ಕಂಬಳ: ತಿದ್ದುಪಡಿ ಮಸೂದೆ ಮಂಡನೆ
Team Udayavani, Nov 17, 2017, 6:00 AM IST
ಬೆಳಗಾವಿ: ಕಂಬಳ ಸಹಿತ ಹೋರಿ ಓಟ ಮತ್ತು ಎತ್ತಿನ ಗಾಡಿ ಓಟಕ್ಕೆ ಕಾನೂನು ಮಾನ್ಯತೆ ದೊರಕಿಸುವ ಉದ್ದೇಶದಿಂದ ರಾಜ್ಯ ಸರಕಾರ ಸಿದ್ಧಪಡಿಸಿರುವ “ಪ್ರಾಣಿಗಳಿಗೆ ಹಿಂಸಾಚಾರ ಮಾಡುವುದನ್ನು ತಡೆಗಟ್ಟುವ (ಕರ್ನಾಟಕ ಎರಡನೇ ತಿದ್ದುಪಡಿ)’ ಮಸೂದೆಯನ್ನು ಗುರುವಾರ ಮಂಡಿಸಲಾಗಿದೆ. ಆ ಮೂಲಕ ಕಂಬಳ ಕ್ರೀಡೆ ಸಹಿತ ಮೂರು ಜಾನಪದ ಕ್ರೀಡೆಗಳ ಆಯೋಜನೆಗೆ ಶಾಶ್ವತ ಪರಿಹಾರ ಕಲ್ಪಿಸುವುದಕ್ಕೆ ಸರಕಾರ ಮುಂದಾಗಿದೆ.
ರಾಜ್ಯದಲ್ಲಿ ಕಂಬಳ ಕ್ರೀಡೆ ಮತ್ತು ಎತ್ತಿನ ಗಾಡಿ ಓಟ ಸ್ಪರ್ಧೆ ಹಾಗೂ ಹೋರಿ ಓಟದ ಸ್ಪರ್ಧೆ ಆಯೋಜನೆಗೆ ಈಗಾಗಲೇ ಅಧ್ಯಾದೇಶ ಜಾರಿ ಗೊಳಿಸುವ ಮೂಲಕ ರಾಜ್ಯ ಸರಕಾರ ತಾತ್ಕಾಲಿಕ ಪರಿಹಾರ ಕಲ್ಪಿಸಿದೆ. ಈ ಹಿನ್ನೆಲೆಯಲ್ಲಿ ಕಂಬಳ ಕ್ರೀಡೆ ಆಯೋಜನೆಗೆ ಕಾನೂನು ಮಾನ್ಯತೆ ದೊರಕಿಸಿ ಕೊಡುವ ಕಾಯ್ದೆ ರೂಪಿಸುವ ಮೂಲಕ ಅಧ್ಯಾದೇಶವನ್ನು ಊರ್ಜಿತ ಗೊಳಿಸಬೇಕು ಎಂಬುದು ಕರಾವಳಿ ಭಾಗದ ಜನರ ಬೇಡಿಕೆಯಾಗಿತ್ತು. ಅದರಂತೆ ಕಂಬಳ ಕ್ರೀಡಾಸಕ್ತರ ಹಾಗೂ ಅಭಿಮಾನಿಗಳ ಮನವಿಗೆ ಸ್ಪಂದಿಸಿ ರಾಜ್ಯ ಸರಕಾರ ಸಿದ್ಧ ಪಡಿಸಿರುವ “ಪ್ರಾಣಿಗಳಿಗೆ ಹಿಂಸಾಚಾರ ಮಾಡುವುದನ್ನು ತಡೆಗಟ್ಟುವ (ಕರ್ನಾಟಕ 2ನೇ ತಿದ್ದುಪಡಿ)’ ಮಸೂದೆಯನ್ನು ಪಶು ಸಂಗೋಪನಾ ಸಚಿವ ಎ. ಮಂಜು ವಿಧಾನ ಸಭೆಯಲ್ಲಿ ಮಂಡಿಸಿದರು. ಆದರೆ ಈ ಬಗ್ಗೆ ಸದನದಲ್ಲಿ ಚರ್ಚೆಗೆ ಅವಕಾಶ ಕಲ್ಪಿಸುವಂತೆ ಸದಸ್ಯರು ಕೋರಿರುವ ಕಾರಣ ಈ ಮಸೂದೆ ಮೇಲೆ ಸಮಗ್ರ ಚರ್ಚೆಯಾದ ಬಳಿಕ ಇದಕ್ಕೆ ಒಪ್ಪಿಗೆ ಸಿಗಬೇಕಾಗಿದೆ.
ಮಸೂದೆ ಜಾರಿಯಾದರೆ ಕಂಬಳ ನಿಷೇಧ ಭೀತಿ ದೂರಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
ಮುಧೋಳ: ಮದುವೆಯಾದ ಒಂದೇ ತಿಂಗಳಲ್ಲಿ ಪತ್ನಿ ಪರಾರಿ… ಮದುವೆ ಮಾಡಿಸಿದ ಬ್ರೋಕರ್ ಗಳೂ ನಾಪತ್ತೆ
MUST WATCH
ಹೊಸ ಸೇರ್ಪಡೆ
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!
Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.