ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡ ಕಡ್ಡಾಯ: ಸರ್ಕಾರದಿಂದ ಆದೇಶ
Team Udayavani, Sep 6, 2022, 7:31 PM IST
ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ನಡೆಯುವ ಕಾರ್ಯಕ್ರಮಗಳ ಆಯೋಜನೆಯಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸುವ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸುತ್ತೋಲೆ ಹೊರಡಿಸಿದ್ದಾರೆ.
ಕನ್ನಡವನ್ನು ಕರ್ನಾಟಕ ರಾಜ್ಯದ ಆಡಳಿತ ಭಾಷೆಯಾಗಿ ಇರತಕ್ಕದೊಂದು ಕರ್ನಾಟಕ ರಾಜ್ಯ ಭಾಷಾ ಅಧಿನಿಯಮ, 1953ರಲ್ಲಿ ನಿರ್ದಿಷ್ಟಪಡಿಸಲಾಗಿರುತ್ತದೆ. ಕರ್ನಾಟಕದಲ್ಲಿ ಕನ್ನಡವು ಆಡಳಿತ ಭಾಷೆಯ ಜೊತೆಗೆ ಸಾರ್ವಭೌಮ ಭಾಷೆಯಾಗಿದೆ. ಕನ್ನಡವನ್ನು ರಾಜ್ಯದಲ್ಲಿ ಆಡಳಿತ ಭಾಷೆಯಾಗಿ ಅನುಷ್ಠಾನಗೊಳಿಸುವ ಸಂಬಂಧ ಕನ್ನಡ ಭಾಷೆ ಮತ್ತು ಕನ್ನಡಿಗರ ಹಿತಾಸಕ್ತಿಯನ್ನು ಕಾನೂನಿನನ್ವಯ ಸಂರಕ್ಷಿಸುವ ಸಲುವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ರಚನೆಯಾಗಿರುತ್ತದೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಪತ್ರದಲ್ಲಿ ದಿನಾಂಕ: 06.08.2022 ರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯನ್ನು ಬಳಸದಿರುವ ಬಗ್ಗೆ, ಪ್ರಸ್ತಾಪಿಸಿರುತ್ತಾರೆ. ಈ ಬಗ್ಗೆ ವೇದಿಕೆ ಮೇಲೆ ಅಳವಡಿಸಲಾಗುವ ಪರದೆಗಳಲ್ಲಿ ಫಲಕಗಳಲ್ಲಿ ಹಾಗೂ ಒಟ್ಟಾರೆಯಾಗಿ ಕಾರ್ಯಕ್ರಮದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸುವಂತೆ ಸರ್ಕಾರದ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡುವಂತೆ ಕೋರಿರುತ್ತಾರೆ.
ಕನ್ನಡ ಭಾಷೆ ನಮಗೆ ಆದ್ಯತೆ ಆಗಬೇಕೇ ಹೊರತು ಆಯ್ಕೆಯಾಗಬಾರದು. ಈ ಹಿನ್ನೆಲೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಪ್ರಸ್ತಾವನೆಯನ್ನಯ, ಇನ್ನು ಮುಂದೆ ರಾಜ್ಯದಲ್ಲಿ ಜರುಗುವ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳ ಆಯೋಜನೆಯಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸತಕ್ಕದ್ದೆಂದು ಈ ಮೂಲಕ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.