ಕನ್ನಡ ಶಾಲೆಯಲ್ಲಿ ತ.ನಾಡು ಮಕ್ಕಳ ವಿದ್ಯಾಭ್ಯಾಸ
Team Udayavani, Nov 1, 2022, 4:52 PM IST
ಮಾಸ್ತಿ: ಮಾಲೂರು ತಾಲೂಕಿನ ಮಾಸ್ತಿ ಹೋಬಳಿ ದಿನ್ನಹಳ್ಳಿ ಗ್ರಾಪಂ ವ್ಯಾಪ್ತಿ ಹೊಸಮನೆಗಳು ಗ್ರಾಮದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಗೆ ತಮಿಳುನಾಡಿನ 5 ಮಕ್ಕಳು ಕನ್ನಡ ಕಲಿಯಲು ಬರುತ್ತಿದ್ದು, ಇದು ಭಾಷಾ ಸಾಮರಸ್ಯಕ್ಕೆ ಸಾಕ್ಷಿಯಾಗಿದೆ.
ದಿನ್ನಹಳ್ಳಿ ಗ್ರಾಪಂ ಗಡಿ ಭಾಗದಲ್ಲಿರುವ ಹೊಸಮನೆಗಳು ಗ್ರಾಮದಲ್ಲಿನ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಒಟ್ಟು 7 ಮಂದಿ ವಿದಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶಾಲೆಗೆ ಕೂಗಳತೆ ದೂರದಲ್ಲಿರುವ ನೆರೆಯ ತಮಿಳುನಾಡು ರಾಜ್ಯದ ಹಳ್ಳಿಯಿಂದ 5 ಮಂದಿ ವಿದ್ಯಾರ್ಥಿಗಳು ಗ್ರಾಮದ ಕನ್ನಡ ಶಾಲೆಗೆ ಸೇರಿ, ಕನ್ನಡ ಕಲಿಯುತ್ತಿರುವುದು ಎರಡು ರಾಜ್ಯಗಳ ಬಾಂಧವ್ಯಕ್ಕೆ ಕಾರಣವಾಗಿದೆ.
ಹೊಸಮನೆಗಳು ಶಾಲೆಗೆ ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆ ಹೊಸೂರು ತಾಲೂಕಿನ “ಚಾಪರಪಲ್ಲಿ’ ಗ್ರಾಮದ ಐದು ಮಂದಿ ವಿದ್ಯಾರ್ಥಿಗಳು ಕನ್ನಡ ಕಲಿಯಲು ಬರುತ್ತಿದ್ದಾರೆ. ಚಾಪರಪಲ್ಲಿಯಲ್ಲಿ ಶಾಲೆ ಇಲ್ಲ ಎಂದಲ್ಲ. ಅಲ್ಲಿಯೂ ತಮಿಳು ಶಾಲೆ ಇದ್ದರೂ ಕನ್ನಡ ಶಾಲೆಯಲ್ಲಿ ಕಲಿಯಬೇಕೆನ್ನುವ ದೃಷ್ಟಿಯಿಂದಲೇ ಇಲ್ಲಿಗೆ ಬರುತ್ತಿದ್ದಾರೆ. ಒಂದನೇ ತರಗತಿಗೆ ಜಿ.ಕುಮಾರ್, ಎರಡನೇ ತರಗತಿಗೆ ಶಂಕರನ್ ಹಾಗೂ ಪ್ರಜ್ವಲ್, ಮೂರನೇ ತರಗತಿಗೆ ನಿತೀನ್ ಹಾಗೂ ಐದನೇ ತರಗತಿಗೆ ದೀಪಾ ಎಂಬ ವಿದ್ಯಾರ್ಥಿಗಳು ತಮಿಳುನಾಡಿನಿಂದ ಕನ್ನಡ ಕಿರಿಯ ಪ್ರಾಥಮಿಕ ಶಾಲೆಗೆ ಬರುತ್ತಿದ್ದಾರೆ. ಕನ್ನಡವನ್ನು ಸ್ಪಷ್ಟವಾಗಿ ಬರೆಯಲು, ಓದಲು ಕಲಿತಿದ್ದಾರೆ ವಿಶೇಷವಾಗಿದೆ.
ವಿದ್ಯಾರ್ಥಿಗಳು ಬಲುಚುರುಕು: ತಮಿಳುನಾಡಿನಿಂದ ಬರುವ ಐದು ಮಂದಿ ವಿದ್ಯಾರ್ಥಿಗಳು ಬಹಳ ಚೆನ್ನಾಗಿ ನಮ್ಮ ಶಾಲೆಯಲ್ಲಿ ಕನ್ನಡ ಕಲಿಯು ತ್ತಿದ್ದಾರೆ. ಒಟ್ಟು ನಮ್ಮ ಶಾಲೆಯಲ್ಲಿ 7 ಮಂದಿ ವಿದ್ಯಾರ್ಥಿಗಳಿದ್ದು, ಅವರಲ್ಲಿ ಐದು ಮಂದಿ ಮಕ್ಕಳೂ ನೆರೆಯ ತಮಿಳುನಾಡಿನಿಂದ ಬಂದು ನಮ್ಮ ಭಾಷೆ ಕಲಿಯುತ್ತಿದ್ದಾರೆ. ಎಲ್ಲಾ ಮಕ್ಕಳೊಡನೆ ಉತ್ತಮ ಬಾಂಧವ್ಯ ಹೊಂದಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಇಲ್ಲಿ ಯಾವುದೇ ರೀತಿಯಾದ ಬೇದಭಾವವಿಲ್ಲ ಎನ್ನುತ್ತಾರೆ ಶಾಲೆಯ ಮುಖ್ಯಶಿಕ್ಷಕ ಸತ್ಯನಾರಾಯಣ.
ಹೊರ ರಾಜ್ಯದಿಂದ ಗಡಿಯಲ್ಲಿನ ಗ್ರಾಮಗಳಿಂದ ಕನ್ನಡ ಶಾಲೆಗೆ ಬರುವ ಮಕ್ಕಳು ಉತ್ಸಾಹದಿಂದ ಕನ್ನಡ ಕಲಿಯುತ್ತಿದ್ದಾರೆ ಅನ್ನುವುದು ಹೆಮ್ಮೆ ಸಂಗತಿಯಾಗಿದೆ. ಹೀಗಿರುವಾಗ ಮಕ್ಕಳ ಕಲಿಕೆಗೆ ಬೇಕಾದ ಪೂರಕ ವಾತಾವರಣ ನಿರ್ಮಾಣ ಮಾಡುವುದು ನಮ್ಮ ಗುರಿ. ಹಾಗಾಗಿ ಮಕ್ಕಳಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ನೀಡಲಾಗುತ್ತಿದೆ. – ಚಂದ್ರಕಲಾ, ಮಾಲೂರು ಕ್ಷೇತ್ರಶಿಕ್ಷಣಾಧಿಕಾರಿ
ಹೊರ ರಾಜ್ಯದಿಂದ ಗಡಿ ಗ್ರಾಮಗಳಿಂದ ಕನ್ನಡ ಶಾಲೆಗೆ ಮಕ್ಕಳು ಬಂದು ಕನ್ನಡ ಕಲಿಯುತ್ತಿದ್ದಾರೆ. ಶಾಲೆಗೆ ಉತ್ತಮ ವಾತಾವರಣ ನಿರ್ಮಾಣ ಮಾಡುವುದು ನಮ್ಮ ಗುರಿ. ಇಂಥ ಸಮಯದಲ್ಲಿ ಶಾಲೆಗೆ ಮೂಲ ಸೌಲಭ್ಯ ಗಳನ್ನು ಒದಗಿಸಿ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಬೇಕಿದೆ. – ಉಮಾಜಲಂದರ್, ದಿನ್ನಹಳ್ಳಿ ಗ್ರಾಪಂ ಅಧ್ಯಕ್ಷ
– ಎಂ.ಮೂರ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolara: ಹೈಕೋರ್ಟ್ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್ ಪಥಸಂಚಲನ
Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು
Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.