1 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಕರ್ನಾಟಕ: ಸಿಎಂ ಬೊಮ್ಮಾಯಿ
ಮೇಲ್ವಿಚಾರಣೆಗೆ ಮುಖ್ಯ ಕಾರ್ಯದರ್ಶಿ ನೇತೃತ್ವದ ಗುಂಪು ರಚನೆ
Team Udayavani, Oct 19, 2022, 10:32 AM IST
ಬೆಂಗಳೂರು: ಭಾರತದ 5 ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಕರ್ನಾಟಕ ರಾಜ್ಯದ 1 ಟ್ರಿಲಿಯನ್ ಡಾಲರ್ ಕೊಡುಗೆಯ ಗುರಿಯನ್ನು ರಾಜ್ಯ ಸರ್ಕಾರ ಹೊಂದಿದ್ದು, ಸರ್ಕಾರದ ಮುಖ್ಯ ಕಾರ್ಯದರ್ಶಿ, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮೋಹನ್ ದಾಸ್ ಪೈ, FICCI ಮತ್ತು ಮೆಕೆನ್ಸಿಯ ಪ್ರತಿನಿಧಿಗಳನ್ನು ಒಳಗೊಂಡ ಗುಂಪು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಯೋಜನಾ ಇಲಾಖೆಯ ಕರ್ನಾಟಕ ಆರ್ಥಿಕ ಸಮೀಕ್ಷೆ 2021-22 ರ ಆಧಾರದ ಮೇಲೆ ಹೆಚ್ಚಿನ ವಿಶ್ಲೇಷಣೆಯೊಂದಿಗೆ ಮೋಹನ್ ದಾಸ್ ಪೈ ಮತ್ತು ನಿಶಾ ಹೊಳ್ಳ ಅವರು ರಚಿಸಿರುವ “Karnataka: A $1 Trillion GDP Vision” ಎಂಬ ವರದಿಯನ್ನು ಬಿಡುಗಡೆ ಮಾಡಿ ಮಾತನಾಡಿದರು.
2025ರ ವೇಳೆಗೆ 1 ಟ್ರಿಲಿಯನ್ ಯುಎಸ್ ಡಾಲರ್ ಆರ್ಥಿಕತೆಯನ್ನು ಸಾಧಿಸುವ ಗುರಿಯೊಂದಿಗೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವುದು, ಮೇಲ್ವಿಚಾರಣೆ ಮಾಡುವುದು ಮತ್ತು ಮೌಲ್ಯಮಾಪನವನ್ನು ಈ ಗುಂಪು ಮಾಡಲಿದೆ. ಈ ಕ್ರಿಯಾ ಯೋಜನೆಯ ಪ್ರಗತಿಯ ಮೇಲ್ವಿಚಾರಣೆಯನ್ನು ಇದರ ಮೇಲ್ವಿಚಾರಣೆಗೆ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿಮಾಡಲಾಗುವುದು ಎಂದು ಅವರು ತಿಳಿಸಿದರು.
ಫಲಿತಾಂಶ ಆಧಾರಿತ ಉದ್ದೇಶಿತ ಬಜೆಟ್ಗೆ ಅನುಕೂಲವಾಗುವಂತೆ ಡಿಸೆಂಬರ್ 2022 ರೊಳಗೆ ಕ್ರಿಯಾ ಯೋಜನೆ ಸಿದ್ಧವಾಗಲಿದೆ. ಕರ್ನಾಟಕದಿಂದ ಒಂದು ಟ್ರಿಲಿಯನ್ USD ಕೊಡುಗೆಯೊಂದಿಗೆ 5 ಟ್ರಿಲಿಯನ್ ಭಾರತದ ಗುರಿಯೊಂದಿಗೆ ನಾವು ಹೊಂದಿಕೊಳ್ಳಬೇಕು.
ಬೆಳವಣಿಗೆಯ ದರಗಳನ್ನು ಹೆಚ್ಚಿಸಲು ಮಂಗಳೂರು ಬಂದರು ವಿಸ್ತರಣೆಗಾಗಿ ಅಗಾಧ ಸಂಭಾವ್ಯತೆಯನ್ನು ಪರಿಗಣಿಸಿ ಕರಾವಳಿ ಕಾರಿಡಾರ್ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವುದರ ಮೂಲಕ ರಫ್ತನ್ನು ಹೆಚ್ಚಿಸಬಹುದಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಮೂಲಸೌಕರ್ಯ ಅಭಿವೃದ್ಧಿಯನ್ನು ಉತ್ತೇಜಿಸಲು ಮೂಲಸೌಕರ್ಯ ವೆಚ್ಚವನ್ನು ಕಡಿಮೆ ಮಾಡುವ ಅಗತ್ಯವಿದೆ. ಜೊತೆಗೆ ಅಭಿವೃದ್ಧಿಯನ್ನು ಉತ್ತೇಜಿಸಲು ಜನರ ಆರ್ಥಿಕ ಸಾಮರ್ಥ್ಯಗಳನ್ನು ಹೆಚ್ಚಿಸಬೇಕಾಗಿದೆ. ಕೈಗಾರಿಕಾ, ಕೃಷಿ ಮತ್ತು ಸೇವಾ ಕ್ಷೇತ್ರಗಳಲ್ಲಿ ಉದ್ಯೋಗ ಮತ್ತು ಬೆಳವಣಿಗೆಯನ್ನು ಉತ್ತೇಜಿಸಲು ಕೈಗಾರಿಕಾ ವಲಯದ ಸಾಮರ್ಥ್ಯವನ್ನು ಹೆಚ್ಚಿಸುವುದರ ಮೂಲಕ ಕೃಷಿ ಮತ್ತು ಸೇವಾ ವಲಯದ ಬೆಳವಣಿಗೆಯನ್ನು ಕಾಣಬಹುದಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕೈಗಾರಿಕೆ ಮತ್ತು ಖಾಸಗಿ ವಲಯಗಳೆರಡೂ ಬೆಳವಣಿಗೆಯ ವೇಗವನ್ನು ಹೆಚ್ಚಿಸಲು ಪರಿಹಾರಗಳನ್ನು ಕಂಡುಹಿಡಿಯಬೇಕು ಎಂದು ಸಲಹೆ ಮಾಡಿದರು. ಕ್ರಿಯಾ ಯೋಜನೆಯು ಈ ಎಲ್ಲ ಅಂಶಗಳನ್ನು ಒಳಗೊಂಡಿರಬೇಕು ಎಂದು ಸೂಚಿಸಿದರು.
ಕಾರ್ಯಕ್ರಮದಲ್ಲಿ ಕೃತಿಯ ಲೇಖಕರಾದ ಟಿ.ವಿ. ಮೋಹನ್ದಾಸ್ ಪೈ, ನಿಶಾ ಹೊಳ್ಳ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
MUST WATCH
ಹೊಸ ಸೇರ್ಪಡೆ
Director Guruprasad: ಗುರುಪ್ರಸಾದ್‌ಗೆ ಸಾಲ ಕೊಟ್ಟವರ ತನಿಖೆಗೆ ಸಿದ್ಧತೆ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Sandalwood: ಕರಾವಳಿ ಸಂಸ್ಕೃತಿ ಸುತ್ತ ದಿಂಸೋಲ್
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್‌ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.