Withdraws Plea; ದರ್ಶನ್ ಗೆ ಮನೆಯೂಟವಿಲ್ಲ: ವಕೀಲರಿಂದ ಅರ್ಜಿ ವಾಪಾಸ್
Team Udayavani, Jul 29, 2024, 6:49 PM IST
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಮನೆಯ ಆಹಾರ, ಬಟ್ಟೆ ಮತ್ತು ಇತರ ಕೆಲವು ವ್ಯವಸ್ಥೆ ಕೋರಿ ಹೈಕೋರ್ಟ್ಗೆ ಸಲ್ಲಿಸಿದ್ದ ಮನವಿಯನ್ನು ಹಿಂಪಡೆದಿದ್ದಾರೆ.
ಅರ್ಜಿಯನ್ನು ತಿರಸ್ಕರಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ದರ್ಶನ್ ಪರ ವಕೀಲರು ಮೆಮೊ ಸಲ್ಲಿಸಿದ ನಂತರ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರ ಏಕಸದಸ್ಯ ಪೀಠವು ಅರ್ಜಿಯನ್ನು ಹಿಂಪಡೆಯಲು ಅನುಮತಿ ನೀಡಿತು.
ಇತ್ತೀಚೆಗಷ್ಟೇ ಹೈಕೋರ್ಟ್ ಅರ್ಜಿಯ ವಿಚಾರಣೆಗೆ ಮುನ್ನ ಪ್ರಕರಣ ಬಾಕಿ ಇರುವ ವಿಚಾರಣಾ ನ್ಯಾಯಾಲಯವನ್ನೇ ಸಂಪರ್ಕಿಸುವಂತೆ ಸೂಚಿಸಿತ್ತು. ಅದರ ನಂತರ ಮನೆಯ ಊಟ ಮತ್ತು ಹಾಸಿಗೆ ಕೋರಿ ಅರ್ಜಿ ಸಲ್ಲಿಸಿದ್ದರು.ಜುಲೈ 25 ರಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿತ್ತು. ಆರೋಪಿ ನಂ.2 ದರ್ಶನ್ ಕೊಲೆಯ ಆರೋಪಗಳನ್ನು ಎದುರಿಸುತ್ತಿರುವ ಕಾರಣ, ಅವರು ಕೋರಿದ ಪರಿಹಾರಕ್ಕೆ ಅರ್ಹರಲ್ಲ ಎಂದು ನ್ಯಾಯಾಲಯ ಪರಿಗಣಿಸಿತ್ತು.ಅರ್ಜಿಯಲ್ಲಿ ಹೊಟ್ಟೆ ನೋವು ಮತ್ತು ಅತಿಸಾರದಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗಿತ್ತು.
ದರ್ಶನ್ ಅವರನ್ನು ಜೂನ್ 11 ರಂದು ಬಂಧಿಸಲಾಗಿತ್ತು. ಜೂನ್ 22 ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.