Karnataka; ಇಂದು ಕೋವಿಡ್ ಗೆ 4 ಮೃತ್ಯು:298 ಹೊಸ ಪ್ರಕರಣಗಳು ವರದಿ
Team Udayavani, Jan 4, 2024, 7:30 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 298 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ನಾಲ್ವರು ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. 229 ಮಂದಿ ಇಂದು ಗುಣಮುಖರಾಗಿ ಬಿಡುಗಡೆಯಾಗಿದ್ದು ಒಟ್ಟು 1240 ಮಂದಿ ಸಕ್ರಿಯ ಸೋಂಕಿತರಿದ್ದಾರೆ ಎಂದು ಗುರುವಾರ(ಡಿ. 4) ಸಂಜೆ ಆರೋಗ್ಯ ಇಲಾಖೆ ವರದಿ ಮಾಡಿದೆ.
ಬೆಂಗಳೂರು ನಗರದಲ್ಲಿ ಇಬ್ಬರು ಸೋಂಕಿತರು ಮತ್ತು ಧಾರವಾಡ , ಮೈಸೂರಿನಲ್ಲಿ ತಲಾ ಒಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.
1240 ಮಂದಿ ಸೋಂಕಿತರ ಪೈಕಿ 1168 ಮಂದಿ ಮನೆಗಳಲ್ಲಿಯೇ ಐಸೋಲೇಶನ್ ಆಗಿದ್ದಾರೆ. ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಪೈಕಿ 12 ಮಂದಿ ಐಸಿಯುನಲ್ಲಿದ್ದಾರೆ. ಕಳೆದ 24 ಗಂಟೆಗಳಲ್ಲಿ 7791 ಮಂದಿಗೆ ಪರೀಕ್ಷೆ ನಡೆಸಲಾಗಿದೆ. ಅತೀ ಹೆಚ್ಚು 172 ಸಕ್ರಿಯ ಪ್ರಕರಣಗಳು ಬೆಂಗಳೂರು ನಗರದಲ್ಲಿವೆ.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ ಗಮನದಲ್ಲಿಟ್ಟುಕೊಂಡು, ಸಕಾರಾತ್ಮಕ ಪ್ರಕರಣಗಳ ರೋಗಲಕ್ಷಣದ ಸಂಪರ್ಕವಿದ್ದವರನ್ನು ಪರೀಕ್ಷೆಗೊಳಪಡಿಸುವುದು, ಟೆಲಿ ಐಸಿಯು ಬಳಕೆ ಮತ್ತು ಸೋಂಕಿನಿಂದಾಗಿ ಸಾವನ್ನಪ್ಪಿದವರ ಲೆಕ್ಕವಿಟ್ಟುಕೊಳ್ಳುವುದು ಮುಂತಾದ ಕ್ರಮಗಳನ್ನು ಅಳವಡಿಸಿಕೊಳ್ಳುವಂತೆ ರಾಜ್ಯ ಸರಕಾರ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.