ಕಲಾವಿದರಿಗೆ ಪ್ರೋತ್ಸಾಹಧನ ನೀಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅರ್ಜಿ ಆಹ್ವಾನ
Team Udayavani, Apr 22, 2020, 12:30 PM IST
Representative Image
ಬೆಂಗಳೂರು: ಪ್ರಸ್ತು ಕೋವಿಡ್-19 ಸೋಂಕಿನ ಕಾರಣ ರಾಜ್ಯ ಲಾಕ್ ಡೌನ್ ಆಗಿದ್ದು, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು, ಸಾಹಿತಿಗಳಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆರ್ಥಿಕ ಸಹಾಯ ಮಾಡಲು ನಿರ್ಧರಿಸಲಾಗಿದೆ.
ಕನಿಷ್ಟ 10 ವರ್ಷ ಕಲಾ ಸೇವೆ ಮಾಡಿರುವ ವೃತ್ತಿ ನಿರತ ಕಲಾವಿದರು ಇದಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಆರ್ಥಿಕ ಸಂಕಷ್ಟದಲ್ಲಿರುವ ಎಲ್ಲಾ ಕಲಾ ಪ್ರಕಾರದ ಕಲಾವಿದರು/ ಸಾಹಿತಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಆದರೆ ಯಾವುದೇ ಸರ್ಕಾರಿ ನೌಕರರಾಗಿರಬಾರದು, ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾಸಾಶನ ಪಡೆಯುತ್ತಿರಬಾರದು. ಈ ವ್ಯಾಪ್ತಿಗೆ ಬರುವ ಎಲ್ಲಾ ಪ್ರಕಾರದ ಕಲಾವಿದರು/ ಸಾಹಿತಿಗಳು ತಮ್ಮ ಹೆಸರು, ವಿಳಾಸ, ಕಲಾಪ್ರಕಾರ, ಆಧಾರ್ ಸಂಖ್ಯೆ, ದೂರವಾಣಿ ಸಂಖ್ಯೆ, ಬ್ಯಾಂಕ್ ಖಾತೆ ವಿವರಗಳನ್ನು (ಬ್ಯಾಂಕ್ ಪುಸ್ತಕದ ಝೆರಾಕ್ಸ್ ಪ್ರತಿ ಲಗತ್ತಿಸಿ) ಒಳಗೊಂಡ ಅರ್ಜಿಯನ್ನು ಬಿಳಿಹಾಳೆಯಲ್ಲಿ ಬರೆದು ಸಂಬಂಧಪಟ್ಟ ಜಿಲ್ಲಾ ಸಹಾಯಕ ನಿರ್ದೇಶಕರು, ಆಕಾಡೆಮೆ/ ಪ್ರಾಧಿಕಾರದ ರಿಜಿಸ್ಟ್ರಾರ್ ಗಳಿಗೆ ಇ ಮೇಲ್, ಅಥವಾ ವ್ಯಾಟ್ಸಪ್ ಅಥವಾ ಖುದ್ದಾಗಿ ಇದೇ ತಿಂಗಳ 27ರ ಒಳಗಾಗಿ ಸಲ್ಲಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.