ಕಂಬಳ ತಡೆಯಲು ಸಾಧ್ಯವಿಲ್ಲ : ಖಾದರ್
Team Udayavani, Jan 24, 2017, 3:45 AM IST
ಬೆಂಗಳೂರು: ಜನವರಿ 28ರಂದು ನಡೆಯುವ ವಿಚಾರಣೆಯಲ್ಲಿ ಹೈ ಕೋರ್ಟ್ ಕಂಬಳ ನಿಷೇಧವನ್ನು ಮುಂದುವರೆಸಿದರೆ, ರಾಜ್ಯ ಸರ್ಕಾರ ಸೂಕ್ತ ಕಾನೂನು ತರುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಕರಾವಳಿ ಭಾಗದ ಸಚಿವರು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಯು.ಟಿ.ಖಾದರ್ ಹೇಳಿದರು.
“ಉದಯವಾಣಿ’ಯೊಂದಿಗೆ ಮಾತನಾಡಿದ ಅವರು, ಕಂಬಳ ಮತ್ತು ಯಕ್ಷಗಾನ ಸಂಸ್ಕೃತಿಯ ಪ್ರತೀಕ. ಕಂಬಳ
ಆಚರಣೆಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದರು. ಕರಾವಳಿ ಭಾಗದ ಇನ್ನಿಬ್ಬರು ಸಚಿವರಾದ
ರಮಾನಾಥ ರೈ ಮತ್ತು ಪ್ರಮೋದ್ ಮಧ್ವರಾಜ್ ಕೂಡ ಕಂಬಳ ಕ್ರೀಡೆಗೆ ಬೆಂಬಲ ಸೂಚಿಸಿ ಮಾತನಾಡಿದ್ದಾರೆ. ಕಂಬಳ ಸಮಿತಿ ಕೋರ್ಟ್‌ನಲ್ಲಿ ವಾದ ಮಾಡಲು ಪೂರಕ ಮಾಹಿತಿ ಮತ್ತು ಸಹಕಾರವನ್ನು ರಾಜ್ಯ ಸರ್ಕಾರ ಈಗಾಗಲೇ ನೀಡಿದೆ. ಕೋರ್ಟ್ ಆದೇಶ ನೋಡಿಕೊಂಡು ಮುಂದಿನ ಕ್ರಮದ ಬಗ್ಗೆ ಮುಖ್ಯಮಂತ್ರಿ ಜೊತೆಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ರಮಾನಾಥ ರೈ ಹೇಳಿದ್ದಾರೆ.
ಹೈಕೋರ್ಟ್‌ಗೆ ಮನವಿ: ಕಂಬಳಕ್ಕೆ ನೀಡಿರುವ ತಡೆಯಾಜ್ಞೆ ವಿಚಾರಣೆ ಹೈಕೋರ್ಟ್‌ನಲ್ಲಿ ಜ. 30ಕ್ಕೆ ನಿಗದಿಯಾಗಿದ್ದು, ಆದ್ಯತೆಯ ನೆಲೆಯಲ್ಲಿ ಆ ವಿಚಾರಣೆಯನ್ನು ದಿನಾಂಕಕ್ಕೆ ಮೊದಲೇ ನಡೆಸಲು ನ್ಯಾಯಾಲಯಕ್ಕೆ ಮನವಿ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಕಂಬಳ ಸಮಿತಿ ಹೇಳಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂಬಳ ಸಮಿತಿಯ ಅಧ್ಯಕ್ಷ ಶಾಸಕ ಕೆ.ಅಭಯಚಂದ್ರ ಜೈನ್, ಕಂಬಳದ ಪರವಾಗಿ ತೀರ್ಪು ಬಂದರೆ ವಿಜಯೋತ್ಸವ ಕಂಬಳ ಅಥವಾ ಕೋರ್ಟ್ ಅವಕಾಶ ನೀಡದಿದ್ದರೆ ಹಕ್ಕೊತ್ತಾಯ ಶಾಂತಿಯುತ ಪ್ರತಿಭಟನಾ ಮೆರವಣಿಗೆಯನ್ನು ಜ. 28ರಂದು ಆಯೋಜಿಸಲಾಗಿದೆ ಎಂದರು.
ಕಂಬಳಕ್ಕೆ ಆಗ್ರಹಿಸಿ ತುಳುನಾಡ ರಕ್ಷಣಾ ವೇದಿಕೆ ಜ. 24ರಂದು ಮಂಗಳೂರು ಡಿಸಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.