Karnataka; 5,949 ಗ್ರಾಮ ಪಂಚಾಯತ್‌ಗಳಿಗೆ 448 ಕೋಟಿ ರೂ. ಅನುದಾನ
Team Udayavani, Nov 23, 2024, 6:30 AM IST
ಹೊಸದಿಲ್ಲಿ: ಕರ್ನಾಟಕದ 5,949 ಗ್ರಾಮ ಪಂಚಾಯತ್‌ಗಳಿಗೆ 15ನೇ ಹಣಕಾಸು ಆಯೋಗ ಅನುದಾನವನ್ನು ಬಿಡುಗಡೆ ಮಾಡಿದೆ. ಮೊದಲ ಕಂತಿನಲ್ಲಿ 448.29 ಕೋಟಿ ರೂ.ಗಳನ್ನು ಬಿಡಗಡೆ ಮಾಡಲಾಗಿದೆ ಎಂದು ಕೇಂದ್ರ ಪಂಚಾಯತ್ ರಾಜ್ ಸಚಿವಾಲಯ ಹೇಳಿದೆ.
ವೇತನ ಮತ್ತು ಸ್ಥಾಪನ ವೆಚ್ಚಗಳಿಗೆ ಬಳಸದೆ ಸ್ಥಳೀಯ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಗ್ರಾಮ ಪಂಚಾಯತ್‌ಗಳು ಬಳಕೆ ಮಾಡಿಕೊಳ್ಳಬಹುದು. ಬಯಲು ಶೌಚ ಮಕ್ತ ಆಂದೋಲನ, ಸ್ವಚ್ಛತೆ, ಕಸ ಸಂಗ್ರಹಣೆ, ಕುಡಿಯುವ ನೀರು ಪೂರೈಕೆ, ಮಳೆ ನೀರು ಕೊಯ್ಲು, ನೀರಿನ ಮರುಬಳಕೆ ಕಾರ್ಯಕ್ರಮಗಳಿಗೆ ಈ ಹಣವನ್ನು ಬಳಕೆ ಮಾಡಿಕೊಳ್ಳಬಹುದು ಎಂದು ಸಚಿವಾಲಯ ತಿಳಿಸಿದೆ.
ಗ್ರಾಮ ಪಂಚಾಯತ್‌ಗಳನ್ನು ಮತ್ತಷ್ಟು ಬಲಪಡಿಸಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರಕಾರವು 15ನೇ ಹಣಕಾಸು ಆಯೋಗದ ಅನುದಾನವನ್ನು ಬಿಡುಗಡೆ ಮಾಡಿದೆ. ಇದು ಸ್ಥಳೀಯ ಸರಕಾರಗಳು ಮತ್ತಷ್ಟು ಪರಿಣಾಮಕಾರಿಯಾಗಿ, ಜವಾಬ್ದಾರಿಯುತವಾಗಿ, ಸ್ವತಂತ್ರ ವಾಗಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡುತ್ತದೆ ಎಂದು ಸಚಿವಾಲಯ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.