ್ತಿದೆ. ಮೂಲತಃ ಮಡಿಕೇರಿಯವರಾದ ಯೋಗೀಶ್ ರವರು ಪುತ್ತೂರಿನ ಪ್ರತಿಷ್ಠಿತ ಕಾಲೇಜೊಂದರ ಹಳೆ ವಿದ್ಯಾರ್ಥಿ ಆಗಿದ್ದರು.
ಪೊಲೀಸ್ ಇಲಾಖೆಯ ಇನ್ನೊಂದು ಮೂಲದ ಪ್ರಕಾರ, ಯೋಗೀಶ್ ರವರು ನೇರವಾಗಿ ಲಂಚ ಪಡೆದುಕೊಂಡಿಲ್ಲ, ಪೊಲೀಸ್ ಸಿಬ್ಬಂದಿ ತಂದು ನೀಡಿದ ಹಣವನ್ನು ಇವರು ಮುಟ್ಟಿಲ್ಲ. ಆದರೆ, ಅಡಿಕೆ ವ್ಯಾಪಾರಿಯ ದರೋಡೆ ನಡೆಸಿದವರ ಜತೆ ಶಾಮೀಲಾದ ಎಸ್.ಐ.ವಿರುದ್ಧ ಇವರು ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಯೋಗೀಶ್ ರವರು ಪರಾರಿಯಾಗಿಲ್ಲ, ಅವರು ಮಡಿಕೇರಿಯ ಮನೆಯಲ್ಲಿದ್ದಾರೆ ಎಂದು ಅವರ ಆಪ್ತರು ಪ್ರತಿಕ್ರಿಯಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.