Kambala Association; ಶೀಘ್ರ ಮಾನ್ಯತೆ: ಮಂಜುನಾಥ ಭಂಡಾರಿ

ಅಧಿಕಾರಿಗಳ ಧೋರ ಣೆ ವಿರುದ್ಧ ತರಾಟೆ

Team Udayavani, Oct 29, 2024, 6:20 AM IST

Kambala

ಬೆಂಗಳೂರು: ಬಹು ನಿರೀಕ್ಷಿತ ರಾಜ್ಯ ಕಂಬಳ ಅಸೋಸಿ ಯೇಶನ್‌ಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ಶೀಘ್ರ ಮಾನ್ಯತೆ ದೊರೆಯಲಿದೆ.

ಶಾಸಕರ ಭವನದಲ್ಲಿ ಶುಕ್ರವಾರ ನಡೆದ ಸರಕಾರದ ಭರವಸೆ ಸಮಿತಿ ಸಭೆಯಲ್ಲಿ ಸಮಿತಿ ಸದಸ್ಯ ಮಂಜುನಾಥ ಭಂಡಾರಿ ವಿಷಯ ಪ್ರಸ್ತಾವಿಸಿ, ಕರಾವಳಿ ಸಂಸ್ಕೃತಿಯ ಪ್ರತೀಕ ಹಾಗೂ ಜಾನಪದ ಕ್ರೀಡೆ ಕಂಬಳಕ್ಕೆ ಮಾನ್ಯತೆ ಹಾಗೂ ರಾಜ್ಯ ಸರಕಾರದ ಕ್ರೀಡಾ ಪ್ರಾಧಿಕಾರದಿಂದ ನೋಂದಣಿಗೆ ಒಪ್ಪಿಗೆ ನೀಡುವುದಾಗಿ ಸಂಬಂಧಪಟ್ಟ ಸಚಿವರು ಭರವಸೆ ನೀಡಿದ್ದರು. ಈವರೆಗೆ ಇದು ಈಡೇರಿಲ್ಲ ಎಂದು ಅಸಮಾಧಾನ ಹೊರಹಾಕಿದರು. ಜತೆಗೆ ಅಧಿಕಾರಿಗಳ ಧೋರಣೆಯನ್ನು ತರಾಟೆಗೆ ತೆಗೆದುಕೊಂಡರು.

ಇದಕ್ಕೆ ಸ್ಪಂದಿಸಿದ ಇಲಾಖೆ ಅಧಿಕಾರಿಗಳು ಅನುಮೋದನೆ ನೀಡುವುದಾಗಿ ಹೇಳಿದರು. ಈ ಹಿಂದೆ ಅಧಿವೇಶನದಲ್ಲಿ ತಾವು ನಿಯಮ 330ರಡಿ ವಿಷಯ ಪ್ರಸ್ತಾವಿಸಿ ರಾಜ್ಯ ಕಂಬಳ ಅಸೋಸಿಯೇಶನ್‌ಗೆಮಾನ್ಯತೆ ಮತ್ತು ನೋಂದಣಿಗೆ ಅನುಮೋದನೆ ನೀಡುವಂತೆ ಸರಕಾರಕ್ಕೆ ಮನವಿ ಮಾಡಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಸಚಿವರು, ಅನುಮೋದನೆ ನೀಡುವುದಾಗಿಯೂ ಹೇಳಿದ್ದರು. ಅನಂತರ ಸಭಾಪತಿಗಳ ಅಧ್ಯಕ್ಷತೆಯಲ್ಲಿ ಸಚಿವರ ಹಾಗೂ ಅಂದಿನ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾಗಿದ್ದ ಡಾ| ಶಾಲಿನಿ ರಜನೀಶ್‌, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಸಭೆ ಕರೆದು ಕೂಡಲೇ ಸರಕಾರಕ್ಕೆ ವರದಿ ನೀಡುವಂತೆ ನಿರ್ದೇಶನ ನೀಡಿದ್ದರು.

ಇದಾದ ಮೇಲೆ ದ.ಕ. ಜಿಲ್ಲಾಡಳಿತವು ಕಂಬಳ ಅಸೋಸಿ ಯೇಶನ್‌ಗೆ ಕ್ರೀಡಾ ಪ್ರಾಧಿಕಾರದಲ್ಲಿ ಮಾನ್ಯತೆ ನೀಡುವ ಸಂಬಂಧ ಅಗತ್ಯ ದಾಖಲೆಗಳೊಂದಿಗೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಇದುವರೆಗೆ ಮಾನ್ಯತೆ ದೊರೆತಿಲ್ಲ. ಈ ಬಗ್ಗೆ ಭರವಸೆ ಸಮಿತಿಯಲ್ಲಿ ಮಂಜುನಾಥ ಭಂಡಾರಿ ಅಸಮಾ ಧಾನ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಣದೀಪ್‌, ಕೂಡಲೇ ರಾಜ್ಯ ಕಂಬಳ ಅಸೋಸಿಯೇಶನ್‌ಗೆ ಅನುಮೋದನೆ ನೀಡುವುದಾಗಿ ಭರವಸೆ ನೀಡಿದರು.

ಟಾಪ್ ನ್ಯೂಸ್

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್‌ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.