Karnataka 2nd PUC; ಗ್ರಾಮೀಣ ಭಾಗದಲ್ಲಿ ಒಂದೇ ಕಾಲೇಜಿದ್ದರೆ ಅಲ್ಲೇ ಪ್ರಾಯೋಗಿಕ ಪರೀಕ್ಷೆ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪರಿಷ್ಕೃತ ಸುತ್ತೋಲೆ
Team Udayavani, Oct 8, 2024, 6:40 AM IST
ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಏಕೈಕ ಪದವಿಪೂರ್ವ ಕಾಲೇಜು ಇದ್ದರೆ ಅಲ್ಲಿಯ ವಿದ್ಯಾರ್ಥಿಗಳಿಗೆ ಅಲ್ಲೇ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ಹೇಳಿದೆ.
ಈ ಬಾರಿ ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆಗಳನ್ನು ಯಾದೃಚ್ಛೀಕರಿಸಿ (ರ್‍ಯಾಂಡಮ್) ನಡೆಸುವ ಮತ್ತು ವಿದ್ಯಾರ್ಥಿಗಳಿಗೆ ತಾವು ಓದುತ್ತಿರುವ ಕಾಲೇಜಿನಲ್ಲಿ ಪ್ರಾಯೋಗಿಕ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಈ ಹಿಂದೆ ಹೊರಡಿ ಸಿದ್ದ ಸುತ್ತೋಲೆಗೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೆಎಸ್‌ಇಎಬಿಯು ಪರಿಷ್ಕೃತ ಸುತ್ತೋಲೆ ಹೊರಡಿಸಿದೆ. ಅದರಂತೆ ಗ್ರಾಮೀಣ ಭಾಗದಲ್ಲಿ ಒಂದೇ ಪಿಯು ಕಾಲೇಜು ಇದ್ದರೆ ಅದರ ವಿದ್ಯಾರ್ಥಿಗಳಿಗೆ ತಮ್ಮದೇ ಕಾಲೇಜಿನಲ್ಲಿ ಪ್ರಾಯೋಗಿಕ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
ಆದರೆ ಜಿಲ್ಲಾ ಮತ್ತು ತಾಲೂಕು ಕೇಂದ್ರದಲ್ಲಿರುವ ಪ್ರಾಯೋಗಿಕ ಪರೀಕ್ಷಾ ಕೇಂದ್ರಗಳ ವಿದ್ಯಾರ್ಥಿಗಳನ್ನು ಅಲ್ಲಿಗೆ ಸಮೀಪದ ಪರೀಕ್ಷಾ ಕೇಂದ್ರಗಳಿಗೆ ಸಂಯೋಜನೆ ಮಾಡುವಂತೆ ಸೂಚನೆ ನೀಡಲಾಗಿದೆ.
ಉಳಿದಂತೆ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳನ್ನು ಅಲ್ಲಿರುವ ಮೂಲಸೌಕರ್ಯ ಸಾಮರ್ಥ್ಯದ ಮೇಲೆ ಹಂಚಿಕೆ ಮಾಡಬೇಕು ಮತ್ತು ಆ ಕೇಂದ್ರದ ಎಲ್ಲ ವಿದ್ಯಾರ್ಥಿಗಳು ಬೇರೆ ಕಾಲೇಜಿನವರಾಗಿರುತ್ತಾರೆ ಎಂದು ಕೆಎಸ್‌ಇಎಬಿ ಮತ್ತೂಮ್ಮೆ ಸ್ಪಷ್ಟ ಪಡಿಸಿದೆ.
ಸಮೀಪದ ಕಾಲೇಜಿಗೆ ಸಂಯೋಜನೆ
ಪ್ರಾಯೋಗಿಕ ಪರೀಕ್ಷಾ ಕೇಂದ್ರಗಳಿಗೆ ಸಂಯೋಜನೆಯಾಗಿರುವ ಕಾಲೇಜುಗಳ ವಿದ್ಯಾರ್ಥಿಗಳು ಈಗಾಗಲೇ ತಮ್ಮದಲ್ಲದ ಪ್ರಯೋಗಾಲಯದಲ್ಲಿ ಪ್ರಾಯೋಗಿಕ ಪರೀಕ್ಷೆಗಳನ್ನು ಈ ಹಿಂದಿನಿಂದಲೂ ಉತ್ತರಿಸುತ್ತ ಬಂದಿದ್ದಾರೆ. ಆದ್ದರಿಂದ ಪ್ರಾಯೋಗಿಕ ಕೇಂದ್ರವಿರುವ ಕಾಲೇಜಿನ ವಿದ್ಯಾರ್ಥಿಗಳನ್ನು ಸಮೀಪದ ಕಾಲೇಜಿಗೆ ಸಂಯೋಜಿಸಬೇಕು. ಇದರಿಂದ ಹೊಸ ಪರೀಕ್ಷಾ ಕೇಂದ್ರದಲ್ಲಿ ಎಲ್ಲ ವಿದ್ಯಾರ್ಥಿಗಳು ಏಕರೂಪದ ವಾತಾವರಣದಲ್ಲಿ ಪರೀಕ್ಷೆ ಬರೆಯುವಂತೆ ಆಗುತ್ತದೆ ಎಂದು ಸೂಚನೆ ನೀಡಲಾಗಿದೆ.
ಸಂಯೋಜಿತ ಕಾಲೇಜಿನ ವಿದ್ಯಾರ್ಥಿಗಳಿಗೆ ಅವರ ಕಾಲೇಜಿನ ಉಪನ್ಯಾಸಕರು ಆಂತರಿಕ ಪರೀಕ್ಷಕರಾಗಿರುತ್ತಾರೆ. ಆದ್ದರಿಂದ ಹೊಸ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಆತಂಕ ಉಂಟಾಗದಂತೆ ಉಪನ್ಯಾಸಕರು ಗಮನ ಹರಿಸಬೇಕು.
ಪ್ರಾಯೋಗಿಕ ಪರೀಕ್ಷಾ ಕೇಂದ್ರವಾಗಿರುವ ಕಾಲೇಜುಗಳಲ್ಲಿ ಪ್ರಯೋಗಾಲಯಗಳನ್ನು ಸುಸಜ್ಜಿತವಾಗಿಡಬೇಕು. ಈ ಸಂಬಂಧ ಈಗಿನಿಂದಲೇ ಪ್ರಾಂಶುಪಾಲರು ಕಾರ್ಯಪ್ರವೃತ್ತರಾಗಬೇಕು ಎಂದು ಸೂಚಿಸಲಾಗಿದ್ದು, ಪ್ರಯೋಗದ ಉಪಕರಣಗಳು ಮತ್ತು ಮೂಲ ಸೌಕರ್ಯ ಒದಗಿಸುವ ಸಂಪೂರ್ಣ ಜವಾಬ್ದಾರಿಯನ್ನು ಪ್ರಾಂಶುಪಾಲರ ಹೆಗಲಿಗೆ ಹೊರಿಸಲಾಗಿದೆ. ಪ್ರಾಯೋಗಿಕ ಪರೀಕ್ಷೆಗೆ ವಿದ್ಯಾರ್ಥಿಯು ಉತ್ತರಿಸುವ ಪ್ರತೀ ವಿಷಯಕ್ಕೆ 9.60 ರೂ. ವೆಚ್ಚವನ್ನು ಮಂಡಳಿ ವತಿಯಿಂದ ಭರಿಸಲಾಗುತ್ತದೆ. ಆದ್ದರಿಂದ ಪ್ರಯೋಗಾಲಯಗಳಿಗೆ ಬೇಕಾಗುವ ಪರಿಕರಗಳನ್ನು ಈ ಮೊತ್ತದಿಂದ ಖರೀದಿಸಬಹುದು ಎಂದು ಕೆಎಸ್‌ಇಎಬಿ ಸೂಚನೆ ನೀಡಿದೆ.
ಉಪನ್ಯಾಸಕರ ಕಡ್ಡಾಯ ನೋಂದಣಿ
ಪ್ರತೀ ಉಪನ್ಯಾಸಕರು ಗರಿಷ್ಠ 4 ದಿನ ಮಾತ್ರ ಆಂತರಿಕ ಪರೀಕ್ಷಕರಾಗಿ ಕಾರ್ಯ ನಿರ್ವಹಿಸಲು ಅವಕಾಶವಿರುತ್ತದೆ. ಈಗಾಗಲೇ ಉಪನ್ಯಾಸಕರ ನೋಂದಣಿಗೆ ಪಿಯು ಎಕ್ಸಾಂ ಪೋರ್ಟಲ್‌ನಲ್ಲಿ ಲಾಗಿನ್ ಚಾಲ್ತಿಯಲ್ಲಿದ್ದು, ಉಪನ್ಯಾಸಕರು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿಯಾಗದ ಉಪನ್ಯಾಸಕರು ಪ್ರಾಯೋಗಿಕ ಪರೀಕ್ಷೆಗಳಲ್ಲಿ ಕಾರ್ಯ ನಿರ್ವಹಿಸಲು ಅವಕಾಶವಿಲ್ಲ ಎಂದು ಮಂಡಳಿಯ ಅಧ್ಯಕ್ಷರು ತಮ್ಮ ಪರಿಷ್ಕೃತ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.