“ಕನ್ನಡಕ್ಕಾಗಿ ನಾವು’ ಗೀತೆ ಗಾಯನದಲ್ಲಿ 18 ಲಕ್ಷ ಮಂದಿ ಭಾಗಿ
Team Udayavani, Oct 29, 2021, 6:17 AM IST
ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಮೆಟ್ಟಿಲು, ಗ್ರಾಮಪಂಚಾಯತ್, ಶಾಲೆ, ಕಾಲೇಜು, ವಿಶ್ವವಿದ್ಯಾನಿಲಯ ಸಹಿತ ವಾಗಿ ನಾಡಿನಾದ್ಯಂತ ಸಚಿವರು, ಶಾಸಕರು, ಹಿರಿಯ ಅಧಿಕಾರಿಗಳು, ಕುಲಪತಿಗಳು, ವಿದ್ಯಾರ್ಥಿಗಳು, ಕಲಾವಿದರು ಹಾಗೂ ಸಾಮಾನ್ಯ ಜನರ ಕಂಠದಿಂದ ಕನ್ನಡ ಗೀತೆಗಳು ಮಾರ್ದನಿಸಿದೆ. ಇದರಲ್ಲಿ 18 ಲಕ್ಷಕ್ಕೂ ಅಧಿಕ ಮಂದಿ ಭಾಗಿಯಾಗಿದ್ದಾರೆ.
ವಿಧಾನಸೌಧದ ಮೆಟ್ಟಿಲುಗಳ ಮೇಲೆ ಬಣ್ಣಬಣ್ಣದ ಉಡುಗೆ ತೊಟ್ಟು 2 ಸಾವಿರಕ್ಕೂ ಅಧಿಕ ಅಧಿಕಾರಿ, ಸಿಬಂದಿ ವರ್ಗ, ಆರಕ್ಷಕ ಅಧಿಕಾರಿ ಗಳು, ಸಿಬಂದಿ ಜತೆಯಾಗಿ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ವಿ. ಸುನಿಲ್ ಕುಮಾರ್ “ಕನ್ನಡಕ್ಕಾಗಿ ನಾವು’ ಅಭಿಯಾನದ ಭಾಗವಾಗಿ ಲಕ್ಷಕಂಠ ಗಾಯನದಲ್ಲಿ ಪಾಲ್ಗೊಂಡಿದ್ದರು.
ವಿಶ್ವವಿಖ್ಯಾತ ಗೋಲ್ ಗುಂಬಜ್ ಮುಂಭಾಗದಲ್ಲಿ 50 ಕಲಾತಂಡಗÙ 250 ಕಲಾವಿದರು, ಮಂಡ್ಯದ ಸರ್‌ಎಂವಿ ಕ್ರೀಡಾಂಗಣದಲ್ಲಿ 3 ಸಾವಿರಕ್ಕೂ ಅಧಿಕ ಮಂದಿ, ಹಂಪಿಯ ಸ್ಮಾರಕಗಳ ಮುಂದೆ ಗಾಯನ ನಡೆದಿದೆ.
ಬೆಂಗಳೂರು ವಿಭಾಗದ 125 ಸ್ಥಳಗಳಲ್ಲಿ 1,61,232 ಮಂದಿ ಕನ್ನಡ ಗೀತೆಗಳಿಗೆ ದನಿಗೂಡಿಸಿದ್ದರು. ಮೈಸೂರು ವಿಭಾಗದ 96 ಸ್ಥಳಗಳಲ್ಲಿ 5,41,365 ಜನ ಸಾಮೂಹಿಕ ಗೀತೆ ಗಾಯನದಲ್ಲಿ ಪಾಲ್ಗೊಂಡಿದ್ದರು. ಬೆಳಗಾವಿ ವಿಭಾಗದ 105 ಸ್ಥಳಗಳಲ್ಲಿ 10,74,418 ಮಂದಿ ಕನ್ನಡ ಗೀತೆಗೆ ಧ್ವನಿಯಾಗಿದ್ದರು. ಕಲಬುರಗಿ ವಿಭಾಗದ 60 ಸ್ಥಳಗಳಲ್ಲಿ 77,125 ಮಂದಿ, ದಿಲ್ಲಿ, ಮುಂಬಯಿ, ಕಾಸರ ಗೋಡು ಮತ್ತು ಪುಣೆ ಸಹಿತವಾಗಿ ಹೊರರಾಜ್ಯಗಳ 31 ಸ್ಥಳಗಳಲ್ಲಿ 350 ಮಂದಿ ಗೀತಾ ಗಾಯನದ ಸಂಭ್ರಮದಲ್ಲಿ ಜತೆಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?
Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.